ಅನಂತಕುಮಾರ್ ಹೆಗಡೆ ವಿರುದ್ಧ ಆರ್.ವಿ.ದೇಶಪಾಂಡೆ ಆಕ್ರೋಶ
Team Udayavani, Feb 1, 2019, 12:35 AM IST
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹಾಗೂ ಕೆಪಿಸಿಸಿ ಆಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಡಿರುವ ಮಾತುಗಳು ಭಾರತೀಯ ಸಂಸ್ಕೃತಿಗೆ ಕಳಂಕ ಎಂದು ಕಂದಾಯ ಸಚಿವ
ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಐದು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಆನಂತಕುಮಾರ ಹೆಗಡೆಯವರು ಅಭಿವೃದ್ಧಿ
ಎಂದರೇನು ? ಎಂಬುದೇ ತಿಳಿಯದವರಾಗಿದ್ದಾರೆ. ಹೀಗಾಗಿ, ಚುನಾವಣೆ ಹತ್ತಿರ ಇರುವಾಗ ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಹೀನ ತಂತ್ರದ ಮೊರೆ ಹೋಗಿದ್ದಾರೆ. ದೇಶದ ಅಭಿವೃದ್ಧಿ ಬಗ್ಗೆ ಮಾತನಾಡಲು ಯಾವ ಗಟ್ಟಿ ವಿಚಾರವನ್ನೂ ಹೊಂದಿರದ ಕೇಂದ್ರ ಸಚಿವರು, ತಮ್ಮ ರಾಜಕೀಯ ಎದುರಾಳಿಗಳನ್ನು ಹಣಿಯಲು ಧಾರ್ಮಿಕ ವಿಚಾರಗಳನ್ನು ಪ್ರಸ್ತಾಪಿಸುವ ವ್ಯಸನಕ್ಕೆ ತುತ್ತಾಗಿದ್ದಾರೆ ಎಂದು ಹೇಳಿದ್ದಾರೆ ಎಂದರು.