ಕಾರ್ಗಿಲ್‌ ಹುತಾತ್ಮರ ಕುಟುಂಬಗಳಿಗೆ ನೆರವಿನ ಭರವಸೆ

Team Udayavani, Jul 24, 2018, 11:54 AM IST

kargil.jpg

ಬೆಂಗಳೂರು: ಕಾರ್ಗಿಲ್‌ ಯುದ್ಧದಲ್ಲಿ ವೀರ ಮರಣ ಹೊಂದಿದ ರಾಜ್ಯದ ಹುತಾತ್ಮ ಯೋಧರ ಕುಟುಂಬಕ್ಕೆ ಅನುಕೂಲ ಮಾಡಿಕೊಡುವ ಕಾರ್ಯಕ್ರಮ ರೂಪಿಸಿದರೆ ಅದನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಕಾರ್ಗಿಲ್‌ ಯುದ್ಧದಲ್ಲಿ ಭಾರತ ಜಯಶಾಲಿಯಾಗಿ 19 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸಿಟಿಜನ್ಸ್‌ ಸೌಸೈಟಿ ಆಫ್ ಇಂಡಿಯಾ ಕನ್ಯಾಕುಮಾರಿಯಿಂದ ದೆಹಲಿವರೆಗೆ ಕೊಂಡೊಯ್ಯುತ್ತಿರುವ ಶ್ರದ್ಧಾಂಜಲಿ ಕಲಶಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಗೌರವ ಸಲ್ಲಿಸಿ ಅವರು ಮಾತನಾಡಿದರು.

ಕಾರ್ಗಿಲ್‌ ಯುದ್ಧದಲ್ಲಿ ಮಡಿದವರನ್ನು ನೆನಪಿಸಿಕೊಂಡು ಪ್ರತಿ ವರ್ಷ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಯೋಧರಿಗೆ ಗೌರವ ಸಲ್ಲಿಸುತ್ತಿರುವುದು ಉತ್ತಮ ಕಾರ್ಯ. ಇದರೊಂದಿಗೆ ಮುಂದಿನ ವರ್ಷದಿಂದ ಕಾರ್ಗಿಲ್‌ ದಿನಾಚರಣೆ ವೇಳೆ ಯುದ್ಧದಲ್ಲಿ ವೀರ ಮರಣವನ್ನಪ್ಪಿದ ರಾಜ್ಯದ ಯೋಧರ ಕುಟುಂಬಕ್ಕೆ ನೆರವಾಗುವಂತಹ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ಆಯೋಜಕರು ಯೋಜನೆ ಸಿದ್ಧಪಡಿಸಿದರೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅದನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಏರ್‌ ಕಮಾಂಡರ್‌ ಚಂದ್ರಶೇಖರ್‌ ಅವರು ಕಾರ್ಗಿಲ್‌ ಯುದ್ಧದ ವೇಳೆ ಭಾರತೀಯ ಯೋಧರು ಅನುಭವಿಸಿದ ಕಷ್ಟ, ಸಮುದ್ರ ಮಟ್ಟದಿಂದ 14 ಸಾವಿರ ಅಡಿ ಎತ್ತರಕ್ಕೆ ತೆರಳಿ ವೈರಿಗಳನ್ನು ಸದೆಬಡಿದು ವೀರಮರಣವನ್ನಪ್ಪಿದ ಯೋಧರ ತ್ಯಾಗವನ್ನು ನೆನೆದು ಭಾವುಕರಾದರು ಅಲ್ಲದೆ, ಈ ಯುದ್ಧ ಭಾರತದ ಘನತೆ ಮತ್ತು ವೈಭವವನ್ನು ವಿಶ್ವಕ್ಕೆ ಸಾರಿತು ಎಂದು ಬಣ್ಣಿಸಿದರು.

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌, ಕರ್ನಲ್‌ ಮಂಜೀತ್‌ ಸಿಂಗ್‌, ಕ್ಯಾಪ್ಟನ್‌ ಚಿದಂಬರಂ, ಕಮಾಂಡರ್‌ ಪಿ.ಆರ್‌.ಚೇತನ್‌, ಆಸಿಮ್‌ ಘೋಷ್‌, ಎಸ್‌.ಸಿ.ಭಂಡಾರಿ ಸೇರಿದಂತೆ ಭಾರತೀಯ ಸೇನಾಪಡೆಗಳ ಹಿರಿಯ ಅಧಿಕಾರಿಗಳು, ಜವಾನರು, ಕಾರ್ಗಿಲ್‌ ಯೋಧರ ಕುಟುಂಬ ಸದಸ್ಯರು ಹಾಜರಿದ್ದರು. ಇದೇ ವೇಳೆ ಶ್ರದ್ಧಾಂಜಲಿ ಕಲಶಕ್ಕೆ ಗೌರವ ಸಲ್ಲಿಸಲಾಯಿತು.

26ರಂದು ದೆಹಲಿ ತಲುಪುವ ಕಲಶ: ಕಾರ್ಗಿಲ್‌ ಯುದ್ಧದಲ್ಲಿ ವೀರ ಮರಣವನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸುವ ಶ್ರದ್ಧಾಂಜಲಿ ಕಲಶ ಕನ್ಯಾಕುಮಾರಿಯಿಂದ ಹೊರಟು ಇದೀಗ ಬೆಂಗಳೂರಿಗೆ ಬಂದಿದೆ. ಜು.26ರಂದು ದೆಹಲಿಯ ಇಂಡಿಯಾ ಗೇಟ್‌ ತಲುಪಲಿದ್ದು, ಅಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಷ್ಟ್ರದ ಪರ ಗೌರವ ಸಲ್ಲಿಸಲಿದ್ದಾರೆ. ನಂತರ ಶ್ರದ್ಧಾಂಜಲಿ ಕಲಶವನ್ನು ಕಾರ್ಗಿಲ್‌ ಕಾರ್ಗಿಲ್‌ ಸ್ಮರಣಾರ್ಥ ನಿರ್ಮಿಸಿರುವ ಸ್ಥಳದಲ್ಲಿ ಇಡಲಾಗುವುದು ಎಂದು ಇದರ ಉಸ್ತುವಾರಿ ವಹಿಸಿರುವ ಎಸ್‌.ಸಿ.ಭಂಡಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.