ಸಂಚಾರ ದಟ್ಟಣೆ ನಿವಾರಣೆಗೆ ಬೇಕಿದೆ ಸಮಗ್ರ ಯೋಜನೆ

ಉದಯವಾಣಿ ಸಂವಾದ

Team Udayavani, May 19, 2019, 3:10 AM IST

ಬೆಂಗಳೂರು: ಒಂದೂವರೆ ದಶಕದಿಂದ ನಗರದಲ್ಲಿ ಸಂಚಾರದಟ್ಟಣೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೆ, ಈ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಮೂಲತಃ ವ್ಯವಸ್ಥಿತ ಯೋಜನೆಯೇ ಇಲ್ಲ. ಈಗ ಇದಕ್ಕಾಗಿ ಸಮಗ್ರ ಯೋಜನೆಯೊಂದನ್ನು ರೂಪಿಸುವ ತುರ್ತು ಅವಶ್ಯಕತೆ ಇದೆ ಎಂದು ಸಾರಿಗೆ ತಜ್ಞರು ಅಭಿಪ್ರಾಯಪಟ್ಟರು.

“ಉದಯವಾಣಿ’ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ನಗರದ ಸಂಚಾರದಟ್ಟಣೆಗೆ ಸಂಬಂಧಿಸಿದ ಸಂವಾದದಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ (ಸಂಚಾರ) ಸೇರಿದಂತೆ ತಜ್ಞರಿಂದ ಈ ಅಭಿಪ್ರಾಯ ಕೇಳಿಬಂತು.

ರಸ್ತೆಗಳ ಸಾಮರ್ಥ್ಯ ಎಷ್ಟಿದೆ? ಅದರ ಮೇಲೆ ಓಡಾಡುವ ವಾಹನಗಳು ಎಷ್ಟಿರಬೇಕು? ಈ ವಾಹನಗಳು ನಗರದ ಹೃದಯಭಾಗಕ್ಕೆ ಬಂದರೆ ನಿಲುಗಡೆ ಎಲ್ಲಿ? ನಗರದ ಭೌಗೋಳಿಕ ವಿನ್ಯಾಸವೂ ಸಂಚಾರದಟ್ಟಣೆಯಲ್ಲ ಕೊಡುಗೆ ನೀಡುತ್ತಿದೆಯೇ?

ಇತ್ತೀಚೆಗಷ್ಟೇ ನಿರ್ಮಿಸಿರುವ “ನಮ್ಮ ಮೆಟ್ರೋ’ ನಿಲ್ದಾಣ ವ್ಯಾಪ್ತಿಯಲ್ಲೂ ನಿಲುಗಡೆ ವ್ಯವಸ್ಥೆ ಕಲ್ಪಿಸಲು ಯಾಕೆ ಸಾಧ್ಯವಾಗಿಲ್ಲ? ಇದಾವುದರ ವ್ಯವಸ್ಥಿತ ಅಧ್ಯಯನ ಆಗಿಲ್ಲ. ಸಂಚಾರದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ಮುನ್ನ ನಾವು ಈ ಸಮಸ್ಯೆಯ ಮೂಲಗಳನ್ನು ತಿಳಿಯುವ ಅವಶ್ಯಕತೆ ಇದೆ ಎಂದು ತಜ್ಞರು ಪ್ರತಿಪಾದಿಸಿದರು.

ನಗರ ಭೂಸಾರಿಗೆ ನಿರ್ದೇಶನಾಲಯ (ಡಿಯುಎಲ್‌ಟಿ), ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಸಾರಿಗೆ ಇಲಾಖೆ, ಬಿಎಂಟಿಸಿ ಒಟ್ಟಾಗಿ ಸಮಗ್ರ ಯೋಜನೆ ರೂಪಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ, ಮುಂದಿನ ಐದು ವರ್ಷಗಳಲ್ಲಿ ಸಂಚಾರದಟ್ಟಣೆಯು ದೊಡ್ಡ ದುರಂತಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದೂ ಎಚ್ಚರಿಸಿದರು.

ಸಂಚಾರದಟ್ಟಣೆ ನಿವಾರಣೆಗೆ ಅಲ್ಪಾವಧಿ ಮತ್ತು ದೀರ್ಘಾವಧಿ ಎಂಬ ಎರಡು ರೀತಿಯ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಅಲ್ಪಾವಧಿಯಲ್ಲಿ ಬಿಎಂಟಿಸಿ ಬಸ್‌ಗಳಿಗೆ ಸಾಧ್ಯವಿರುವ ಕಡೆಗಳಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡಬೇಕು. ತಂತ್ರಜ್ಞಾನಗಳ ನೆರವಿನಿಂದ ಬಸ್‌ಗಳ ಕಾರ್ಯಾಚರಣೆಯ ಕಾರ್ಯಕ್ಷಮತೆ ವೃದ್ಧಿಸಬೇಕು.

ಹೆಚ್ಚು ಬಸ್‌ಗಳನ್ನು ರಸ್ತೆಗಿಳಿಸಬೇಕು. ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಹೆಚ್ಚಿಸಬೇಕು. ಇನ್ನು ದೀರ್ಘಾವಧಿಯಲ್ಲಿ ಮೆಟ್ರೋ, ಉಪನಗರ ರೈಲು ಯೋಜನೆಗಳ ಅನುಷ್ಠಾನ, ಬೈಸಿಕಲ್‌ ಪಥ ಮತ್ತಿತರ ಯೋಜನೆಗಳನ್ನು ರೂಪಿಸಬೇಕು ಎಂದು ಸಲಹೆಗಳನ್ನು ಮುಂದಿಟ್ಟರು.

ಅಡಿಗೆ ಮಾಡಿದವರ್ಯಾರೋ; ಬಡಿಸ್ತಿರೋರ್ಯಾರೋ: ಸಂವಾದದಲ್ಲಿ ಮಾತನಾಡಿದ ಹೆಚ್ಚುವರಿ ಪೊಲೀಸ್‌ ಆಯುಕ್ತ (ಸಂಚಾರ) ಪಿ. ಹರಿಶೇಖರನ್‌, “ಅಡಿಗೆ ಮಾಡಿದವರು ಬೇರೆ; ನಾವು (ಸಂಚಾರ ಪೊಲೀಸರು) ಆ ಅಡಿಗೆ ಬಡಿಸುತ್ತಿದ್ದೇವಷ್ಟೇ. ಆದರೆ, ಇಲ್ಲಿ ಊಟ ಸರಿಯಾಗಿಲ್ಲ ಎಂದು ಬಡಿಸುವವನನ್ನು ದೂಷಿಸಲಾಗುತ್ತಿದೆ.

ಇದು ಸಂಚಾರದಟ್ಟಣೆಯ ವಸ್ತುಸ್ಥಿತಿ. ಹಾಗಂತ, ಪಲಾಯನ ಆಗುತ್ತಿಲ್ಲ. ಸಮಸ್ಯೆ ಪರಿಹಾರಕ್ಕೆ ಸಂಯೋಜಿತ ಪ್ರಯತ್ನದ ಅಗತ್ಯ ಇದೆ ಎಂಬುದು ನನ್ನ ವಾದ. ಎರಡು ಟಿಎಂಸಿ ಸಾಮರ್ಥ್ಯದಷ್ಟು ಕೆರೆ ನಿರ್ಮಿಸಿ, ಐದು ಟಿಎಂಸಿ ನೀರು ಹರಿಸಿದರೆ ಏನಾಗುತ್ತದೆ? ಅದೇ ಸ್ಥಿತಿ ಈಗ ನಗರದ ಸಂಚಾರ ವ್ಯವಸ್ಥೆಯಲ್ಲೂ ಆಗಿದೆ’ ಎಂದು ಸಮಸ್ಯೆಯ ತೀವ್ರತೆಯನ್ನು ತೆರೆದಿಟ್ಟರು.

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ )ಯ ಮೂಲಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ ಯೋಜನೆ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ. ಆಶಿಶ್‌ ವರ್ಮ ಮಾತನಾಡಿ, “ನಗರ ಸಂಚಾರ ಮತ್ತು ಸಾರಿಗೆ ವ್ಯವಸ್ಥೆಯ ನಡುವೆ ಸಾಕಷ್ಟು ಅಸಮತೋಲನ ಇದೆ.

ಇದಕ್ಕೆ ನಾವು ಬರೀ ಮೇಲ್ಸೇತುವೆಯಂತಹ ಅಲ್ಪಾವಧಿ ಪರಿಹಾರಗಳನ್ನು ಕಂಡುಕೊಳ್ಳುವುದರಿಂದ ಪರಿಹಾರ ಸಾದ್ಯವಿಲ್ಲ. ಸುಸ್ಥಿರ ಸಾರಿಗೆ ವ್ಯವಸ್ಥೆ ನಮ್ಮ ಆದ್ಯತೆ ಆಗಬೇಕು. ಇದಕ್ಕೆ ಉಳಿದೆಲ್ಲ ಸರ್ಕಾರಿ ಸಂಸ್ಥೆಗಳು ಕೈಜೋಡಿಸಬೇಕು’ ಎಂದು ಅಭಿಪ್ರಾಯಪಟ್ಟರು.

ತಂತ್ರಜ್ಞಾನದ ನೆರವು: ಕ್ಲೀನ್‌ ಏರ್‌ ಪ್ಲಾಟ್‌ಫಾರಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಶ್‌ ರಂಗನಾಥ್‌, “ನಗರದ ಅತಿ ಹೆಚ್ಚು ವಾಹನದಟ್ಟಣೆ ಇರುವ ಹಾಟ್‌ಸ್ಪಾಟ್‌ಗಳನ್ನು ಗುರುತಿಸಬೇಕು. ಅವುಗಳಿಗೆ ಸ್ಥಳೀಯಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕು. ವಿದೇಶಗಳಲ್ಲಿ ತಂತ್ರಜ್ಞಾನಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಸಂಚಾರ ನಿರ್ವಹಣೆ ಮಾಡಲಾಗುತ್ತಿದೆ ಎಂದರು.

ಆಯುಕ್ತ ಬೇಸರ: “ಎರಡು ಸಾವಿರ ಮದುವೆ ಹಾಲ್‌ಗ‌ಳಿವೆ. ಅಲ್ಲಿಗೆ ಬರುವ ವಾಹನಗಳ ವ್ಯವಸ್ಥೆ ಹೇಗೆ? ಅವುಗಳು ಸೃಷ್ಟಿಸುವ ಸಂಚಾರದಟ್ಟಣೆ ಎಷ್ಟು? ಈ ಬಗ್ಗೆ ಯಾರೂ ಯೋಚಿಸುವುದೇ ಇಲ್ಲ’ ಎಂದು ಪಿ. ಹರಿಶೇಖರನ್‌ ಬೇಸರ ವ್ಯಕ್ತಪಡಿಸಿದರು.

ಬಹುತೇಕ ಮದುವೆ ಹಾಲ್‌ಗ‌ಳು ವಾಹನ ನಿಲುಗಡೆ ವ್ಯವಸ್ಥೆ ಹೊಂದಿರುವುದಿಲ್ಲ. ಸೀಜನ್‌ನಲ್ಲಿ ಸಾವಿರಾರು ವಾಹನಗಳು ಆ ಹಾಲ್‌ಗ‌ಳ ಸುತ್ತ ನಿಲುಗಡೆ ಆಗುತ್ತವೆ. ಇದಲ್ಲದೆ, ವಸತಿ ಪ್ರದೇಶಗಳಲ್ಲಿ ರಾತ್ರಿ ನಿಲುಗಡೆ ಆಗುವ ಸಾವಿರಾರು ವಾಹನಗಳಿರುತ್ತವೆ.

ಲಕ್ಷಾಂತರ ವಾಹನಗಳ ಮಾಲಿಕತ್ವ ಹೊಂದಿರುವ ಆ್ಯಪ್‌ ಆಧಾರಿತ ಸೇವೆ ನೀಡುತ್ತಿರುವ ಓಲಾ, ಉಬರ್‌ ಕಂಪನಿಗಳು ವಾಹನ ನಿಲುಗಡೆಗೆ ಎಲ್ಲಿ ವ್ಯವಸ್ಥೆ ಕಲ್ಪಿಸಿದ್ದಾರೆ? ಸಂಚಾರದಟ್ಟಣೆಗೆ ಇವುಗಳು ಕೂಡ ಕೊಡುಗೆ ನೀಡುತ್ತಿವೆ ಎಂದು ಅವರು ಗಮನಸೆಳೆದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: "ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತಹ ಕಡತಗಳನ್ನು ಇಡಲು ಪ್ರತ್ಯೇಕ ಕೊಠಡಿಯಿಲ್ಲ. ಆರೋಪಿಗಳನ್ನು ಠಾಣೆಗೆ ಕರೆತಂದರೆ ಬಂಧಿಸಿಡಲು ಸೆಲ್‌ ಇಲ್ಲವೇ...

  • ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ನಗರದಲ್ಲಿ ತರಹೇವಾರಿ ಪಟಾಕಿಗಳು ಸದ್ದು ಮಾಡಲಾರಂಭಿಸಿವೆ. ಈ ನಡುವೆ ನಗರದ ಜನತೆ ಸುರಕ್ಷಿತವಾಗಿ...

  • ಬೆಂಗಳೂರು: ಪಕ್ಷದ ನಿರ್ಧಾರದಂತೆ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದೆ. ಆ ಸರ್ಕಾರವನ್ನು ಉಳಿಸಿಕೊಳ್ಳಲು ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ...

  • ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್‌ಜಿಟಿ) ನಿರ್ದೇಶನದ ಬಳಿಕ ಎಚ್ಚತ್ತುಕೊಂಡಿರುವ ಬಿಬಿಎಂಪಿ, ತ್ಯಾಜ್ಯ ನಿರ್ವಹಣೆಯಲ್ಲಿ ಆಗುತ್ತಿರುವ ಲೋಪಗಳನ್ನು...

  • ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ವತಿಯಿಂದ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು....

ಹೊಸ ಸೇರ್ಪಡೆ

  • ಕೇಂದ್ರೀಯ ಪ್ರತ್ಯಕ್ಷ ತೆರಿಗೆ ಮಂಡಳಿ ವಾರ್ಷಿಕ ತೆರಿಗೆ ಸಂಗ್ರಹದ ಅಂಕಿಅಂಶವನ್ನು ಇಂದು ಬಿಡುಗಡೆಗೊಳಿಸಿದೆ. ಮಹಾರಾಷ್ಟ್ರ, ದಿಲ್ಲಿ ಮತ್ತು ಕರ್ನಾಟಕ ಈ ಮೂರು...

  • ಉಡುಪಿ: ಮಣಿಪಾಲ ಕೆಎಂಸಿಯ ಫಾರ್ಮಕಾಲಜಿ ವಿಭಾಗ ಮತ್ತು ಎಂಐಟಿಯ ಮಾಹಿತಿ ಮತ್ತು ಸಂವಹನ ವಿಭಾಗಗಳು ರೋಗಿಗಳ ಸುರಕ್ಷೆಗಾಗಿ ಔಷಧಗಳ ಪ್ರತಿಕೂಲ ಪರಿಣಾಮಗಳನ್ನು ವರದಿ...

  • ಜಲಮುನಿಗಳು ಅನ್ನುವ ಒಬ್ಬ ಗುರುಗಳಿದ್ದರು. ಅವರು ನೀರಿನ ಮೇಲೆ ನಡೆದಾಡುವ, ಓಡುವ, ಕುಳಿತುಕೊಳ್ಳುವ, ನಿದ್ದೆ ಮಾಡುವ ಸಿದ್ದಿಯನ್ನು ಗಳಿಸಿಕೊಂಡಿದ್ದರು. ಅದನ್ನು...

  • ಮಂಗಳೂರು: ಬಹುಭಾಷಾ ನಟ ಅರ್ಜುನ್‌ ಸರ್ಜಾ ಅವರು ಚೆನ್ನೈಯ ಗೇರುಗಂಬಕ್ಕಂನಲ್ಲಿ ನಿರ್ಮಿಸುತ್ತಿರುವ ಬೃಹತ್‌ ಹನುಮಾನ್‌ ದೇವಸ್ಥಾನಕ್ಕೆ ಅಗತ್ಯವಾಗಿರುವ ಮರದ...

  • ಬಂಟ್ವಾಳ/ ಮಂಗಳೂರು: ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಅ. 24ರಂದು ದ.ಕ. ಜಿಲ್ಲಾ ಪ್ರವಾಸ ನಡೆಸಲಿದ್ದು, ಬೆಳಗ್ಗೆ 8.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ...