ಮದುವೆಗೆ ನಿರಾಕರಿಸಿದ ಪ್ರಿಯತಮನ ಮುಖ ಇರಿದು ಆ್ಯಸಿಡ್‌ ಎರಚಿದ ಪ್ರೇಯಸಿ

Team Udayavani, Jan 17, 2017, 4:32 PM IST

ಬೆಂಗಳೂರು :ಸಾಮಾನ್ಯವಾಗಿ ಯುವತಿಯರ ಮೇಲೆ ಯುವಕರು ಆ್ಯಸಿಡ್‌ ಎರಚುವುದು ಕೇಳಿರುತ್ತೇವೆ ಆದರೆ ಶ್ರೀರಾಂಪುರದಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಯುವತಿಯೊಬ್ಬಳು ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಆ್ಯಸಿಡ್‌ ಎರಚಿದ್ದಾಳೆ.

ಜಯಕುಮಾರ್‌ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ದಾಳಿ ನಡೆಸಿದ್ದಾಳೆ ಎನ್ನಲಾದ ಲಿಡಿಯಾ ಎಂಬ ಯುವತಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಲಿಡಿಯಾ  ಮತ್ತು ಕಿರಣ್‌ ಕಳೆದ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಮದುವೆಯಾಗಲು ನಿರಾಕರಿಸಿ ವಂಚಿಸಲು ಮುಂದಾಗಿದ್ದಾನೆ ಎಂದು ಹತಾಶಳಾದ ಲಿಡಿಯಾ ಮುಖಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿ ಆ್ಯಸಿಡ್‌ ಮಾದರಿಯ ವಸ್ತು ಎರಚಿ ಮುಖ ವಿರೂಪಗೊಳಿಸಿರುವುದಾಗಿ ವರದಿಯಾಗಿದೆ. 


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಕಾನೂನು ಜಾರಿ, ಅಂಬೇಡ್ಕರ್‌ ಸ್ಮಾರ್ಟ್‌ ಕಾರ್ಡ್‌ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ...

  • ಬೆಂಗಳೂರು: ನಗರದಲ್ಲಿ ಹೊಸ ವಾಹನ ಖರೀದಿಸುವವರು ಕಡ್ಡಾಯವಾಗಿ ಆ ವಾಹನ ನಿಲುಗಡೆಗೆ ಜಾಗ ಇರುವ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ಇನ್ನು ಈಗಾಗಲೇ ವಾಹನ ಇರುವವರಿಗೆ...

  • ಬೆಂಗಳೂರು: "ಬಯಲು ಬಹಿರ್ದೆಸೆ ಮುಕ್ತ' (ಒಡಿಎಫ್) ಎಂದು ಬೆಂಗಳೂರು ಅಧಿಕೃತವಾಗಿ ಪ್ರಮಾಣೀಕರಿಸಿಕೊಳ್ಳದ ಹಿನ್ನೆಲೆಯಲ್ಲಿ ಈ ಬಾರಿಯೂ ಬಿಬಿಎಂಪಿ ಸ್ವಚ್ಛ ಸರ್ವೇಕ್ಷಣ್‌ನಲ್ಲಿ...

  • ಬೆಂಗಳೂರು: ರಸ್ತೆಯಲ್ಲಿನ ಕಸ ಗಾಳಿಗೆ ಹಾರಿ ಮನೆಯೊಳಗೆ ಬರುತ್ತದೆ ಅಂತ ಮನೆಗೆ ಬೀಗಹಾಕಿ ಎಲ್ಲರೂ ಹೊರಗೆ ವಾಸವಿದ್ದರೆ ಹೇಗಿರುತ್ತದೆ? ಕೇಳಲಿಕ್ಕೂ ಇದು ಹಾಸ್ಯಾಸ್ಪದ....

  • ಬೆಂಗಳೂರು: ಮಟನ್‌ ಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರವೇ ಈಗ ಕುರಿ ಮಾಂಸದ ಸಂಚಾರಿ ಮಳಿಗೆಗಳನ್ನು ತೆರೆಯುವ ಮೂಲಕ ಮಾಂಸ ಪ್ರಿಯರಿಗೆ ತಾಜಾ ಮಾಂಸದ ಊಟ ನೀಡಲು...

ಹೊಸ ಸೇರ್ಪಡೆ