ಸಹಾಯ ನೆಪದಲ್ಲಿ ವಿದೇಶಿ ಪ್ರಜೆಯ ಸುಲಿಗೆ


Team Udayavani, Jun 26, 2022, 3:01 PM IST

tdy-11

ಬೆಂಗಳೂರು: ಬಾಡಿಗೆ ಹಣದ ವಿಚಾರಕ್ಕೆ ಹೋಟೆಲ್‌ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿದ್ದ ವಿದೇಶಿ ಪ್ರಜೆಗೆ ಪೊಲೀಸ್‌ ಠಾಣೆಗೆ ಕರೆದೊಯ್ಯುವುದಾಗಿ ಹೇಳಿ ಮಾರ್ಗ ಮಧ್ಯೆ ನಾಲ್ವರು ಆರೋಪಿಗಳು ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಶಿವಾಜಿನಗರ ನಿವಾಸಿ ಸೈಯದ್‌ ಇಮ್ರಾನ್‌ (35) ಬಂಧಿತ.  ಇತರೆ ಮೂವರಿಗಾಗಿ ಶೋಧ ನಡೆಯುತ್ತಿದೆ.

ಆಸ್ಟ್ರೇಲಿಯಾ ಮೂಲದ ಅಸೋ ಹ್ಯಾಂಜಿಹಿ ತನ್ನ ದೇಶದಲ್ಲಿ 2 ಕಂಪನಿಗಳ ಸಿಇಓ ಆಗಿದ್ದು, ಬೆಂಗಳೂರಿನಲ್ಲೂ ಶಾಖೆ ತೆರೆಯಲು ಮೇ 23ರಂದು ಬೆಂಗಳೂರಿಗೆ ಬಂದಿದ್ದು, ಮಾನ್ಯತಾ ಟೆಕ್‌ ಪಾರ್ಕ್‌ ಬಳಿಯ ಹೋಟೆಲ್‌ ವೊಂದರಲ್ಲಿ ತಂಗಿದ್ದರು. ಮಾನ್ಯತಾ ಟೆಕ್‌ ಪಾರ್ಕ್‌ ಮತ್ತು ಶಿವಾಜಿನಗರದಲ್ಲಿ ತಮ್ಮ ಸಂಸ್ಥೆ ವಿ-ವರ್ಕ್‌ ಎಂಬ ಸಂಸ್ಥೆಯ ಶಾಖೆಗಳನ್ನು ತೆರೆಯಲು ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. ಸ್ಥಳೀಯ ಬ್ಯಾಂಕ್‌ನಲ್ಲಿ ದಾಖಲೆ ನೀಡಿ ಖಾತೆ ತೆರೆಯಲು ಅರ್ಜಿ ಸಲ್ಲಿಸಿದ್ದರು. ಆದರೆ, ಖಾತೆ ತೆರೆ ಯಲಾಗಿಲ್ಲ. ಜತೆಗೆ ವಿದೇಶಿ ಕರೆನ್ಸಿಯನ್ನು ಭಾರತೀಯ ರೂಪಾಯಿಗೆ ವಿನಿಮಯಕ್ಕೂ ಯತ್ನಿಸಿದ್ದಾರೆ. ಅದು ಸಾಧ್ಯವಾಗಿಲ್ಲ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಬಾಡಿಗೆ ವಿಚಾರಕ್ಕೆ ಗಲಾಟೆ, ಹಲ್ಲೆ: ಈ ಮಧ್ಯೆ ಜೂನ್‌ 23ರಂದು ತಡರಾತ್ರಿ 2.30ರ ಸುಮಾರಿಗೆ ಹೋಟೆಲ್‌ಗೆ ಬಂದ ಅಸೋನನ್ನು ಹೋಟೆಲ್‌ ಸಿಬ್ಬಂದಿ ಬಾಡಿಗೆ ಕೇಳಿ ದ್ದಾರೆ. ಆಗ ಆನ್‌ಲೈನ್‌ ಮೂಲಕ ವರ್ಗಾವಣೆ ಮಾಡುತ್ತೇನೆ ಎಂದಾಗ ಹೋಟೆಲ್‌ ಮ್ಯಾನೇಜರ್‌, ಅಸೋ ಜತೆ ವಾಗ್ವಾದ ನಡೆಸಿ, ಕ್ಯಾಶ್‌ ಕಟ್ಟಬೇಕು. ಆನ್‌ಲೈನ್‌ಗೆ ಅವಕಾಶವಿಲ್ಲ ಎಂದಿದ್ದಾರೆ. ಅದೇ ವಿಚಾರಕ್ಕೆ ಹೋಟೆಲ್‌ನ ಐದಾರು ಮಂದಿ ಸಿಬ್ಬಂದಿ ವಿದೇಶಿ ಪ್ರಜೆ ಮೇಲೆ ಹಲ್ಲೆ ನಡೆಸಿ ಹೋಟೆಲ್‌ನಿಂದ ಹೊರ ಹಾಕಿದ್ದಾರೆ. ಅದೇ ಹೋಟೆಲ್‌ನಲ್ಲಿ ವಾಸವಾಗಿದ್ದ ಸೈಯದ್‌ ಇಮ್ರಾನ್‌ ಹಾಗೂ ಇತರೆ ಆರೋಪಿಗಳು, ಅಸೋಗೆ ಸಹಾಯ ಮಾಡುವುದಾಗಿ ಬಂದಿದ್ದಾರೆ.

ಪೊಲೀಸ್‌ ಠಾಣೆಗೆ ಕರೆದೊಯ್ಯುವುದಾಗಿ ಹಲ್ಲೆ: ಲಗೇಜ್‌ ಸಮೇತ ಹೋಟೆಲ್‌ ಹೊರಗಡೆ ನಿಂತಿದ್ದ ಅಸೋಗೆ ನಾಲ್ವರು ಆರೋಪಿಗಳು ಪೊಲೀಸ್‌ ಠಾಣೆಗೆ ಕರೆ ದೊಯ್ಯುವುದಾಗಿ ದ್ವಿಚಕ್ರ ವಾಹನದಲ್ಲಿ ಹತ್ತಿಸಿಕೊಂಡು ಸ್ವಲ್ಪ ದೂರ ಹೋಗಿದ್ದಾರೆ. ಮಾರ್ಗ ಮಧ್ಯೆ ವಾಹನ ನಿಲ್ಲಿಸಿ ಚಾಕು ತೋರಿಸಿ, ಅಸೋ ಬಳಿಯಿದ್ದ ಮೂರು ಬ್ಯಾಗ್‌ಗಳ ಪೈಕಿ ಒಂದು ಬ್ಯಾಗ್‌, ಪಾಸ್‌ ಪೋರ್ಟ್‌, ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ಗಳು, 4 ಸಾವಿರ ರೂ. ನಗದು ಹಾಗೂ ಇತರೆ ದಾಖಲೆಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.

ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ ಅಸೋ, ಕಲ್ಲುಗಳಿಂದ ಆರೋಪಿಗಳ ಮೇಲೆ ಎಸೆದು, ತಪ್ಪಿಸಿಕೊಂಡು ಕೆ.ಜಿ.ಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಪೊಲೀಸರು ಹೋಟೆಲ್‌ ಸಿಬ್ಬಂದಿ ವಿಚಾರಿಸಿ, ಸಿಸಿ ಕ್ಯಾಮೆರಾ ಹಾಗೂ ಹೇಳಿಕೆ ಸಂಗ್ರಹಿಸಿದ್ದಾರೆ.

ಬಳಿಕ ಗೋವಿಂದಪುರ ಠಾಣೆಯಲ್ಲಿ ಹೋಟೆಲ್‌ ಸಿಬ್ಬಂದಿ ಮತ್ತು ದರೋಡೆಕೋರರ ವಿರುದ್ಧ ಪ್ರಕರಣ ದಾಖಲಿಸಿದ್ದು, ನಾಲ್ವರು ದರೋಡೆಕೋರರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಹೋಟೆಲ್‌ ಮ್ಯಾನೇಜರ್‌ಗೆ ನೋಟಿಸ್‌ ಕೊಟ್ಟು ವಿಚಾರಣೆಗೆ ಕರೆಯಲಾಗಿದೆ. ಹಲ್ಲೆ ನಡೆಸಿದ ಸಿಬ್ಬಂದಿಯನ್ನು ಠಾಣೆಗೆ ಒಪ್ಪಿಸುವಂತೆ ಸೂಚಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಬಾಡಿಗೆ ವಿಚಾರಕ್ಕೆ ಹೋಟೆಲ್‌ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಜತೆಗೆ ಸಹಾಯ ನೆಪದಲ್ಲಿ ನಾಲ್ವರು ವಿದೇಶಿ ಪ್ರಜೆ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದು, ಒಬ್ಬನನ್ನು ಬಂಧಿಸಲಾಗಿದೆ. ಸದ್ಯದಲ್ಲೇ ಹೋಟೆಲ್‌ ಸಿಬ್ಬಂದಿಯನ್ನು ಬಂಧಿಸಲಾಗುತ್ತದೆ. ಭೀಮಾಶಂಕರ್‌ ಗುಳೇದ್‌, ಪೂರ್ವ ವಿಭಾಗ ಡಿಸಿಪಿ

ಟಾಪ್ ನ್ಯೂಸ್

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್‌ ತರಲಿದ್ದಾನೆ ಅಂಚೆಯಣ್ಣ

ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್‌ ತರಲಿದ್ದಾನೆ ಅಂಚೆಯಣ್ಣ

news basavaraj

ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..

ಕುಣಿಗಲ್ : ನಾಯಿ ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ

ಕುಣಿಗಲ್ : ನಾಯಿ ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ

ನಿವೃತ್ತ ಅಧಿಕಾರಿ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

ನಿವೃತ್ತ ಅಧಿಕಾರಿ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆ : ಸಿಎಂ ಜೊತೆ ಚರ್ಚಿಸಿ ತೀರ್ಮಾನ : ಸಚಿವ ಅಶೋಕ್

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆ : ಸಿಎಂ ಜೊತೆ ಚರ್ಚಿಸಿ ತೀರ್ಮಾನ : ಸಚಿವ ಅಶೋಕ್

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

1re

ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.