ಪ್ರಜಾಪ್ರಭುತ್ವ ಬಲವರ್ಧನೆಗೆ ಎ-ವೆಬ್‌ ಸಜ್ಜು

Team Udayavani, Sep 2, 2019, 3:05 AM IST

praja

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆ, ಚುನಾವಣಾ ಸುಧಾರಣೆ ಮತ್ತು ನಿರ್ವಹಣೆ, ಸಾಮರ್ಥಯ ವೃದ್ಧಿ, ಹೊಸ ತಂತ್ರಜ್ಞಾನಗಳ ಅಳವಡಿಕೆ, ಅವಕಾಶಗಳು ಮತ್ತು ಸವಾಲುಗಳ ಪರಾಮರ್ಶೆ, ಜಾಗತಿಕ ಸಹಕಾರ ಹಾಗೂ ಸಮನ್ವಯಕ್ಕಾಗಿ ಕೆಲಸ ಮಾಡುತ್ತಿರುವ ವಿಶ್ವದ ಚುನಾವಣಾ ಸಂಸ್ಥೆಗಳ ಅತಿ ದೊಡ್ಡ ವೇದಿಕೆಯಾಗಿರುವ “ಜಾಗತಿಕ ಚುನಾವಣಾ ಸಂಸ್ಥೆಗಳ ಒಕ್ಕೂಟ’ ದ (ಎ-ವೆಬ್‌) ಮೂರು ದಿನಗಳ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಉದ್ಯಾನ ನಗರಿ ಬೆಂಗಳೂರು ಸಾಕ್ಷಿಯಾಗಲಿದೆ.

ಭಾರತದ ಚುನಾವಣಾ ಆಯೋಗ ಆತಿಥ್ಯ ವಹಿಸಿಕೊಂಡಿರುವ ಈ ಜಾಗತಿಕ ಸಮಾವೇಶವು ಸೆ.2 ರಿಂದ 4ರವರೆಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತ ಉಮೇಶ್‌ ಸಿನ್ಹಾ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು. ಎ-ವೆಬ್‌ ಸ್ಥಾಪನೆಯಲ್ಲಿ ಭಾರತ ಚುನಾವಣಾ ಆಯೋಗವು ನಿರ್ಣಾಯಕ ಪಾತ್ರ ವಹಿಸಿದೆ. 2013ರಿಂದ 2017ರವರೆಗೆ ಎರಡು ಅವಧಿಗೆ ಆಯೋಗವು ಕಾರ್ಯಕಾರಿ ಮಂಡಳಿ ಸದಸ್ಯವಾಗಿತ್ತು.

ಪ್ರಸಕ್ತ 2019-21ರ ಅವಧಿಗೆ ಭಾರತ ನಾಯಕತ್ವ ವಹಿಸಿಕೊಳ್ಳಲಿದೆ. ಸೆ.2ರಂದು ಕಾರ್ಯಕಾರಿ ಮಂಡಳಿ ಸಭೆ, ಸೆ.3ರಂದು 4ನೇ ಸಾಮಾನ್ಯ ಸಭೆ (ಜನರಲ್‌ ಅಸೆಂಬ್ಲಿ) ನಡೆಯಲಿದ್ದು, ಸೆ.4ರಂದು “ಚುನಾವಣೆಗಳಲ್ಲಿ ಸಾಮಾಜಿಕ ಮಾಧ್ಯಮಗಳು ಮತ್ತು ಮಾಹಿತಿ ತಂತ್ರಜ್ಞಾನದ ಕುರಿತ ಉಪಕ್ರಮಗಳು ಹಾಗೂ ಸವಾಲುಗಳು’ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮಾವೇಶ ಜರುಗಲಿದೆ ಎಂದರು. ಮೂರು ದಿನಗಳ ಈ ಸಮಾವೇಶದಲ್ಲಿ 50ಕ್ಕೂ ಹೆಚ್ಚು ದೇಶಗಳ 120ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಸೆ.3ರಂದು ನಡೆಯಲಿರುವ ಜನರಲ್‌ ಅಸೆಂಬ್ಲಿಯ ಅಧ್ಯಕ್ಷತೆಯನ್ನು ಭಾರತ ಚುನಾವಣಾ ಆಯೋಗದ ಆಯುಕ್ತ ಸುನೀಲ್‌ ಅರೋರ ವಹಿಸಿಕೊಳ್ಳಲಿದ್ದಾರೆ. ಸೆ.4ರಂದು ನಡೆಯಲಿರುವ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಭೂತಾನ್‌, ಕೆಮರೂನ್‌, ಫೆಲೆಸೀನ್‌ ಸೇರಿದಂತೆ 11 ರಾಷ್ಟ್ರಗಳು ವಿಷಯ ಮಂಡನೆ ಮಾಡಲಿದ್ದಾರೆ ಎಂದರು. ಪ್ರಸ್ತುತ 115 ಸದಸ್ಯ ರಾಷ್ಟ್ರಗಳನ್ನು ಎ-ವೆಬ್‌ ಹೊಂದಿದೆ. ಮೂರು ದಿನಗಳ ಸಮಾವೇಶದಿಂದ ಭಾರತ ಸಾಕಷ್ಟು ಎದುರು ನೋಡುತ್ತಿದ್ದರೆ, ಇತರೆ ಸದಸ್ಯ ರಾಷ್ಟ್ರಗಳು ಸಾಕಷ್ಟು ನಿರೀಕ್ಷೆಗಳನ್ನು ಹೊಂದಿವೆ ಎಂದು ಸಿನ್ಹಾ ತಿಳಿಸಿದರು.

ಎ-ವೆಬ್‌ ಪ್ರಧಾನ ಕಾರ್ಯದರ್ಶಿ ಯಾಂಗ್‌-ಹಿ ಕಿಮ್‌ ಮಾತನಾಡಿ, ಬೃಹತ್‌ ಪ್ರಜಾಪ್ರಭುತ್ವ ಹೊಂದಿರುವ ಭಾರತದಲ್ಲಿ ಸಮಾವೇಶ ನಡೆಯುತ್ತಿರುವುದು ಹಾಗೂ ಮುಂದಿನ ಅವಧಿಗೆ ಭಾರತ ನಾಯಕತ್ವ ವಹಿಸಿಕೊಳ್ಳುತ್ತಿರುವುದು ಚುನಾವಣಾ ವ್ಯವಸ್ಥೆ ಹೊಂದಿರುವ ರಾಷ್ಟ್ರಗಳಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ ಎಂದರು. ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.