ವಾಲಿದ ಮತ್ತೊಂದು ಕಟ್ಟಡ

Team Udayavani, May 14, 2019, 3:06 AM IST

ಕೆ.ಆರ್‌.ಪುರ: ಕೆಲ ತಿಂಗಳ ಹಿಂದಷ್ಟೇ ಮಾರತ್ತಹಳ್ಳಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಬಿರುಕು ಬಿಟ್ಟ ಪ್ರಕರಣದ ನೆನಪು ಮಾಸುವ ಮುನ್ನವೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೊಂದು ಕಟ್ಟಡ ವಾಲಿದ ಬಿಟ್ಟ ಘಟನೆ ನಡೆದಿದೆ.

ಕೆ.ಆರ್‌.ಪುರ ಸಮೀಪದ ಹೊರಮಾವು ಬಳಿಯ ರೈಲ್ವೆ ಅಂಡರ್‌ ಪಾಸ್‌ ಸಮೀಪದ ಲಾಲ್‌ಸಿಂಗ್‌ ಎಂಬವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡವೊಂದು ಬಲಭಾಗಕ್ಕೆ ವಾಲಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ, ಕಟ್ಟಡದಲ್ಲಿನ ಜನರನ್ನು ಸ್ಥಳಾಂತರಗೊಳಿಸಿ ಅನಾಹುತ ತಪ್ಪಿಸಿದ್ದಾರೆ.

ಅಪಾಯದ ಸ್ಥಿತಿಯಲ್ಲಿರುವ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಕಟ್ಟಡದ ಮೂಲ ಮಾಲೀಕರಾದ ರತನ್‌ಲಾಲ್‌ ಹತ್ತು ವರ್ಷಗಳ ಹಿಂದೆ ಕಟ್ಟಡ ನಿರ್ಮಾಣ ಮಾಡಿದ್ದು, ಆ ಕಟ್ಟಡವನ್ನು ಲಾಲ್‌ಸಿಂಗ್‌ ಮೂರು ವರ್ಷಗಳ ಹಿಂದೆ ಖರೀದಿ ಮಾಡಿದ್ದರು. ಅದರಲ್ಲಿ ಜ್ಯುವೆಲ್ಲರಿ ಶಾಪ್‌ ಸೇರಿ ಮೂರು ಮನೆಗಳು ಇವೆ.

ಅದೇ ಕಟ್ಟಡದ ಪಕ್ಕದಲ್ಲಿ ಎಚ್‌ಆರ್‌ಬಿಆರ್‌ ಬಡಾವಣೆ ನಿವಾಸಿ ಕುಮರೇಶ್‌ ಎಂಬವರಿಗೆ ಸೇರಿದ ಜಾಗವಿದ್ದು, ಕಟ್ಟಡ ನಿರ್ಮಾಣ ಮಾಡಲು ಪಾಯ ತೆಗೆಯಲಾಗಿದೆ. ಆರು ಅಡಿಗೂ ಹೆಚ್ಚು ಅಳದ ಗುಂಡಿ ತೋಡಿದ ಹಿನ್ನೆಲೆಯಲ್ಲಿ ಮಣ್ಣು ಕುಸಿದು, ಪಕ್ಕದ ಮೂರು ಅಂತಸ್ಥಿನ ಕಟ್ಟಡ ವಾಲಿಕೊಂಡಿದೆ. ಅದನ್ನು ಕಂಡ ಕಟ್ಟಡ ಕಾರ್ಮಿಕರು ಜೋರಾಗಿ ಕೂಗಿಕೊಂಡು ಸ್ಥಳದಿಂದ ಓಡಿದ್ದು, ಕೂಗಾಟದ ಜೋರು ಶಬ್ಧ ಕೇಳಿ ಕಟ್ಟಡ ನಿವಾಸಿಗಳು ಹೊರ ಬಂದಿದ್ದಾರೆ.

ಕಟ್ಟಡದ ಬಳಿ ನಿರ್ಬಂಧ: ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಾಣಸವಾಡಿಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಹೆಣ್ಣೂರು ಪೊಲೀಸರು ಹಾಗು ಬಿಬಿಎಂಪಿ ಅಧಿಕಾರಿಗಳು ಕಟ್ಟಡ ಬಳಿ ಯಾರು ಹೋಗದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದು, ಕಟ್ಟಡದ ಅಕ್ಕ-ಪಕ್ಕದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿದರು.

ನಂತರ ಕಟ್ಟಡದ ಸುತ್ತ-ಮುತ್ತ ಯಾರು ಹೋಗದಂತೆ ನಿರ್ಬಂಧ ಹೇರಿದ್ದರು. ಲಾಲ್‌ಸಿಂಗ್‌ ಮೂರು ವರ್ಷಗಳ ಹಿಂದೆ ರತನ್‌ ಲಾಲ್‌ ಎಂಬುವವರಿಂದ ಕಟ್ಟಡ ಖರೀದಿ ಮಾಡಿದ್ದರು. ಚಿಕ್ಕ ನಿವೇಶನದಲ್ಲಿ ಭದ್ರವಾದ ಪಾಯ ಹಾಕದೆ ಮೂರು ಅಂತಸ್ತಿನ ನಿರ್ಮಾಣ ಮಾಡಿರುವುದೇ ಘಟನೆಗೆ ಕಾರಣ ಎಂದು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಸಂಚಾರ ನಿಯಮ ಕುರಿತು ಹೆಚ್ಚಳವಾಗಿರುವ ಪರಿಷ್ಕೃತ ದಂಡ ಕಡಿಮೆ ಮಾಡುವ ಕುರಿತು ಸರ್ಕಾರದಿಂದ ಯಾವುದೇ ಅಧಿಸೂಚನೆ ಬಂದಿಲ್ಲ. ಅದುವರೆಗೂ ಸೆ.3ರಂದು ಜಾರಿಗೆ...

  • ಬೆಂಗಳೂರು: ಸಾರ್ವಜನಿಕರಿಗೆ ಮಾದರಿಯಾಗುವ ಉದ್ದೇಶದಿಂದ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಜೀರೋ ವೇಸ್ಟ್‌ ಯೋಜನೆಯಡಿ ಸ್ಥಾಪಿಸಲಾಗಿದ್ದ ಸಂಸ್ಕರಣಾ ಘಟಕಗಳ...

  • ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪಮೇಯರ್‌ ಚುನಾವಣೆ ದಿನಾಂಕ ನಿಗದಿಯಾಗಿದ್ದು ಬಿಜೆಪಿ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿದ್ದು,...

  • ಕೆ.ಆರ್‌.ಪುರ: ಮನೆ ಮಹಡಿ ಮೇಲೆ ಆಟವಾಡುತ್ತಿದ್ದ ಮಕ್ಕಳು ಹೈಟೆನ್ಷನ್‌ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡ ಘಟನೆ ಕೆ.ಆರ್‌.ಪುರ ಪೊಸ್‌ ಠಾಣೆ ವ್ಯಾಪ್ತಿಯ ತ್ರಿವೇಣಿನಗರದಲ್ಲಿ...

  • ಬೆಂಗಳೂರು: ಹುಟ್ಟುಹಬ್ಬದ ದಿನದಂದು ಕುಟುಂಬ ಸದಸ್ಯರ ಜತೆ ಕಾಲ ಕಳೆಯಲು ರಜೆ ಪಡೆಯಲು ಸಾಧ್ಯವಾಗದೆ ಕೆಲಸದೊತ್ತಡದಿಂದ ತತ್ತರಿಸುತ್ತಿರುವ ನಗರ ಪೊಲೀಸ್‌ ಸಿಬ್ಬಂದಿಗೆ...

ಹೊಸ ಸೇರ್ಪಡೆ

  • ಜಿ.ಎಸ್‌. ಕಮತರ ವಿಜಯಪುರ: ತ್ಯಾಜ್ಯಗಳಿಂದಾಗಿ ಕೊಳಕು ನಾರುತ್ತಿರುವ ನಗರದ ಅರೆಕಿಲ್ಲಾ ಪ್ರದೇಶದಲ್ಲಿರುವ ಐತಿಹಾಸಿಕ ಗಗನ ಮಹಲ್ ಕಂದಕದಲ್ಲಿ ಬೋಟಿಂಗ್‌ ಆರಂಭಿಸಿ...

  • ಕನಕಗಿರಿ: ಪಟ್ಟಣದಲ್ಲಿ ಖಜಾನೆ ಮತ್ತು ಉಪ ನೋಂದಣಿ ಕಚೇರಿಯನ್ನು ಪ್ರಾರಂಭಿಸಲು ಈಗಾಗಲೇ ಬಾಡಿಗೆ ಕಟ್ಟಡ ಪಡೆಯಲಾಗಿದೆ. ಶೀಘ್ರವೇ ಕಚೇರಿ ಪ್ರಾರಂಭಿಸಲಾಗುವುದು...

  • ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಕನಕಾಪೂರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಯಲ್ಲಾಲಿಂಗನ...

  • •ರವೀಂದ್ರ ಮುಕ್ತೇದಾರ ಔರಾದ: ಔರಾದ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಮಾಡುವುದಕ್ಕಿಂತ ಸರ್ಕಾರ ಸಂತಪೂರ ಪಟ್ಟಣವನ್ನು ತಾಲೂಕು ಕೇಂದ್ರವಾಗಿಸಬೇಕು ಎಂದು ಜನಪ್ರತಿನಿಧಿಗಳು...

  • ಬಂಕಾಪುರ: ರಾಯಚೂರ ಗಲ್ಲಿಯಲ್ಲಿನ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೊಳಚೆ ನಿಂತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ. ಪರಿಣಾಮ ಮಕ್ಕಳಲ್ಲಿ...