ನೌಕರಿ, ಸಾಲ, ಗಿಫ್ಟ್ ನೆಪದಲ್ಲಿ ವಂಚನೆ: ಆಫ್ರಿಕಾ ಮೂಲದ ಇಬ್ಬರು ಸೇರಿ ಮೂವರ ಬಂಧನ

Team Udayavani, Jun 25, 2022, 1:09 PM IST

ನೌಕರಿ, ಸಾಲ, ಗಿಫ್ಟ್ ನೆಪದಲ್ಲಿ ವಂಚನೆ: ಆಫ್ರಿಕಾ ಮೂಲದ ಇಬ್ಬರು ಸೇರಿ ಮೂವರ ಬಂಧನ

ಬೆಂಗಳೂರು: ದೇಶದ ವಿವಿಧ ಭಾಗದಲ್ಲಿರುವ ನಾಗರಿಕರಿಗೆ ಕರೆ ಮಾಡಿ ಉದ್ಯೋಗ, ಸಾಲ ಕೊಡಿಸುವುದಾಗಿ ಹಾಗೂ ಲಾಟರಿ, ಗಿಫ್ಟ್ ಬಂದಿರುವುದಾಗಿ ನಂಬಿಸಿ ನಕಲಿ ಬ್ಯಾಂಕ್‌ ಖಾತೆಗಳಿಗೆ ಆನ್‌ಲೈನ್‌ ಮುಖಾಂತರ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಸೇರಿ ಒಟ್ಟಾರೆ ಮೂವರನ್ನು ಈಶಾನ್ಯ ವಿಭಾಗದ ಸಿಇಎನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಫ್ರಿಕಾ ಪ್ರಜೆಗಳಾದ ಫಾಸೋಯಿನ್‌ ಅವಲೋಹೋ ಅಡೇ ಯಿಂಕಾ (32), ಅಡ್ವೇ ಅಂಗೇ ಅಲ್ಪೇಡ್‌ ಅಡೋನಿ ಮತ್ತು ತ್ರಿಪುರದ ಮೋನಿಕುಮಾರ್‌ ಕಾಯ್‌ಪೇಂಗ್‌ ಅವರನ್ನು ಬಂಧಿಸಲಾಗಿದೆ.

ಅನಧಿಕೃತ ವಾಸ: ಆರೋಪಿಗಳು ಪಾಸ್‌ಪೋರ್ಟ್‌ ಹಾಗೂ ವೀಸಾ ಪಡೆಯದೆ ಭಾರತದಲ್ಲಿ ಅನಧಿಕೃತವಾಗಿ ವಾಸವಾಗಿದ್ದರು. ಸೈಬರ್‌ ಅಪರಾಧ ಮಾಡುವ ಉದ್ದೇಶದಿಂದಲೇ ತ್ರಿಪುರ ರಾಜ್ಯದಿಂದ ನಕಲಿ ಸಿಮ್‌ಕಾರ್ಡ್‌ಗಳನ್ನು ಮತ್ತು ನಕಲಿ ಬ್ಯಾಂಕ್‌ ಖಾತೆಗಳನ್ನು ಸೃಷ್ಟಿಸಿಕೊಂಡು ವಂಚಿಸುತ್ತಿದ್ದರು ಎಂಬ ಮಾಹಿತಿ ಸಿಇಎನ್‌ ಠಾಣೆ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರನ್ನು ಬಂಧಿಸಿ ಶೋಧ ನಡೆಸಿ ಅವರ ಬಳಿ ಇದ್ದ 4 ನಕಲಿ ಡೆಬಿಟ್‌ ಕಾರ್ಡ್‌ಗಳು ಹಾಗೂ 4 ಸಿಮ್‌ ಕಾರ್ಡ್‌ಗಳು ಹಾಗೂ 3 ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ವಿಚಾರಣೆ ವೇಳೆ ತ್ರಿಪುರ ರಾಜ್ಯದಿಂದ ಕೊರಿಯರ್‌ನಲ್ಲಿ ಬರುತ್ತಿದ್ದ ಮತ್ತೆರಡು ಪಾರ್ಸಲ್‌ ಗಳ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಕೊರಿಯರ್‌ ಕಚೇರಿಯಿಂದ ಎರಡು ಪಾರ್ಸಲ್‌ಗ‌ಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಅದರಲ್ಲಿ 6 ಡೆಬಿಟ್‌ ಕಾರ್ಡ್‌ ಗಳು ಹಾಗೂ 2 ನಕಲಿ ಸಿಮ್‌ ಕಾರ್ಡ್‌ ಪತ್ತೆಯಾಗಿವೆ. ಈ ಕುರಿತು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಉದ್ಯೋಗ, ಲೋನ್‌ ಕೊಡಿಸುವುದಾಗಿ ಮತ್ತು ಗಿಫ್ಟ್ ಬಂದಿರುವುದಾಗಿ ವಿವಿಧ ರೀತಿಯಲ್ಲಿ ದೂರವಾಣಿ ಕರೆ ಮಾಡಿ ಮತ್ತು ಸಂದೇಶಗಳನ್ನು ಕಳುಹಿಸುತ್ತಿದ್ದು ಗೊತ್ತಾಗಿದೆ.

ನಂತರ ಸಾರ್ವಜನಿಕರಿಂದ ನಕಲಿ ಬ್ಯಾಂಕ್‌ ಖಾತೆಗಳಗೆ ಆನ್‌ ಲೈನ್‌ ಮುಖಾಂತರ ಹಣ ಹಾಕಿಸಿಕೊಂಡು ಮೋಸ ಮಾಡಿ ಪರಾ ರಿಯಾಗುತ್ತಿದ್ದರು. ಇದರಿಂದಾಗಿ ಆರೋಪಿಗಳನ್ನು ಪತ್ತೆ ಮಾಡಲು ಹಾಗೂ ಬಂಧಿಸಲು ಪೊಲೀಸರಿಗೆ ಕಷ್ಟವಾಗಿತ್ತು. ಆರೋಪಿಗಳ ವಿಳಾಸದ ಬಗ್ಗೆ ವಿಚಾರಿಸಿದಾಗ ವಾಸಸ್ಥಳದ ವಿಳಾಸ ತಿಳಿಸಿಲ್ಲ. ಈಶಾನ್ಯ ವಿಭಾಗದ ಸಿಇಎನ್‌ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ರಾಮ್‌, ಪಿಎಸ್‌ಐ ಗಳಾದ ದೀಪಕ್‌, ರಮೇಶ್‌ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ನಕಲಿ ಸಿಮ್‌ ಕಾರ್ಡ್‌ ರವಾನೆ :  ನಗರದಲ್ಲಿ ವಾಸವಾಗಿರುವ ಆಫ್ರಿಕಾ ಮೂಲದ ವ್ಯಕ್ತಿಗಳಿಗೆ ಸಿಮ್‌ ಕಾರ್ಡ್‌ಗಳನ್ನು ರವಾನಿಸಿ ಹಣ ಸಂಪಾದಿಸುತ್ತಿದ್ದ ತ್ರಿಪುರ ರಾಜ್ಯದ ಮೋನಿಕುಮಾರ್‌ನನ್ನು ಬಂಧಿಸಿ 5 ನಕಲಿ ಸಿಮ್‌ ಕಾರ್ಡ್‌ಗಳು ಹಾಗೂ 6 ಬ್ಯಾಂಕ್‌ ನಕಲಿ ಡೆಬಿಟ್‌ ಕಾರ್ಡ್‌ ಹಾಗೂ 4 ಮೊಬೈಲ್‌ ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಬಂಧಿತನಾಗಿರುವ ಆಫ್ರಿಕಾ ಖಂಡದ ಘಾನಾ ದೇಶದ ಪ್ರಜೆಗಳನ್ನು ವಿಚಾರಣೆಗೆ ಒಳಪಡಿಸಿದಾಗ ತ್ರಿಪುರ ರಾಜ್ಯದ ಈ ವ್ಯಕ್ತಿ ಬಗ್ಗೆ ಮಾಹಿತಿ ನೀಡಿದ್ದ.ಈತ ಸೈಬರ್‌ ಅಪರಾಧ ಕೃತ್ಯಗಳಿಗೆ ಸಹಕರಿಸುತ್ತಿದ್ದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಡಿಸಿಪಿ ಅನೂಪ್‌ ಶೆಟ್ಟಿ ಅವರು ಒಂದು ತಂಡವನ್ನು ರಚಿಸಿದ್ದರು. ಈ ತಂಡ ತ್ರಿಪುರ ರಾಜ್ಯಕ್ಕೆ ತೆರಳಿ ಆರೋಪಿ ಮೋನಿಕುಮಾರ್‌ ಬಗ್ಗೆ ಮಾಹಿತಿ ಕಲೆ ಆಕಿ ಅಗರ್ತಲಾ ನಗರದಲ್ಲಿ ಪತ್ತೆ ಹಚ್ಚಿ ಬಂಧಿಸಿ ನಗರಕ್ಕೆಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ತ್ರಿಪುರದಲ್ಲಿ ವಾಸಿಸುವ ಬುಡಕಟ್ಟು ಸಮಾಜದವರಿಗೆ 2ರಿಂದ 3 ಸಾವಿರ ರೂ. ನೀಡಿ ಅವರಿಂದ ಬ್ಯಾಂಕ್‌ ಖಾತೆಗಳನ್ನು ತೆರೆಸಿ ಮತ್ತು ಸಿಮ್‌ ಕಾರ್ಡ್‌ಗಳನ್ನು ಖರೀದಿಸಿರುವುದು ತಿಳಿದು ಬಂದಿದೆ. ಈ ಸಿಮ್‌ ಕಾರ್ಡ್‌ಗಳನ್ನು ನಗರದಲ್ಲಿ ವಾಸಿಸುವ ಆಫ್ರಿಕಾ ಮೂಲದ ವ್ಯಕ್ತಿಗಳಿಗೆ ರವಾನಿಸಿ ಹಣ ಸಂಪಾದಿಸುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.