ಕೇಡರ್‌ ಬಲವನ್ನೇ ನೆಚ್ಚಿಕೊಂಡು ಹೋರಾಡಲು ಬಿಜೆಪಿ ನಿರ್ಧಾರ

Team Udayavani, Jan 25, 2018, 6:05 AM IST

BJP_symbol.jpg

ಬೆಂಗಳೂರು: ಬಿಜೆಪಿ ತನ್ನ ಕೇಡರ್‌ ಬಲವನ್ನೇ ನೆಚ್ಚಿಕೊಂಡು ಚುನಾವಣಾ ಸಮರದಲ್ಲಿ ಹೋರಾಡಲು ಮುಂದಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಹಲವು ಸಿನಿಮಾ ನಟ-ನಟಿಯರು ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ. ಇವರನ್ನು ಬಿಟ್ಟರೆ, ತಾವಾಗಿಯೇ ಪಕ್ಷಕ್ಕೆ ಬರುವವರಿಗಷ್ಟೇ ಆದ್ಯತೆ. ಇದರ ಹೊರತಾಗಿ ಬೇರೆ ನಟ-ನಟಿಯರನ್ನು ಓಲೈಸದಿರಲು ಬಿಜೆಪಿ ತೀರ್ಮಾನಿಸಿದೆ.

ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಲ್ಲಿ ಸಿನಿಮಾ ನಟ-ನಟಿಯರ ಸಂಖ್ಯೆ ಹೆಚ್ಚಾಗಿದೆ. ನಟ ಜಗ್ಗೇಶ್‌, ನಟಿಯರಾದ ತಾರಾ ಅನುರಾಧ, ಶೃತಿ, ಮಾಳವಿಕಾ, ಶಿಲ್ಪಾ ಗಣೇಶ್‌ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಹಿಂದೊಮ್ಮೆ ಚಿತ್ರರಂಗದಲ್ಲಿ ಮಿಂಚಿ ನಂತರ ಸಕ್ರಿಯ ರಾಜಕಾರಣಕ್ಕೆ ಮರಳಿರುವ ಸಿ.ಪಿ. ಯೋಗೀಶ್ವರ್‌ ಇದೀಗ ಬಿಜೆಪಿ ಸೇರಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಇದರ ಜತೆಗೆ ನಟ ಜೈಜಗದೀಶ್‌, ಸಾಯಿಕುಮಾರ್‌, ಬುಲೆಟ್‌ ಪ್ರಕಾಶ್‌ ಕೂಡ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಬರುತ್ತಾರೆ.

ಚುನಾವಣೆಗಷ್ಟೇ ಬರುವ ಸಿನಿಮಾ ನಟರನ್ನು ಬಳಸಿಕೊಂಡು ಅವರಿಗೆ ಆದ್ಯತೆ ನೀಡುವ ಬದಲು ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡಿದರೆ ಪಕ್ಷದ ಕೇಡರ್‌ ಸ್ಟ್ರೆಂಥ್‌ ಇನ್ನಷ್ಟು ಹೆಚ್ಚಾಗುತ್ತದೆ ಎಂಬುದು ಪಕ್ಷದ ಸಿದ್ಧಾಂತ. ಅದನ್ನೇ ಮುಂದುವರಿಸಲು ಬಿಜೆಪಿ ನಿರ್ಧರಿಸಿದೆ.

ನಟ-ನಟಿಯರು ರಾಜಕಾರಣದಲ್ಲಿ ಯಶಸ್ವಿಯಾಗಿಲ್ಲ:  ಬಿಜೆಪಿಯ ಈ ತೀರ್ಮಾನಕ್ಕೆ ಇನ್ನೊಂದು ಕಾರಣ ಎಂದರೆ ಚಿತ್ರರಂಗದಲ್ಲಿ ಮಿಂಚಿದ ಸ್ಟಾರ್‌ ನಟ-ನಟಿಯರು ಸಿನಿಮಾ ರಂಗದಂತೆ ರಾಜಕೀಯ ಕ್ಷೇತ್ರದಲ್ಲಿ ಯಶಸ್ವಿಯಾದ ಉದಾಹರಣೆ ರಾಜ್ಯದಲ್ಲಿ ಇಲ್ಲ. ಡಾ.ರಾಜ್‌ ರಂತಹ ಮೇರುನಟ ರಾಜಕೀಯದಿಂದ ದೂರ ಉಳಿದಿದ್ದರು. ವಿಷ್ಣುವರ್ಧನ್‌ ಕೂಡ ರಾಜಕೀಯಕ್ಕೆ ಬರಲಿಲ್ಲ. ಅಂಬರೀಷ್‌ ರಾಜಕೀಯಕ್ಕೆ ಬಂದರೂ ಯಶಸ್ವಿಯಾಗಲಿಲ್ಲ. ಅದೇ ರೀತಿ ರಾಜ್ಯದ ಜನ ಕೂಡ ಅಂಥವರನ್ನು ಪರದೆ ಮೇಲೆ ಹೀರೋಗಳು ಎಂದು ಪರಿಗಣಿಸುತ್ತಾರೆಯೇ ಹೊರತು ರಾಜಕೀಯದಲ್ಲಿ ಹೀರೋ ಎಂದು ಭಾವಿಸುವುದಿಲ್ಲ. ಪರಿಸ್ಥಿತಿ ಹೀಗಿರುವಾಗ ಸ್ಟಾರ್‌ ನಟ-ನಟಿಯರನ್ನು ಕೇವಲ ಪ್ರಚಾರಕ್ಕೆ ಬಳಸಿಕೊಳ್ಳುವುದು ಬೇಡ ಎಂಬುದು ಪಕ್ಷದ ಯೋಚನೆ ಎಂದು ಹೇಳಲಾಗಿದೆ.

– ಎಂ. ಪ್ರದೀಪ ಕುಮಾರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.