ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ
Team Udayavani, Nov 22, 2018, 6:10 AM IST
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ (ನ.22) ನ.24 ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಅಕ್ಕಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ರಾಜ್ಯದಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೋಲಾರ,
ಚಿಕ್ಕಬಳ್ಳಾಪುರ ಸೇರಿದಂತೆ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಮಳೆಯ ಜತೆಗೆ ಎರಡು ದಿನ ದಕ್ಷಿಣ ಒಳನಾಡಿನಲ್ಲಿ ಚಳಿಗಾಳಿ ಬೀಸಲಿದೆ. ಬುಧವಾರ ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಉಂಟಾಗಿತ್ತು. ಕೆಲವೆಡೆ ತುಂತುರು ಮಳೆಯಾದ ವರದಿಯಾಗಿದೆ. ಇನ್ನು ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ಬುಧವಾರ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಅತಿ ಹೆಚ್ಚು ಕೋಲಾರದಲ್ಲಿ 17 ಮಿ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ