ಕೋಮಲ್ ಮೇಲೆ ಹಲ್ಲೆ: ಕೊಲೆ ಯತ್ನ ಕೇಸ್ ದಾಖಲು
Team Udayavani, Aug 15, 2019, 3:00 AM IST
ಬೆಂಗಳೂರು: ನಟ ಕೋಮಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರ ಪೊಲೀಸರು ಆರೋಪಿಯ ವಿರುದ್ಧ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಕ್ಕರಾಯನಕೆರೆ ನಿವಾಸಿ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಹಾಗೂ ಇತರೆ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ವಿಜಯ್ ವಿಚಾರಣೆ ಸಂದರ್ಭದಲ್ಲಿ ಕೋಮಲ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹೀಗಾಗಿ ಕೋಪಗೊಂಡು ಹಲ್ಲೆ ನಡೆಸಿರುವುದಾಗಿ ಹೇಳಿಕೆ ದಾಖಲಿಸಿದ್ದಾನೆ. ಆತನ ವಿರುದ್ಧ ಇದುವರೆಗೂ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಮಲ್ಲೇಶ್ವರ ಪೊಲೀಸರುಹೇಳಿದರು.