ಅಂಬಿ ಸ್ಮಾರಕ ಸಭೆ ಮುಂದೂಡಿಕೆ

Team Udayavani, Dec 4, 2018, 6:00 AM IST

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ನಟ ಎಸಗುತ್ತಿದ್ದ ಹಾಗೂ ಕೇಂದ್ರದ ಮಾಜಿ ಸಚಿವ ಅಂಬರೀಶ್‌ ಅವರ ಸ್ಮಾರಕ ನಿರ್ಮಾಣ ಮಾಡುವ ಕುರಿತು ಸೋಮವಾರ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ನಿಗದಿಯಂತೆ ಸಭೆಗೆ ಆಗಮಿಸಿದ್ದರು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ, ಅಂಬರೀಶ್‌ ನಿಧನ ಬಳಿಕ ಅವರ ಹನ್ನೊಂದನೆ ದಿನದ ಕಾರ್ಯ ಮುಗಿದ ಮೇಲೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ, ಸೋಮವಾರ ನಡೆಯ ಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಅಂಬರೀಶ್‌ ಸ್ಮಾರಕ ಮಾಡುವ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯನ್ನು ಮುಂದೂಡಲಾಗಿದೆ. ಅದೇ ಸಭೆಯಲ್ಲಿ ವಿಷ್ಣುವರ್ಧನ ಅವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಹೇಳಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ