ಜಾನುವಾರುಗಳಿಗೆ 63 ಲಕ್ಷ ಟನ್‌ ಮೇವು ದಾಸ್ತಾನು

Team Udayavani, May 1, 2019, 3:00 AM IST

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ 63.66 ಲಕ್ಷ ಟನ್‌ ಮೇವು ದಾಸ್ತಾನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ಎ. ಮಲ್ಲಿಕಾರ್ಜುನ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವೀರಪ್ಪ ಹಾಗೂ ನ್ಯಾ.ಆರ್‌.ದೇವದಾಸ್‌ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.

“ರಾಜ್ಯದಲ್ಲಿ ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆ ಆಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ರಾಜ್ಯದಲ್ಲಿ ಒಟ್ಟು 1.29 ಕೋಟಿಗೂ ಅಧಿಕ ಜಾನುವಾರುಗಳಿವೆ. ಅವುಗಳಿಗಾಗಿ 63.34 ಲಕ್ಷ ಟನ್‌ ಮೇವು ದಾಸ್ತಾನು ಮಾಡಿಕೊಳ್ಳಲಾಗಿದೆ.

ಮುಖ್ಯವಾಗಿ ಬಳ್ಳಾರಿ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ 11 ಗೋಶಾಲೆಗಳನ್ನು ತೆರೆಯಲಾಗಿದ್ದು, ಅಲ್ಲಿ 10,740 ಜಾನುವಾರುಗಳಿವೆ. ಅವುಗಳಿಗೆ 668 ಟನ್‌ ಮೇವು ಖರೀದಿಸಲಾಗಿದ್ದು, ಅದರಲ್ಲಿ 270 ಟನ್‌ ಮೇವು ಬಳಕೆ ಮಾಡಿಕೊಳ್ಳಲಾಗಿದೆ.

ಇನ್ನೂ 399 ಟನ್‌ ಮೇವು ದಾಸ್ತಾನು ಇದೆ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಸರ್ಕಾರದ ಈ ಪ್ರಮಾಣಪತ್ರವನ್ನು ದಾಖಲಿಸಿಕೊಂಡ ನ್ಯಾಯಪೀಠ, ಈ ಕುರಿತು ಉತ್ತರ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಮೇ 3ಕ್ಕೆ ಮುಂದೂಡಿತು.

ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಎನ್‌.ಪಿ.ಅಮೃತೇಶ್‌, ಬರ ಮತ್ತು ಬೇಸಿಗೆ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಪರಿಸ್ಥಿತಿ ಗಂಭೀರವಾಗಿದೆ. ಅವುಗಳಿಗೆ ತಿನ್ನಲು ಮೇವಿಲ್ಲ, ಕುಡಿಯಲು ನೀರಿಲ್ಲದೆ ಸಾಯುವ ಹಂತ ತಲುಪಿವೆ.

ರಾಜ್ಯ ಸರ್ಕಾರ ಜಾನುವಾರಗಳ ಸಂರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಸರ್ಕಾರಕ್ಕೆ ಈ ಸಂಬಂಧ ಸೂಕ್ತ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಅಲ್ಲದೆ, ರಾಜ್ಯದ ಪ್ರತಿಯೊಂದು ತಾಲೂಕಿನಲ್ಲೂ ಗೋಶಾಲೆ ತೆರೆದು ಜಾನುವಾರುಗಳಿಗೆ ಅಗತ್ಯ ಮೇವು, ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅರ್ಜಿಯಲ್ಲಿ ಕೋರಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

  • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

  • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

  • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

  • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...