ಅನ್ನಭಾಗ್ಯ: ಸಿದ್ದರಾಮಯ್ಯ ಕೈಮೇಲು

Team Udayavani, Aug 20, 2018, 6:00 AM IST

anna-600.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಮಿತ್ರಪಕ್ಷಗಳ ಮಧ್ಯೆ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬೀಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಪರಿಷ್ಕೃತ ಅನ್ನಭಾಗ್ಯ ಯೋಜನೆಗೆ ಕತ್ತರಿ ಬೀಳಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಯೋಜನೆ ಅಬಾಧಿತವಾಗಲಿದೆ. ಇದರೊಂದಿಗೆ ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಕೈ ಮೇಲಾಗಲಿದೆ.

ಅಂದರೆ, ಅನ್ನಭಾಗ್ಯ ಯೋಜನೆಯಡಿ ಹಿಂದಿನ ಸಿದ್ದರಾಮಯ್ಯ ಸರ್ಕಾರ ಬಿಪಿಎಲ್‌ ಕುಟುಂಬಗಳಿಗೆ ನೀಡುತ್ತಿದ್ದ ಏಳು ಕೆ.ಜಿ ಅಕ್ಕಿ ಮುಂದುವರಿಯಲಿದೆ. ಈಗಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಬಜೆಟ್‌ನಲ್ಲಿ ಘೋಷಿಸಿರುವ ಅಕ್ಕಿಯಪ್ರಮಾಣ 5 ಕೆ.ಜಿ.ಗೆ ಇಳಿಸುವುದು, ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯನಿಗೆ ರಿಯಾಯಿತಿ ದರದಲ್ಲಿ ಅರ್ಧ ಕೆ.ಜಿ. ತೊಗರಿ ಬೇಳೆ, ಪ್ರತಿ ಕುಟುಂಬಕ್ಕೆ ತಲಾ ಒಂದು ಕೆ.ಜಿ ಸಕ್ಕರೆ, ತಾಳೆ ಎಣ್ಣೆ ಮತ್ತು ಆಯೋಡಿನ್‌ಯುಕ್ತ ಉಪ್ಪು ವಿತರಿಸುವ ಯೋಜನೆ ಕೈಬಿಡಲು ತೀರ್ಮಾನಿಸಲಾಗಿದೆ.

ಅನ್ನಭಾಗ್ಯ ಯೋಜನೆಯ ಅಕ್ಕಿಗೆ ಕತ್ತರಿ ಹಾಕುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿರ್ಧಾರ ಮಿತ್ರ ಪಕ್ಷ ಕಾಂಗ್ರೆಸ್‌ನವರ ಅಸಮಾಧಾನಕ್ಕೆ ಕಾರಣವಾಗಿತ್ತು. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರು ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ್ದ ಕಾರ್ಯಕ್ರಮವನ್ನು ಸಮನ್ವಯ ಸಮಿತಿಯಲ್ಲಿ ಚರ್ಚಿಸದೆ ಬದಲಾವಣೆ ಮಾಡಿದ್ದು ಸರಿಯಲ್ಲ. ಯಾವುದೇ ಕಾರಣಕ್ಕೂ ಅಕ್ಕಿ ಪ್ರಮಾಣ ಕಡಿಮೆ ಮಾಡಬಾರದು ಎಂಬ ಒತ್ತಡ ಕೇಳಿಬಂದಿತ್ತು. ಈ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಸಿದ್ದರಾಮಯ್ಯ ಅವರೂ ಅಕ್ಕಿ ಪ್ರಮಾಣ ಕಡಿಮೆ ಮಾಡದಂತೆ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದರು. ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದೀಗ ಈ ಒತ್ತಡಕ್ಕೆ ಮಣಿದಿರುವ ಸರ್ಕಾರ, ಅನ್ನಭಾಗ್ಯ ಯೋಜನೆ ಪರಿಷ್ಕರಣೆಯಿಂದ ಆಗುವ ಹೆಚ್ಚುವರಿ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳುವ ನೆಪದಲ್ಲಿ ಸದ್ಯ ಜಾರಿಯಲ್ಲಿರುವ ಅನ್ನಭಾಗ್ಯ ಯೋಜನೆಯಂತೆ ಪ್ರತಿ ಕುಟುಂಬಕ್ಕೆ ಉಚಿತವಾಗಿ ಏಳು ಕೆ.ಜಿ ಅಕ್ಕಿ ಮತ್ತು ರಿಯಾಯಿತಿ ದರದಲ್ಲಿ 1 ಕೆ.ಜಿ. ತೊಗರಿ ಬೇಳೆ ನೀಡುವುದನ್ನೇ ಮುಂದುವರಿಸಲು ತೀರ್ಮಾನಿಸಿದೆ. ಹೀಗಾಗಿ ಕುಮಾರಸ್ವಾಮಿ ಅವರು ತಮ್ಮ ಬಜೆಟ್‌ನಲ್ಲಿ ಮಾಡಿರುವ ಪರಿಷ್ಕೃತ ಘೋಷಣೆ ಜಾರಿಗೆ ಬರುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉನ್ನತ ಮೂಲಗಳು ತಿಳಿಸಿವೆ.

ಹಿಂದಿನ ಸರ್ಕಾರ ಅನ್ನಭಾಗ್ಯ ಯೋಜನೆಯಡಿ  ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯನಿಗೆ ಏಳು ಕೆ.ಜಿ. ಅಕ್ಕಿ, ಒಂದು ಕಾರ್ಡ್‌ಗೆ ರಿಯಾಯಿತಿ ದರದಲ್ಲಿ ಒಂದು ಕೆ.ಜಿ. ತೊಗರಿಬೇಳೆ ವಿತರಿಸುತ್ತಿತ್ತು. 2018-19ನೇ ಸಾಲಿನ ಬಜೆಟ್‌ನಲ್ಲೂ ಇದ್ನನು ಮುಂದುವರಿಸುವ ಬಗ್ಗೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಘೋಷಿಸಿದ್ದರು. ಆದರೆ, ಸರ್ಕಾರ ಬದಲಾಗಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಮೇಲೆ ಪರಿಷ್ಕೃತ ಬಜೆಟ್‌ ಮಂಡಿಸಿದ್ದು, ಈ ಬಜೆಟ್‌ನಲ್ಲಿ ಅಕ್ಕಿಯ ಪ್ರಮಾಣವನ್ನು 5 ಕೆ.ಜಿ.ಗೆ ಇಳಿಸಲಾಗಿತ್ತು. ಅದರ ಬದಲು ಕುಟುಂಬದ ಎಲ್ಲಾ ಸದಸ್ಯರಿಗೆ ತಲಾ ಅರ್ಧ ಕೆ.ಜಿ. ತೊಗರಿಬೇಳೆ, ಪ್ರತಿ ಕಾರ್ಡ್‌ಗೆ ಒಂದು ಕೆ.ಜಿ. ಸಕ್ಕರೆ, ಒಂದು ಕೆ.ಜಿ. ಅಯೋಡಿನ್‌ಯುಕ್ತ ಉಪ್ಪು ಹಾಗೂ ಒಂದು ಕೆ.ಜಿ. ತಾಳೆ ಎಣ್ಣೆಯನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಘೋಷಿಸಲಾಗಿತ್ತು. ಪರಿಷ್ಕೃತ ಯೋಜನೆಯನ್ನು ಅಕ್ಟೋಬರ್‌ 1ರಿಂದ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು.

ಅದರಂತೆ ಸೆಪ್ಟೆಂಬರ್‌ ತಿಂಗಳವರೆಗೆ ಹಳೆಯ ಪದ್ದತಿ ಪ್ರಕಾರ ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯನಿಗೆ ಏಳು ಕೆ.ಜಿ ಅಕ್ಕಿ ಮತ್ತು ಒಂದು ಕುಟುಂಬಕ್ಕೆ 1 ಕೆ.ಜಿ ತೊಗರಿ ಬೇಳೆ ರಿಯಾಯಿತಿ ದರದಲ್ಲಿ ಕೊಡಲು ಮತ್ತು ಅಕ್ಟೋಬರ್‌ನಿಂದ ಪರಿಷ್ಕೃತ ಯೋಜನೆ ಜಾರಿಗೊಳಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದರು. ಆದರೆ, ಇದೀಗ ವರಸೆ ಬದಲಿಸಿರುವ ಅಧಿಕಾರಿಗಳು, “ಹಳೆಯ ಪದ್ದತಿಯಂತೆ ಅನ್ನಭಾಗ್ಯ ಯೋಜನೆ ಮುಂದುವರಿಯಲಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಅಂತಿಮ ತೀರ್ಮಾನವಷ್ಟೇ ಬಾಕಿ ಇದೆ’ ಎಂದು ಹೇಳುತ್ತಿದ್ದಾರೆ.

ಹೊಸ ಬಜೆಟ್‌ನಲ್ಲಿ ಘೋಷಿಸಿದಂತೆ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ತರಬೇಕಾದರೆ ರಾಜ್ಯ ಸರ್ಕಾರದ ಬೊಕ್ಕಸದ ಮೇಲೆ ಪ್ರತಿ ತಿಂಗಳು ಅಂದಾಜು 850ರಿಂದ 900 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುತ್ತದೆ. 2 ಕೆ.ಜಿ. ಅಕ್ಕಿ ಕಡಿತಗೊಳಿಸಿದರೂ 160ರಿಂದ 170 ಕೋಟಿ ರೂ. ಉಳಿಕೆಯಾಗಬಹುದು. ಏಕೆಂದರೆ, ಅನ್ನಭಾಗ್ಯ ಯೋಜನೆಯಡಿ ಒಬ್ಬ ವ್ಯಕ್ತಿಗೆ 5 ಕೆ.ಜಿ. ಅಕ್ಕಿಯನ್ನು ಕೇಂದ್ರ ಸರ್ಕಾರ 3 ರೂ.ಗೆ ನೀಡುತ್ತಿತ್ತು. ಉಳಿದ 2 ಕೆ.ಜಿಯನ್ನು ರಾಜ್ಯ ಸರ್ಕಾರವೇ ಖರೀದಿಸಿ ನೀಡಬೇಕಿತ್ತು.

ಆದರೆ, ಹೊಸ ಘೋಷಣೆಯಂತೆ ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯನಿಗೆ ಅರ್ಧ ಕೆ.ಜಿ ತೊಗರಿ ಬೇಳೆ, ಕುಟುಂಬಕ್ಕೆ ತಲಾ ಒಂದು ಕೆ.ಜಿ. ಸಕ್ಕರೆ, ಎಣ್ಣೆ, ಉಪ್ಪು ಕೊಡಲು ತಗಲುವ ವೆಚ್ಚ ಮೂರು ಪಟ್ಟು ಹೆಚ್ಚಾಗಲಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಪ್ರತಿ ಬಿಪಿಎಲ್‌ ಕುಟುಂಬಕ್ಕೆ 1 ಕೆ.ಜಿ ತೊಗರಿ ಬೇಳೆ ರಿಯಾಯತಿ ದರದಲ್ಲಿ ಕೊಡಲು ಮಾಸಿಕ 332 ಕೋಟಿ ರೂ. ವೆಚ್ಚ ಮಾಡುತ್ತಿತ್ತು. ಈಗ ಕುಟುಂಬದ ಬದಲು ಪ್ರತಿ ಸದಸ್ಯನಿಗೆ ಅರ್ಧ ಕೆ.ಜಿ ತೊಗರಿ ಬೇಳೆ ನೀಡಿದರೆ ಒಂದು ಕುಟುಂಬದಲ್ಲಿ 5 ಮಂದಿ ಸದಸ್ಯರು ಎಂಬ ಸರ್ಕಾರದ ಮಾನದಂಡದಂತೆ ಒಬ್ಬ ಸದದಸ್ಯನಿಗೆ ಅರ್ಧ ಕೆ.ಜಿಯಂತೆ ಈಗ ಕೊಡುವ ಒಂದು ಕೆ.ಜಿ. ಜತೆಗೆ ಹೆಚ್ಚುವರಿಯಾಗಿ ಒಂದೂವರೆ ಕೆ.ಜಿ ತೊಗರಿ ಬೇಳೆ ಖರೀದಿಸಬೇಕು. ಇದರಿಂದ ತೊಗರಿಬೆಳೆಗಾಗಿ ಸರ್ಕಾರ ತಿಂಗಳಿಗೆ 332 ಕೋಟಿ ರೂ. ಬದಲು 830 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಅದೇ ರೀತಿ 1.08 ಕೋಟಿ ಬಿಪಿಎಲ್‌ ಕುಟುಂಬಗಳಿಗೆ ತಲಾ 1 ಕೆ.ಜಿ.ಯಂತೆ ರಿಯಾಯಿತಿ ದರದಲ್ಲಿ ಸಕ್ಕರೆ, ಎಣ್ಣೆ ಮತ್ತು ಉಪ್ಪು ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸಬೇಕಾದರೆ ತಿಂಗಳಿಗೆ ಕನಿಷ್ಟ 80ರಿಂದ 90 ಕೋಟಿ ರೂ. ಬೇಕಾಗುತ್ತದೆ.

ಸಚಿವರ ಪಟ್ಟು?:
ಅನ್ನಭಾಗ್ಯ ಯೋಜನೆ ಕುರಿತಂತೆ ಇತ್ತೀಚೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹಮದ್‌ ಅವರು ಅನ್ನಭಾಗ್ಯ ಯೋಜನೆಯ ಅಕ್ಕಿ ಕಡಿತ ಮಾಡುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹಿಂದಿನ ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಯಥಾವತ್‌ ಮುಂದುವರಿಸುವುದಾಗಿ ಹೇಳಿ ಅನ್ನ ಭಾಗ್ಯದ ಅಕ್ಕಿ ಪ್ರಮಾಣ ಕಡಿಮೆ ಮಾಡುವುದು ಸರಿಯಲ್ಲ. ಮೊದಲಿನಂತೇ ಏಳು ಕೆ.ಜಿ. ಮುಂದುವರಿಸಬೇಕು. ಉಳಿಂದತೆ, ಹೊಸ ಬಜೆಟ್‌ನಲ್ಲಿ ಘೋಷಿಸಿರುವ ಹೆಚ್ಚುವರಿ ತೊಗರಿ ಬೇಳೆ, ಸಕ್ಕರೆ, ಎಣ್ಣೆ ಮತ್ತು ಉಪ್ಪು ಕೊಡುವುದು ಅಥವಾ ಬಿಡುವುದು ನಿಮಗೆ ಬಿಟ್ಟ ವಿಚಾರ ಎಂದು ಹೇಳಿದ್ದರು. ಈ ಕಾರಣಕ್ಕಾಗಿ ಮತ್ತಷ್ಟು ಹೊರೆ ಹೆಚ್ಚಿಸಿಕೊಳ್ಳಲು ಬಯಸದ ಮುಖ್ಯಮಂತ್ರಿಗಳು ಏಳು ಕೆ.ಜಿ. ಅಕ್ಕಿ ಮುಂದುವರಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.