ಕೆಎಎಸ್‌ ಮುಖ್ಯ ಪರೀಕ್ಷೆಗೆ 866 ಅಭ್ಯರ್ಥಿಗಳು ಗೈರುಹಾಜರು!


Team Udayavani, Dec 17, 2017, 4:47 PM IST

blore-6.jpg

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2015ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದ ಒಟ್ಟು ಅಭ್ಯರ್ಥಿಗಳ ಪೈಕಿ ಶನಿವಾರ ನಡೆದ ಮುಖ್ಯ ಪರೀಕ್ಷೆಗೆ ಗೈರು ಹಾಜರಾಗುವ ಮೂಲಕ ಸುಮಾರು 800 ಅಭ್ಯರ್ಥಿಗಳು ತಮಗೇ ತಾವೇ ಅನರ್ಹತೆಯ “ಷರಾ’ ಬರೆದುಕೊಂಡಿದ್ದಾರೆ.

ಹೌದು! 2015ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಎ ಮತ್ತು ಬಿ ಗ್ರೂಪ್‌ನ 428 ಹುದ್ದೆಗಳ ನೇಮಕಾತಿಗೆ ಶನಿವಾರದಿಂದ ಮುಖ್ಯ ಪರೀಕ್ಷೆ ಆರಂಭವಾಗಿದೆ. ಮೊದಲ ದಿನ ನಡೆದ ಕಡ್ಡಾಯ ಕನ್ನಡ ಹಾಗೂ ಕಡ್ಡಾಯ ಇಂಗ್ಲಿಷ್‌ ವಿಷಯದ ಪರೀಕ್ಷೆ ನಡೆದಿದ್ದು, ಇದರಲ್ಲಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದ ಒಟ್ಟು 8 ಸಾವಿರ ಅಭ್ಯರ್ಥಿಗಳ ಪೈಕಿ 866 ಮಂದಿ ಗೈರು ಹಾಜರಾಗಿದ್ದರು.

ಫ‌ಲಿತಾಂಶ ಅಪ್ರಕಟ: ಕಡ್ಡಾಯ ಕನ್ನಡ, ಇಂಗ್ಲಿಷ್‌ ಪತ್ರಿಕೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಉತ್ತೀರ್ಣರಾಗಲೇಬೇಕು. ಶನಿವಾರದ ಪರೀಕ್ಷೆಗೆ ಗೈರು ಹಾಜರಾದವರು ಮುಂದಿನ ಪರೀಕ್ಷೆ ಬರೆಯಬಹುದು ಆದರೆ, ಉಳಿದ ವಿಷಯಗಳಲ್ಲಿ ಎಷ್ಟೇ ಅಂಕಗಳನ್ನು ಪಡೆದುಕೊಂಡಿರೂ, ಅರ್ಹತಾ ಕಡ್ಡಾಯ ಪರೀಕ್ಷೆಗೆ ಗೈರು ಹಾಜರಾದರೆ, ಅಥವಾ ಅನುತ್ತೀರ್ಣರಾದರೆ ಅಂತಹ ಅಭ್ಯರ್ಥಿಗಳ ಅಂತಿಮ ಫ‌ಲಿತಾಂಶ ಪ್ರಕಟಿಸಲಾಗುವುದಿಲ್ಲ. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯ ತಲಾ 150 ಅಂಕಗಳ ಪರೀಕ್ಷೆಯಲ್ಲಿ ಶೇ.52.5ರಷ್ಟು ಅಂಕಗಳು ಪಡದರೆ ಮಾತ್ರ, ಅಂತಹ ಅಭ್ಯರ್ಥಿಗಳ ಅಂತಿಮ ಫ‌ಲಿತಾಂಶ ಪ್ರಕಟಿಸಲಾಗುತ್ತದೆ. ಆದರೆ, ಅರ್ಹತಾ ಕಡ್ಡಾಯ ಪರೀಕ್ಷೆಯ ಅಂಕಗಳು ಮುಂದಿನ ಸಂದರ್ಶನ ಅಥವಾ ನೇಮಕಾತಿ ಪ್ರಕ್ರಿಯೆಗೆ ಪರಿಗಣಿಸಲ್ಪಡುವುದಿಲ್ಲ. 

ಗೈರಾದವರ ಸಂಖ್ಯೆ: ಬೆಂಗಳೂರು ಹಾಗೂ ಹುಬ್ಬಳ್ಳಿಯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಬೆಂಗಳೂರು ಕೇಂದ್ರದಲ್ಲಿ ನಡೆದ ಪರೀಕ್ಷೆಗೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದ 5,328ಗಳ ಪೈಕಿ 4,736 ಅಭ್ಯರ್ಥಿಗಳು ಹಾಜರಾಗಿದ್ದು, 565 ಅಭ್ಯರ್ಥಿಗಳು ಗೈರು
ಹಾಜರಾಗಿದ್ದರು. ಅದೇ ರೀತಿ ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಗೆ ಅರ್ಹತೆ ಪಡೆದಿದ್ದ 2,685 ಅಭ್ಯರ್ಥಿಗಳ ಪೈಕಿ 2,384 ಅಭ್ಯರ್ಥಿಗಳು ಹಾಜರಾಗಿ, 301 ಅಭ್ಯರ್ಥಿಗಳು ಗೈರಾಗಿದ್ದರು. ಈ ರೀತಿ ಎರಡೂ ಪರೀಕ್ಷಾ ಕೇಂದ್ರಗಳಲ್ಲಿ 8 ಸಾವಿರ ಆಭ್ಯರ್ಥಿಗಳಲ್ಲಿ 866 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

ಪರೀಕ್ಷೆ: ಡಿ.17 ಪ್ರಬಂಧ, ಡಿ.19ಕ್ಕೆ ಸಾಮಾನ್ಯ ಅಧ್ಯಯನ ಪತ್ರಿಕೆ 1 ಮತ್ತು 2, ಡಿ.21 ರಂದು ಸಾಮಾನ್ಯ ಅಧ್ಯಯನ ಪತ್ರಿಕೆ 2 ಮತ್ತು 4 ಹಾಗೂ ಡಿ.23ರಂದು ಐಚ್ಛಿಕ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ಅಧಿಕಾರಿಗಳು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ. ಅಂಧ ಅಭ್ಯರ್ಥಿಗಳಿಗೆ ನಿರಾಸೆ: ಪರೀಕ್ಷೆಯ ಒಟ್ಟು ಅವಧಿಯಲ್ಲಿ ಈ ಮೊದಲು ಅಂಧ ಮತ್ತು ದೃಷ್ಟಿ ಮಾಂದ್ಯ ಅಭ್ಯರ್ಥಿಗಳಿಗೆ ಪ್ರತಿ ಗಂಟೆಗೆ 10 ನಿಮಿಷ ಹೆಚ್ಚುವರಿ ಕಾಲಾವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ 20 ನಿಮಿಷ ನೀಡುವುದಾಗಿ ಕೆಪಿಎಸ್‌ಸಿ ಹೇಳಿತ್ತು. ಕೊನೆ ಕ್ಷಣದಲ್ಲಿ 20ರ ಬದಲು 10 ನಿಮಿಷವಷ್ಟೇ ಹೆಚ್ಚುವರಿ ಕಾಲಾವಕಾಶ ಸಿಕ್ಕಿದ್ದಕ್ಕೆ ಅಭ್ಯರ್ಥಿಗಳಲ್ಲಿ ಬೇಸರ ಕಂಡು ಬಂತು.

428 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆದ ಬಳಿಕ 1:20ರ ಅನುಪಾತದಲ್ಲಿ ಒಟ್ಟು 237 ಅಂಧ ಹಾಗೂ ದೃಷ್ಟಿ ಮಾಂದ್ಯ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದರು. ಈ ಪೈಕಿ 29 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಿಲ್ಲ. ವೈದ್ಯಕೀಯ ಹಾಗೂ ತಾಂತ್ರಿಕ ಕಾರಣಗಳಿಂದಾಗಿ 23 ಅಭ್ಯರ್ಥಿಗಳ ಅರ್ಜಿ ತಿರಸ್ಕೃತವಾಯಿತು. ಉಳಿದ 185 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 75 ಅಭ್ಯರ್ಥಿಗಳಿಗೆ ಸ್ವತಃ ಕರ್ನಾಟಕ ಲೋಕಸೇವಾ ಆಯೋಗದಿಂದ ಪರೀಕ್ಷಾ ಸಹಾಯಕರನ್ನು ನೀಡಲಾಗಿದೆ. ಉಳಿದವರು ಅವರೇ ಸಹಾಯಕರನ್ನು ಆಯ್ಕೆ ಮಾಡಿಕೊಂಡಿದ್ದಾರೆ. 20 ನಿಮಿಷ
ಹೆಚ್ಚುವರಿ ಕಾಲಾವಕಾಶ ಸಿಗದೇ ಇರುವುದರಿಂದ ಅಭ್ಯರ್ಥಿಗಳಲ್ಲಿ ಬೇಸರಗೊಂಡಿಲ್ಲ ಎಂದು ಕೆಪಿಎಸ್‌ಸಿ ಅಧಿಕಾರಿಗಳು ವಿವರಣೆ ನೀಡುತ್ತಾರೆ. 

ಶನಿವಾರ ನಡೆದ ಕಡ್ಡಾಯ ಕನ್ನಡ ಹಾಗೂ ಕಡ್ಡಾಯ ಇಂಗ್ಲಿಷ್‌ ಪರೀಕ್ಷೆಗೆ 866 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಈ ಕಡ್ಡಾಯ
ಅರ್ಹತಾ ಪರೀಕ್ಷೆಗೆ ಗೈರು ಹಾಜರಾದ ಅಭ್ಯರ್ಥಿಗಳು ಮುಂದಿನ ಪರೀಕ್ಷೆಗಳಿಗೆ ಹಾಜರಾಗಬಹುದು. ಆದರೆ, ಅಂತಿಮ ಫ‌ಲಿತಾಂಶದ ವೇಳೆ ಆ ಆಭ್ಯರ್ಥಿಗಳ ಫ‌ಲಿತಾಂಶ ಪ್ರಕಟಿಸಲಾಗುವುದಿಲ್ಲ.
 ●ಎನ್‌.ಎಸ್‌. ಪ್ರಸನ್ನಕುಮಾರ್‌, ಕೆಪಿಎಸ್‌ಸಿ ಕಾರ್ಯದರ್ಶಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.