
ಬಾಕಿ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ
Team Udayavani, Jan 14, 2023, 11:55 AM IST

ಬೆಂಗಳೂರು: ಬಾಕಿ ಉಳಿಸಿಕೊಂಡದ್ದ ಸಾಲ ಕೇಳಿದಕ್ಕೆ ಕಾಂಡಿಮಂಟ್ಸ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿ ಉಪನಗರದ ಸಲ್ಮಾನ್ ಟಿಪ್ಪು(28) ಬಂಧಿತ. ಜ.10 ರಂದು ಕೆಂಗೇರಿ ಉಪನಗರದ 6ನೇ ಮುಖ್ಯರಸ್ತೆಯ ಚೌಡೇಶ್ವರಿ ಕಾಂಡಿಮೆಂಟ್ಸ್ ಮಾಲೀಕ ಜಿ.ವಿ. ಶಿವಕುಮಾರ್ ಎಂಬುವರ ಮೇಲೆ ಆರೋಪಿ ತನ್ನ ಮೂವರು ಸಹಚರ ಜತೆ ಸೇರಿಕೊಂಡು ಹಲ್ಲೆ ನಡೆಸಿದ್ದ. ಶಿವಕುಮಾರ್‌ರ ಕಾಂಡಿಮೆಂಟ್ಸ್‌ಗೆ ಆರೋಪಿ ಟಿಪ್ಪು ಆಗಾಗ್ಗೆ ಹೋಗುತ್ತಿದ್ದ. ಸಿಗರೇಟ್ ತೆಗೆದುಕೊಂಡು ಸಾಲ ಹೇಳುತ್ತಿದ್ದ. ಜ.10ರಂದು ಅಂಗಡಿಗೆ ಬಂದ ಆರೋಪಿ, ಟೀ, ಸಿಗರೇಟ್ ಕೊಡುವಂತೆ ಕೇಳಿದ್ದಾನೆ. ಆಗ ಶಿವಕುಮಾರ್ ಬಾಕಿ 950 ರೂ. ಸಾಲ ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಕೋಪಗೊಂಡ ಆರೋಪಿ ತನ್ನ ಬಳಿಯೇ ಹಣ ಕೇಳಿತ್ತೀಯಾ? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಸಂಜೆ ಆರು ಗಂಟೆ ಸುಮಾರಿಗೆ ತನ್ನ ಮೂವರು ಸಹಚರರ ಜತೆ ಸೇರಿ ಮತ್ತೆ ಟೀ ಅಂಗಡಿ ಬಳಿ ಬಂದು ಗಲಾಟೆ ತೆಗೆದಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಮತ್ತು ಸಹಚರರ ಶಿವಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ.
ಅದನ್ನು ತಡೆಯಲು ಬಂದ ಪತ್ನಿ ಮತ್ತು ಐದು ವರ್ಷದ ಮಗನ ಮೇಲೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
