ಫೇಸ್ ಬುಕ್ ನಲ್ಲಿ ಹಾಕಿದ್ದ ಸೆಲ್ಫಿ ಪೋಸ್ಟ್ ನಿಂದ 5 ವರ್ಷದ ಬಳಿಕ ಅರೆಸ್ಟ್ ಆದ ಕೊಲೆ ಆರೋಪಿ!

ಮಧ್ಯಂತರ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ

Team Udayavani, May 24, 2022, 2:10 PM IST

ಫೇಸ್ ಬುಕ್ ನಲ್ಲಿ ಹಾಕಿದ್ದ ಸೆಲ್ಫಿ ಪೋಸ್ಟ್ ನಿಂದ 5 ವರ್ಷದ ಬಳಿಕ ಅರೆಸ್ಟ್ ಆದ ಕೊಲೆ ಆರೋಪಿ!

ಬೆಂಗಳೂರು: ಚಿನ್ನಾಭರಣಕ್ಕಾಗಿ ವ್ಯಕ್ತಿಯೊಬ್ಬನ ಕೊಲೆಗೈದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ಐದು ವರ್ಷಗಳ ಬಳಿಕ ಆಡುಗೋಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮೈಸೂರಿನ ಹೆಬ್ಟಾಳ ನಿವಾಸಿ ಮಧುಸೂದನ್‌ ಅಲಿಯಾಸ್‌ ಮಧು(27) ಬಂಧಿತ. 2014ರಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ನಗದು ಸೇರಿ ಪುರಾತನ ಕಾಲದ ಚಿನ್ನ ಹಾಗೂ ವಜ್ರದ ಆಭರಣ ದೋಚಿ ಪರಾರಿಯಾಗಿದ್ದ ಪ್ರಕರಣದಲ್ಲಿ ಮಧು ಎರಡನೇ ಆರೋಪಿಯಾಗಿದ್ದ. 2017ರಲ್ಲಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ, ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಹೇಳಿದರು.

ಏನಿದು ಪ್ರಕರಣ?: ಆರೋಪಿ ಮಧುಸೂದನ್‌ ಸೇರಿ ಏಳು ಮಂದಿ 2014ರ ಮಾ.25ರಂದು ಲಕ್ಕಸಂದ್ರ ಲೇಔಟ್‌ ನಿವಾಸಿಗಳಾದ ಉದಯ್‌ರಾಜ್‌ ಸಿಂಗ್‌ ಮತ್ತು ಸುಶೀಲಾ ದಂಪತಿ ಬಳಿಯಿದ್ದ ಪುರಾತನ ಕಾಲದ ಚಿನ್ನ ಮತ್ತು ವಜ್ರದ ಆಭರಣ ಖರೀದಿಸುವ ನೆಪದಲ್ಲಿ ಅವರ ಮನೆಗೆ ಹೋಗಿದ್ದರು. ಆಗ ದಂಪತಿ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ್ದ ಉದಯ್‌ರಾಜ್‌ ಸಿಂಗ್‌ನ ಕತ್ತು ಕೊಯ್ದು ಆರೋಪಿ ಗಳು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 2.5 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಠಾಣೆ ಪೊಲೀಸರು ಆರೋಪಿಗಳಾದ ಶ್ರೀರಂಗ ಅಭಿಷೇಕ್‌, ಮಧುಸೂದನ್‌, ಕಿರಣ್‌, ಸತೀಶ್‌, ದಿಲೀಪ್‌ ಕುಮಾರ್‌, ಶ್ರೀಧರ ಹಾಗೂ ಅಮಿತ್‌ ಕುಮಾರ್‌ ಎಂಬವರನ್ನು ಬಂಧಿಸಿ ದರೋಡೆ ಮಾಡಿದ್ದ ಚಿನ್ನ ಹಾಗೂ ವಜ್ರದ ಆಭರಣ ಜಪ್ತಿ ಮಾಡಿದ್ದರು. ಬಳಿಕ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಕೋರ್ಟ್‌ ವಿಚಾರಣೆ ನಡೆಸುತ್ತಿತ್ತು.

ಆರು ಮಂದಿಗೆ ಜೀವಾವಧಿ ಶಿಕ್ಷೆ: ಈ ನಡುವೆ ಪ್ರಕ ರಣದ ಎರಡನೇ ಆರೋಪಿ ಮಧುಸೂದನ್‌ 2017 ರಲ್ಲಿ ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಬಳಿಕ ಕೋರ್ಟ್‌ನ ಷರತ್ತುಗಳನ್ನು ಉಲ್ಲಂ ಸಿ ವಿಚಾರಣೆಗೆ ಗೈರಾಗಿ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿ ಬಂಧನಕ್ಕೆ ನ್ಯಾಯಾಲಯ ವಾರೆಂಟ್‌ ಹೊರಡಿಸಿತ್ತು. ಬಳಿಕ 2019ರ ಜೂನ್‌ 12ರಂದು ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ್ದ ನ್ಯಾಯಾಲಯವು,ಆರೋಪಿ ಮಧುಸೂದನ್‌ ಹೊರತುಪಡಿಸಿ ಉಳಿದಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿತ್ತು

ಫೇಸ್‌ಬುಕ್‌ ಸೆಲ್ಫಿಯಿಂದ ಸಿಕ್ಕಿಬಿದ್ದ ! :

ಹೈಕೋರ್ಟ್‌ನಿಂದ ಜಾಮೀನು ಪಡೆದುಕೊಂಡ ಆರೋಪಿ ಬಳಿಕ ಬಿಹಾರದ ಪಾಟ್ನಾಗೆ ಹೋಗಿ ರಾಹುಲ್‌ ಎಂಬ ಹೆಸರಿನಲ್ಲಿ ಜೀವನ ನಡೆಸುತ್ತಿದ್ದ. ಬಳಿಕ ಪುಣೆಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಮೊಬೈಲ್‌ ಫೋನ್‌ ಬಳಸುತ್ತಿರಲಿಲ್ಲ. ಜತೆಗೆ ಕುಟುಂಬ ಸದಸ್ಯರನ್ನು ಸಂಪರ್ಕಿಸುತ್ತಿರಲಿಲ್ಲ. ಹೀಗಾಗಿ ಪೊಲೀಸರಿಗೆ ಆರೋಪಿ ಸಿಕ್ಕಿರಲಿಲ್ಲ. ಈ ಮಧ್ಯೆ ಆರೋಪಿ ಇತ್ತೀಚೆಗೆ ಬೆಂಗಳೂರಿಗೆ ಬಂದು ಸ್ನೇಹಿತನ ಜತೆ ಮಾಲ್‌ವೊಂದರಲ್ಲಿ ಕಾಣಿಸಿಕೊಂಡಿದ್ದ. ಸ್ನೇಹಿತನ ಜತೆ ಸೆಲ್ಫಿ ತೆಗೆದುಕೊಂಡು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ. ಈ ಕುರಿತು ಮಾಹಿತಿ ಪಡೆದ ಆಡುಗೋಡಿ ಪೊಲೀಸರು, ಆತನ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಮಾಲ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಆಧರಿಸಿ ಮೊದಲಿಗೆ ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸನದಾಗ ಪೀಣ್ಯದಲ್ಲಿರುವ ಆತನ ಸಹೋದರಿ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

Rohit Sharma can be relieved as captain from T20s: Virender Sehwag

ರೋಹಿತ್ ಶರ್ಮಾ ನಾಯಕತ್ವ ತ್ಯಜಿಸಬೇಕು: ಸಲಹೆ ನೀಡಿದ ಸೆಹವಾಗ್

Exam

ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದು

ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ

ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ

1-sdsadsa

ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್‍ಕುಮಾರ್ ಕಟೀಲ್

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ: ಸಿಎಂ ಬೊಮ್ಮಾಯಿ

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ: ಸಿಎಂ ಬೊಮ್ಮಾಯಿ

ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdfggfdg

ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ

ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ

ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ

1-sdsadsa

ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್‍ಕುಮಾರ್ ಕಟೀಲ್

ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ;ಲಕ್ಷ್ಮಣ ನಿಂಬರಗಿ, ಹರಿರಾಂ ಶಂಕರ್ ಸೇರಿ ಹಲವರ ವರ್ಗಾವಣೆ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ;ಲಕ್ಷ್ಮಣ ನಿಂಬರಗಿ, ಹರಿರಾಂ ಶಂಕರ್ ಸೇರಿ ಹಲವರ ವರ್ಗಾವಣೆ

MUST WATCH

udayavani youtube

ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್

udayavani youtube

ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

udayavani youtube

ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್‌ ಬುಕ್

udayavani youtube

ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು

udayavani youtube

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು

ಹೊಸ ಸೇರ್ಪಡೆ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

12

ಮೂಲ ಸೌಲಭ್ಯ ವಂಚಿತ ಕಣಗಿನಹಾಳ ಗ್ರಾಮ

Rohit Sharma can be relieved as captain from T20s: Virender Sehwag

ರೋಹಿತ್ ಶರ್ಮಾ ನಾಯಕತ್ವ ತ್ಯಜಿಸಬೇಕು: ಸಲಹೆ ನೀಡಿದ ಸೆಹವಾಗ್

ಶಿರಸಿ ಎಪಿಎಂಸಿಗೆ ಪ್ರಶಾಂತ ಗೌಡ ನೂತನ ಅಧ್ಯಕ್ಷ

ಶಿರಸಿ ಎಪಿಎಂಸಿಗೆ ಪ್ರಶಾಂತ ಗೌಡ ನೂತನ ಅಧ್ಯಕ್ಷ

11

ವಿವಿಧ ಇಲಾಖೆಯಲ್ಲಿ 3129 ಹುದ್ದೆ ಖಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.