93 ಸ್ಯಾನಿಟರಿ ಪ್ಯಾಡ್‌ ದಹನಯಂತ್ರ?

ನಗರ ಜಿಪಂನಿಂದ ಹೊಸ ಚಿಂತನೆ | ಬಾಲಕಿಯರ ವಸತಿ ನಿಲಯಗಳಲ್ಲಿ ಸ್ಥಾಪನೆ

Team Udayavani, Oct 19, 2020, 12:36 PM IST

bng-tdy-3

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ 93 ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ “ಸ್ಯಾನಿಟರಿ ಪ್ಯಾಡ್‌ಗಳ ದಹನ ಯಂತ್ರ’ ಅಳಡಿಕೆಗೆ ಚಿಂತನೆ ನಡೆಸಿದೆ.

ಪ್ರಯೋಗಿಕವಾಗಿ ಮುಂದಿನ ದಿನಗಳಲ್ಲಿ ಕೆಲವು ಗ್ರಾಪಂ ವ್ಯಾಪ್ತಿಯ ಪ್ರೌಢಶಾಲೆ ಮತ್ತುಬಾಲಕಿಯರ ವಸತಿ ನಿಲಯಗಳಲ್ಲಿ ಪ್ಯಾಡ್‌ ಗಳ ದಹನ ಯಂತ್ರ ಅಳವಡಿಕೆ ಪ್ರಕ್ರಿಯೆಗಳು ನಡೆಯಲಿದೆ. ಈ ಸಂಬಂಧ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯ ಹಿರಿಯ ಅಧಿಕಾರಿಗಳೂ ಕೂಡ ಸ್ಯಾನಿಟರಿ ಪ್ಯಾಡ್‌ ಬರ್ನಿಂಗ್‌ ಯಂತ್ರಗಳ ಕಂಪನಿಯೊಂದಿಗೆ ಮಾತುಕತೆ ನಡೆಸಿದ್ದಾರೆ.

ಪ್ರಾಯೋಗಿಕ ಹಂತದಲ್ಲಿ ಯಶಸ್ಸು ದೊರೆತರೆ ಮುಂದಿನ ದಿನಗಳಲ್ಲಿ ಮತ್ತಷ್ಟು ವಿಸ್ತರಣೆ ಮಾಡುವ ಆಲೋಚನೆಯನ್ನು ನಗರ ಜಿಪಂ ಸ್ವಚ್‌f ಭಾರತ್‌ ಮಿಷನ್‌ ಯೋಜನೆಯ ಅಧಿಕಾರಿಗಳು ಹೊಂದಿದ್ದಾರೆ. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಈಗಾಗಲೇ ಋತುಚಕ್ರ ನೈರ್ಮಲ್ಯದ ಕುರಿತಂತೆ ಗ್ರಾಪಂ ಮಟ್ಟದಲ್ಲಿ ಅರಿವಿನ ಕಾರ್ಯಕ್ರಮ ನಡೆಸಿದ್ದು ಹದಿಹರೆಯದವರ ಆರೋಗ್ಯದ ದೃಷ್ಟಿಯಿಂದ ನೈರ್ಮಲ್ಯ ಕಾರ್ಯಕ್ರಮಗಳನ್ನೂ ರೂಪಿಸಿದೆ.

ಘನ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ ಬರ್ನಿಂಗ್‌ ಯಂತ್ರ: ನಗರ ಜಿಲ್ಲಾಡಳಿತ ಈಗಾಗಲೇ ಯಲಹಂಕ ತಾಲೂಕಿನ ಸಿಂಗನಾಯಕನ ಹಳ್ಳಿ, ರಾಜಾನುಕುಂಟೆ, ದೊಡ್ಡಜಾಲ ಹಾಗೂ ಅನೇಕಲ್‌ ತಾಲೂಕಿನ ಶಾಂತಿಪುರ ಗ್ರಾಪಂಗಳಲ್ಲಿ ಘನ ತ್ಯಾಜ್ಯ ನಿರ್ಹಣಾ ಘಟಕಗಳನ್ನು ಸ್ಥಾಪಿಸಿದೆ. ಈ ಘಟಕಗಳಲ್ಲಿ ಬಳಕೆ ಮಾಡಿದ ಸ್ಯಾನಿಟರಿ ಪ್ಯಾಡ್‌ಗಳನ್ನು ವೈಜ್ಞಾನಿಕ ರೀತಿಯಲ್ಲಿ ದಹನ ಮಾಡುವ ಪ್ರಕ್ರಿಯೆ ನಡೆದಿದೆ.

ಈಗಾಗಲೇ ದಹನ ಯಂತ್ರಗಳನ್ನೂ ಅಲ್ಲಿ ಅಳವಡಿಕೆ ಮಾಡಲಾಗಿದೆ. ಪ್ರತಿ ದಿನಸುಮಾರು 200 ರಿಂದ 500 ಬಳಕೆ ಮಾಡಿದ ಸ್ಯಾನಿಟರಿ ಪ್ಯಾಡ್‌ಗಳು ದೊರೆಯುತ್ತಿವೆ. ಜತೆಗೆ ಅವುಗಳನ್ನು ವಿಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವುದರ ಬಗ್ಗೆ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದು ನಗರ ಜಿಲ್ಲಾಡಳಿತದ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಇನ್ನೂ ಕೆಲವು ಗ್ರಾಪಂನಲ್ಲಿ ಘನ ತ್ಯಾಜ್ಯ ನಿರ್ವಹಣೆ ಘಟಕಗಳನ್ನು ನಿರ್ಮಿಸುವ ಗುರಿಯಿದೆ. ಆ ಘಟಕಗಳಲ್ಲೂ ಪ್ಯಾಡ್‌ ಬರ್ನಿಂಗ್‌ಯಂತ್ರಗಳನ್ನು ಅಳವಡಿಕೆ ಮಾಡುವ ಆಲೋಚನೆ ಇದೆ ಎಂದು ಹೇಳಿದ್ದಾರೆ.

ಅರಿವು ಮೂಡಿಸುವಕಾರ್ಯಕ್ರಮ :  ಋತುಚಕ್ರ ನೈರ್ಮಲ್ಯ ಸಪ್ತಾಹದಂದು ನಗರ ಜಿಲ್ಲಾಡಳಿತ ಹೆಣ್ಣು ಮಕ್ಕಳಲ್ಲಿ ಮತ್ತು ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಜತೆಗೆ ಋತುಸ್ರಾವದ ಬಗೆಗಿನ ತಪ್ಪು ಕಲ್ಪನೆ ಹೋಗಲಾಡಿಸುವ ಸಂಬಂಧ ಜಾಗೃತಿ ಮೂಡಿಸಿತ್ತು. ಹಾಗೆಯೇ ತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮವನ್ನೂ ರೂಪಿಸಿತ್ತು. ಅಲ್ಲದೆ ತಾಜ್ಯ ನಿರ್ವಹಣೆ ಸಂಬಂಧಿಸಿದಂತೆ 2 ಸಾವಿರ ಮಂದಿಗೆ ತರಬೇತಿಯನ್ನೂ ನೀಡಿದೆ.

ಋತುಸ್ರಾವದ ಬಗ್ಗೆ ತಪ್ಪು ಕಲ್ಪನೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಈಗಾಗಲೇ ಕೆಲವು ಗ್ರಾಮ ಪಂಚಾಯ್ತಿಗಳಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಗಳಲ್ಲಿ ವೈಜ್ಞಾನಿಕ ವಿಲೇವಾರಿ ಸಂಬಂಧಿಸಿದಂತೆ ಪ್ಯಾಡ್‌ಗಳ ಬರ್ನಿಂಗ್‌ಯಂತ್ರಗಳನ್ನು ಅಳವಡಿಕೆ ಮಾಡಲಾಗಿದೆ. ಕೆ.ಶಿವರಾಮೇಗೌಡ, ನಗರ ಜಿಪಂ ಸಿಇಒ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.