ವಿಧಾನಸಭೆ ಚುನಾವಣೆ: ಇಂದು ಬಿಜೆಪಿ ಮೂರನೇ ಪಟ್ಟಿ ?
Team Udayavani, Apr 18, 2018, 6:00 AM IST
ಬೆಂಗಳೂರು:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆ ಸಮಾಲೋಚನೆ ನಂತರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿ ಬುಧವಾರ ಬಿಡುಗಡೆಯಾಗುವ ಸಾಧ್ಯತೆಯಿದೆ.
ಪಟ್ಟಿ ಬಿಡುಗಡೆ ಸಂಬಂಧ ಅಮಿತ್ ಶಾ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಸಭೆ ನಡೆಯಬೇಕಿತ್ತಾದರೂ ಅವರು ಬರುವುದು ತಡವಾದ್ದರಿಂದ ಸಾಧ್ಯವಾಗಲಿಲ್ಲ. ಆದರೆ, ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಸಭೆ ನಡೆಸಿ ಪಟ್ಟಿ ಬಿಡುಗಡೆ ಬಗ್ಗೆ ಚರ್ಚಿಸಿದರು. ಎರಡು ಪಟ್ಟಿ ಬಿಡುಗಡೆಯಿಂದ ಉಂಟಾಗಿರುವ ಬಂಡಾಯ, ಬಿಜೆಪಿ ತೊರೆದು ಜೆಡಿಎಸ್ಗೆ ಸೇರ್ಪಡೆಯಾಗುತ್ತಿರುವ ನಾಯಕರು, ಕಾಂಗ್ರೆಸ್ ಪಕ್ಷದಲ್ಲಿ ಉದ್ಭವಿಸಿರುವ ಅಸಮಾಧಾನದ ಬಗ್ಗೆ ಸಮಾಲೋಚನೆ ನಡೆದಿದ್ದು ಮೂರನೇ ಪಟ್ಟಿ ಅಳೆದೂ -ತೂಗಿ ರಾಜಕೀಯ ಲೆಕ್ಕಾಚಾರದೊಂದಿಗೆ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಇದುವರೆಗೂ 154 ಅಭ್ಯರ್ಥಿಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಉಳಿದ ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಬುಧವಾರ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಲ್ಲಿವರೆಗೂ ಎಲ್ಲ ಕಾರ್ಯಕರ್ತರು, ಮುಖಂಡರು ಶಾಂತವಾಗಿರಬೇಕು.
– ಬಿ.ಎಸ್.ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ