ನಲಪಾಡ್ರಿಂದ ಮತ್ತೆ ಜಾಮೀನು ಅರ್ಜಿ
Team Udayavani, Apr 29, 2018, 7:25 AM IST
ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್. ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಶನಿವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ನಲಪಾಡ್ ಪರ ವಕೀಲರು ಘಟನೆ ನಡೆದು 70 ದಿನಗಳು ಕಳೆದರೂ ಇದುವರೆಗೂ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಸಿಆರ್ಪಿಸಿ 167(2) ಅಡಿಯಲ್ಲಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿ ದರು. ಇದಕ್ಕೆ ವಿಶೇಷ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಮೊಹಮ್ಮದ್ ನಲಪಾಡ್ರನ್ನು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.