ವಯಸ್ಕರಿಗೆ ಕ್ಯಾನ್ಸರ್‌ ಪತ್ತೆ ಪರೀಕ್ಷೆ ಅಗತ್ಯ


Team Udayavani, Feb 4, 2020, 3:06 AM IST

vayaskarige

ಬೆಂಗಳೂರು: ಕ್ಯಾನ್ಸರ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಶೀಘ್ರ ರೋಗ ಪತ್ತೆ ಅತ್ಯಾವಶ್ಯಕವಾಗಿದ್ದು, ವಯಸ್ಕರು ಪ್ರತಿ ವರ್ಷ ಕ್ಯಾನ್ಸರ್‌ ಪತ್ತೆ ಪರೀಕ್ಷೆಗಳಿಗೆ ಒಳಗಾಗಬೇಕು ಎಂದು ಮಣಿಪಾಲ್‌ ಆಸ್ಪತ್ರೆಯ ಕ್ಯಾನ್ಸರ್‌ ವಿಭಾಗದ ಮುಖ್ಯಸ್ಥ ಡಾ.ಪಿ.ಎಸ್‌. ಸೋಮಶೇಖರ್‌ ತಿಳಿಸಿದರು.

ವಿಶ್ವ ಕ್ಯಾನ್ಸರ್‌ ದಿನ ಹಿನ್ನೆಲೆ ಸೋಮವಾರ ಮಣಿಪಾಲ್‌ ಆಸ್ಪತ್ರೆ ಹಮ್ಮಿಕೊಂಡಿದ್ದ ಜಾಗೃತಿ ಹಾಗೂ ಕ್ಯಾನ್ಸರ್‌ ಮುಕ್ತ ಸಮಾಜ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ತಂತ್ರಜ್ಞಾನ ಅಭಿವೃದ್ಧಿ ಹಾಗೂ ಸಂಶೋಧನೆಗಳ ಫ‌ಲವಾಗಿ ಕ್ಯಾನ್ಸರ್‌ ಗುಣಪಡಿಸುವಂಥ ಕಾಯಿಲೆ ಪಟ್ಟಿಗೆ ಸೇರಿದೆ. ಕ್ಯಾನ್ಸರ್‌ ಮೂರನೇ ಹಂತ ಹಾಗೂ ಇತ್ತೀಚೆಗೆ ನಾಲ್ಕನೇ ಹಂತ ತಲುಪಿದಾಗಲು ಉತ್ತಮ ಚಿಕಿತ್ಸೆಯಿಂದ ಕ್ಯಾನ್ಸರ್‌ ಗುಣವಾಗಿದೆ.

ವ್ಯಕ್ತಿಯಲ್ಲಿ ರೋಗ ಶೀಘ್ರ ಪತ್ತೆಯಾದಷ್ಟು ಹಾನಿ ಕಡಿಮೆ. ಹೀಗಾಗಿ, ವಯಸ್ಕರು ಉತ್ತಮ ಭವಿಷ್ಯಕ್ಕಾಗಿ ಪ್ರತಿ ವರ್ಷ ತಮ್ಮ ಅಥವಾ ತಮ್ಮ ಪ್ರೀತಿ ಪಾತ್ರರ ಹುಟ್ಟುಹಬ್ಬ ಸಂದರ್ಭದಲ್ಲಿ ಕ್ಯಾನ್ಸರ್‌ ಪತ್ತೆ ಪರೀಕ್ಷೆಗೆ ಮಾಡಿಸಬೇಕು. 2 ರಿಂದ 3 ಸಾವಿರದಲ್ಲಿ ಕ್ಯಾನ್ಸರ್‌ ಪತ್ತೆ ಪರೀಕ್ಷೆ ಪ್ಯಾಕೇಜ್‌ಗಳು ಎಲ್ಲಾ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ತಿಳಿಸಿದರು.

ಕ್ಯಾನ್ಸರ್‌ ರೋಗ ಪ್ರಾಥಮಿಕವಾಗಿ ವಂಶವಾಹಿ ಮತ್ತು ಪರಿಸರ ಸಂಬಂಧಿ ಅಂಶಗಳಿಂದ ಉಂಟಾ ಗುತ್ತದೆ. ದೇಹದ ಯಾವುದೇ ಭಾಗದ ಮೇಲೆ ಪರಿ ಣಾಮ ಬೀರಬಲ್ಲದು. ರಾಷ್ಟ್ರೀಯ ಕ್ಯಾನ್ಸರ್‌ ತಡೆಯುವ ಮತ್ತು ಸಂಶೋಧನಾ ಸಂಸ್ಥೆ(ಎನ್‌ಐಸಿಪಿಆರ್‌) ಪ್ರಕಾರ ಸುಮಾರು 2.25 ದಶಲಕ್ಷ ಜನರು ಕ್ಯಾನ್ಸರ್‌ ಜತೆಗೆ ಬದುಕುತ್ತಿದ್ದಾರೆ. ಆಧುನಿಕ ಜೀವನ ಶೈಲಿಯಿಂದ ಹೆಣ್ಣುಮಕ್ಕಳಲ್ಲಿ ಸ್ತನ ಕ್ಯಾನ್ಸರ್‌ ಹಾಗೂ ಗರ್ಭಕೋಶ ಕ್ಯಾನ್ಸರ್‌ ಹೆಚ್ಚಾಗುತ್ತಿದೆ. ಬೆಂಗಳೂರಿಗರಲ್ಲಿ ಸ್ತನ ಕ್ಯಾನ್ಸರ್‌ಗೆ ತುತ್ತಾಗುತ್ತಿರುವ ಪ್ರಮಾಣ ದುಪಟ್ಟಾಗಿದೆ.

ಕ್ಯಾನ್ಸರ್‌ ರೋಗಿಗಳ ಪೈಕಿ ಶೇ.40ಕ್ಕೂ ಹೆಚ್ಚು ಮಂದಿ ನಾಲ್ಕನೇ ಹಂತ ತಲುಪಿದಾಗ ಆಸ್ಪತ್ರೆಗೆ ಬರುತ್ತಿದ್ದಾರೆ. ಇನ್ನು ಕ್ಯಾನ್ಸರ್‌ ಎದುರಿಸು ಜೀವನ ಶೈಲಿ ಬದಲಾವಣೆ, ನಿರಂತರ ಕ್ಯಾನ್ಸರ್‌ ಪತ್ತೆ ಪರೀಕ್ಷೆ ಅತ್ಯಗತ್ಯವಾಗಿದೆ ಎಂದರು.

ಅತ್ಯಾಧುನಿಕ ಹೈಪರ್‌ಥರ್ಮಿಕ್‌ ಇಂಟ್ರಾ ಪೆರಿಟೋನಿಯಲ್‌ ಕಿಮೋಥೆರಪಿ(ಎಚ್‌ಐಪಿಇಸಿ) ಬಳಸಿಕೊಂಡು ಸುಮಾರು 350ಕ್ಕೂ ಹೆಚ್ಚಿನ ಪ್ರಕರಣಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಎಚ್‌ಐಪಿಇಸಿ ಚಿಕಿತ್ಸೆಯಲ್ಲಿ ರೋಗ ಗುಣಮುಖ ಪ್ರಮಾಣ ಶೇ.70ರಷ್ಟಿದೆ. ಹೀಗಾಗಿಯೇ ಆಗ್ನೇಯ ಏಷ್ಯಾದಲ್ಲಿಯೇ ಅತ್ಯಂತ ಹೆಚ್ಚು ಶಿಫಾರಸ್ಸು ಮಣಿಪಾಲ್‌ ಆಸ್ಪತ್ರೆಗೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಟಿ ಗಾನವಿ ಲಕ್ಷ್ಮಣ್‌ ಮಾತನಾಡಿ, ಕ್ಯಾನ್ಸರ್‌ ನಿಜಕ್ಕೂ ಮಾರಕ ಮತ್ತು ಬಹಳ ನೋವುಂಟು ಮಾಡುವ ರೋಗವಾಗಿದೆ. ಆದರೆ ಸಕಾರಾತ್ಮಕ ಮನೋಭಾವ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರೊಂದಿಗೆ ಕ್ಯಾನ್ಸರ್‌ ಜಯಿಸಬ ಹುದು. ಆರೋಗ್ಯಕರ ಜೀವನಶೈಲಿ ಉಳಿಸಿಕೊಳ್ಳುವುದು ಮತ್ತು ತಂಬಾಕು ಮತ್ತು ಮದ್ಯಪಾನಗಳನ್ನು ತಪ್ಪಿಸುವುದು ಮುಖ್ಯವಾಗಿರುತ್ತದೆ ಎಂದರು.

ಈ ವೇಳೆ ಕ್ಯಾನ್ಸರ್‌ನಿಂದ ಗುಣಮುಖರಾದವರು ತಮ್ಮ ಅನುಭವವನ್ನು ಹಂಚಿಕೊಂಡು ಮಣಿಪಾಲ್‌ ಆಸ್ಪತ್ರೆ ವೈದ್ಯರಿಗೆ ಧನ್ಯವಾದ ತಿಳಿಸಿದರು. ನಂತರ ಮಣಿಪಾಲ್‌ ಆಸ್ಪತ್ರೆ ಕ್ಯಾನ್ಸರ್‌ ಕೇಂದ್ರದ ವೈದ್ಯರು ಸಿಬ್ಬಂದಿಗಳು ” ವಿಶ್ವ ಕ್ಯಾನ್ಸರ್‌ ದಿನ’ ಅಂಗವಾಗಿ ಕ್ಯಾನ್ಸರ್‌ ಮುಕ್ತ ಭವಿಷ್ಯಕ್ಕಾಗಿ ಪ್ರತಿಜ್ಞೆ ಕೈಗೊಂಡರು.

ಬಡವರಿಗೂ ಸಹಾಯ ಹಸ್ತ: ಮಣಿಪಾಲ್‌ ಆಸ್ಪತ್ರೆಯ ಚೇರ್ಮನ್‌ ಡಾ. ಸುದರ್ಶನ್‌ ಬಲ್ಲಾಳ್‌ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್‌ ರೋಗಿಗಳ ನೆರವಿಗೆ ಮಣಿಪಾಲ್‌ ಆಸ್ಪತ್ರೆಯಲ್ಲಿ ತಂಡ ರಚಿಸಲಾಗಿದೆ. ಈ ತಂಡವು ಆರ್ಥಿಕವಾಗಿ ಹಿಂದುಳಿದವರಿಗೆ ಆಸ್ಪತ್ರೆಯ ವಿವಿಧ ಯೋಜನೆಗಳಲ್ಲಿ ಲಭ್ಯವಾಗುವ ಸಹಾಯಧನ ಕುರಿತು ಮಾಹಿತಿ ನೀಡಲಿದೆ.

ಜತೆಗೆ ಕ್ಯಾನ್ಸರ್‌ ರೋಗಿಗಳಿಗೆ ನೆರವಾಗಲು ಆಸ್ಪತ್ರೆ ಸಹಾಯ ನಿಧಿ ಇದೆ. ಅಲ್ಲದೇ ಆಸ್ಪತ್ರೆ ಸಿಬ್ಬಂದಿ ಹಾಗೂ ದಾನಿಗಳ ನೆರವು ಪಡೆದು ಸಹಾಯಧನ ಸಂಗ್ರಹಿಸಿ ಸಾಧ್ಯವಾದಷ್ಟು ಸಹಾಯ ಮಾಡಲಾಗುತ್ತಿದೆ. ವಾರ್ಷಿಕ ಒಂದು ಮಗುವಿಗೆ ಉಚಿತವಾಗಿ ಮೂತ್ರಪಿಂಡ ಕಸಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.