Udayavni Special

ಪೊಲೀಸರ ಮೇಲೇ ಹಲ್ಲೆ: ಸೆರೆ


Team Udayavani, Mar 15, 2019, 6:14 AM IST

arrest2.jpg

ಬೆಂಗಳೂರು: ಅನುಮಾನಸ್ಪದ ಬೈಕ್‌ ಹಿಂಬಾಲಿಸಿಕೊಂಡು ಹೋಗಿ ದಾಖಲೆ ಕೇಳಿದ ಪೊಲೀಸರ ಮೇಲೇ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ದಿವ್ಯಜ್ಯೋತಿ ದಾಸ್‌, ಅಮೀರ್‌ ಬಿಸ್ವಾಕರ್ಮ, ವಿನೋದ್‌ ಗುರು, ಅಜಯ್‌ ತಮನ್‌ ಹಾಗೂ ಅವರ ಮತ್ತೂಬ್ಬ ಸ್ನೇಹಿತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಾ.12ರಂದು ರಾತ್ರಿ 1 ಗಂಟೆ ಸುಮಾರಿಗೆ ಪ್ಯಾರಾಮೌಂಟ್‌ ಪಿಲಾಟಸ್‌ ಅಪಾರ್ಟ್‌ಮೆಂಟ್‌ ಬಳಿ ಪಾಳಿ ಗಸ್ತಿನಲ್ಲಿದ್ದ ಪೊಲೀಸ್‌ ಪೇದೆಗಳಾದ ಚಂದ್ರಶೇಖರ್‌ ಹಾಗೂ ಸಿದ್ದು ನಾಯ್ಕ ಕೆ.ಎನ್‌. ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಇಬ್ಬರು ಯುವಕರು ಬೈಕ್‌ನಲ್ಲಿ ವೇಗವಾಗಿ ಬರುತ್ತಿದ್ದಾಗ, ಪೇದೆಗಳಿಗೆ ಅನುಮಾನ ಬಂದು ಬೈಕ್‌ ನಿಲ್ಲಿಸುವಂತೆ ಸೂಚಿಸಿದರೂ ಕೇಳದೆ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

ಪೇದೆಗಳಿಬ್ಬರು ಬೈಕ್‌ ಫಾಲೋ ಮಾಡಿದ್ದಾರೆ. ಯುವಕರು ಅರಕೆರೆಯ ನಂಜಪ್ಪ ಲೇಔಟ್‌ನ ಅಪಾರ್ಟ್‌ಮೆಂಟ್‌ ಮುಂದೆ ಬೈಕ್‌ ನಿಲ್ಲಿಸಿದ್ದಾರೆ. ಅಲ್ಲಿಗೆ ತೆರಳಿದ ಪೇದೆಗಳು, ಇಬ್ಬರೂ ಯುವಕರನ್ನು ಹೊರಗೆ ಕರೆದು ಬೈಕ್‌ ದಾಖಲಾತಿಗಳನ್ನು ನೀಡುವಂತೆ ಕೇಳಿದ್ದಾರೆ.

ಈ ವೇಳೆ ಪೇದೆಯೊಬ್ಬರ ಲಾಠಿ ಕಿತ್ತುಕೊಂಡ ದಿವ್ಯಜ್ಯೋತಿದಾಸ್‌ ಪೇದೆಗಳನ್ನು ಹೊಡೆಯಲು ಮುಂದಾಗಿದ್ದಾನೆ. ಉಳಿದ ಆರೋಪಿಗಳು ಆತನಿಗೆ ಸಹಕರಿಸಿದ್ದಾರೆ. ಕೂಡಲೇ ಈ ಕುರಿತು ಪೇದೆಗಳು ಕಂಟ್ರೋಲ್‌ ರೂಮ್‌ಗೆ ನೀಡಿದ ಮಾಹಿತಿ ಅನ್ವಯ ಸ್ಥಳಕ್ಕೆ ತೆರಳಿದ ಹೊಯ್ಸಳ ಸಿಬ್ಬಂದಿ, ಪೇದೆಗಳನ್ನು ರಕ್ಷಿಸಿ, ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಅಸ್ಸಾಂ ಮೂಲದ ದಿವ್ಯಜ್ಯೋತಿದಾಸ್‌, ಐದಾರು ಪಾನಿಪೂರಿ ಅಂಗಡಿಗಳನ್ನು ನಡೆಸುತ್ತಿದ್ದು. ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡು, ಅವರಿಗೆ ವಾಸ್ತವ್ಯ ಕಲ್ಪಿಸಿದ್ದಾನೆ. ಆರೋಪಿಗಳ ವಿರುದ್ಧ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಹಲ್ಲೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು: ಡಾ. ಚಂದ್ರಶೇಖರ ಕಂಬಾರ

ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು: ಡಾ. ಚಂದ್ರಶೇಖರ ಕಂಬಾರ

9

ಮಲೀನ ನೀರು ರಸೆಗೆ ಹರಿಯದಂತೆ ಕ್ರಮವಹಿಸಿ

8

ಗಿರಿಜನರೆಡೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

4

ಚೈತನ್ಯ ಇನ್ಫಿನಿಟಿ ಲರ್ನ್ ರೋಹಿತ್‌ ಶರ್ಮ ರಾಯಭಾರಿ

MUST WATCH

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

ಹೊಸ ಸೇರ್ಪಡೆ

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ಆರೋಗ್ಯದ ಅರಿವಿಗೆ ಸಂಚಾರಿ ರಥ

ಆರೋಗ್ಯದ ಅರಿವಿಗೆ ಸಂಚಾರಿ ರಥ

ಹಸನ್ಮಾಳದಲ್ಲಿ ದನಗರ ಗೌಳಿ ಸಮುದಾಯದವರಿಂದ ಶಿಲಂಗಾಣ ಕಾರ್ಯಕ್ರಮ

ಹಸನ್ಮಾಳದಲ್ಲಿ ದನಗರ ಗೌಳಿ ಸಮುದಾಯದವರಿಂದ ಶಿಲಂಗಾಣ ಕಾರ್ಯಕ್ರಮ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

ಅಂಬೇಡ್ಕರ್‌ರಿಂದ  ಬೌದ್ಧ ಧರ್ಮಕ್ಕೆ  ಮರುಹುಟ್ಟು

ಅಂಬೇಡ್ಕರ್‌ರಿಂದ  ಬೌದ್ಧ ಧರ್ಮಕ್ಕೆ ಮರುಹುಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.