ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಯತ್ನ


Team Udayavani, Aug 19, 2017, 6:30 AM IST

18BNP-(4).jpg

ಬೆಂಗಳೂರು: ಆದಾಯ ತೆರಿಗೆ ದಾಳಿಗೊಳಗಾಗಿರುವ ಸಚಿವರಾದ ಡಿ.ಕೆ.ಶಿವಕುಮಾರ್‌ ಮತ್ತು ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಮತ್ತು ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಶುಕ್ರವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿತು.

ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅಲ್ಲಿಂದ ಆನಂದರಾವ್‌ ವೃತ್ತ, ರೇಸ್‌ ಕೋರ್ಸ್‌ ಮಾರ್ಗವಾಗಿ ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಲು ಮುಂದಾದರು. ಆದರೆ, ವಿಧಾನಸೌಧ ಬಳಿ ತೆರಳಲು ಪ್ರತಿಭಟನಾಕಾರರಿಗೆ ಅವಕಾಶ ನೀಡದ ಪೊಲೀಸರು ರೇಸ್‌ಕೋರ್ಸ್‌ ಬಳಿ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರರಾವ್‌, ವಿಧಾನಸಭೆ ಮತ್ತು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕರಾದ ಜಗದೀಶ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ, ಸಂಸದರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಸಿ.ಟಿ.ರವಿ ಸೇರಿ ನೂರಾರು ಮುಖಂಡರು, ಕಾರ್ಯಕರ್ತರು ಪೊಲೀಸರಿಂದ ಬಂಧನಕ್ಕೆ ಒಳಗಾದರು. ಇದಕ್ಕೂ ಮುನ್ನ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಐಟಿ ದಾಳಿಗೊಳಗಾದ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರಲ್ಲದೆ, ಸಚಿವರನ್ನು ಸಂಪುಟದಿಂದ ಕೈಬಿಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಅಲ್ಲದೆ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆಯೂ ಕಿಡಿ ಕಾರಿದರು.

ಬೆಂಗಳೂರಲ್ಲೂ ದೆಹಲಿಯದ್ದೇ ಪರಿಸ್ಥಿತಿ: ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಮಾತನಾಡಿ, ಮನಮೋಹನ್‌ ಸಿಂಗ್‌, ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ಯೂಷನ್‌ ಮಾಸ್ಟರ್‌ ಆಗಿದ್ದಾರೆ. ಅಂತಹ ಮುಖ್ಯಮಂತ್ರಿ ನೇತೃತ್ವದಲ್ಲಿ ರಾಜ್ಯದಲ್ಲೂ ಭ್ರಷ್ಟಾಚಾರ ನಡೆಯುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಜನ
ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆದು ಸಿಎಂ ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಲಿದ್ದಾರೆ. 2014ರಲ್ಲಿ ದೆಹಲಿಯಲ್ಲಿ ಏನಾಯಿತೋ, 2018ರಲ್ಲಿ ಬೆಂಗಳೂರಿನಲ್ಲಿ ಅದೇ ಪರಿಸ್ಥಿತಿ ಆಗಲಿದೆ ಎಂದು ಹೇಳಿದರು. ಸಂಸದ ಪ್ರಹ್ಲಾದ ಜೋಶಿ ಮತ್ತಿತರರು ಹಾಜರಿದ್ದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚಿಸಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿತು. ಸಿಐಡಿಯನ್ನು “ಕ್ಲೀನ್‌ಚಿಟ್‌ ಇಷೂÂಯಿಂಗ್‌ ಡಿಪಾರ್ಟ್‌ಮೆಂಟ್‌’ ಎಂದು ಮಾಡಿ ಸರ್ಕಾರದಲ್ಲಿರುವ ಭ್ರಷ್ಟಾಚಾರಿಗಳು, ಅಪರಾಧಿಗಳಿಗೆ ಕ್ಲೀನ್‌ಚಿಟ್‌ ಕೊಡಿಸಿ ರಕ್ಷಿಸುವ ಕೆಲಸದಲ್ಲಿ ತೊಡಗಿದೆ.
– ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸೇರಿ ಅನೇಕ ಸಚಿವರು, ಶಾಸಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾಗಿದ್ದರೂ ಯಾರೊಬ್ಬರ ವಿರುದಟಛಿವೂ ಎಫ್ಐಆರ್‌ ದಾಖಲಿಸುತ್ತಿಲ್ಲ. ಪ್ರಕರಣಗಳನ್ನು ಮುಚ್ಚುಹಾಕಲು ಪ್ರಯತ್ನಿಸಲಾಗುತ್ತಿದೆ. ಆದರೆ, ಯಡಿಯೂರಪ್ಪ ಅವರ ವಿರುದಟಛಿ ಮಾತ್ರ ಎಫ್ ಐಆರ್‌ ದಾಖಲಿಸಲು ಕಾರಣವೇನು?
– ಶೋಭಾ ಕರಂದ್ಲಾಜೆ, ಸಂಸದೆ

ಬೆಂಗಳೂರು ಅಭಿವೃದ್ಧಿಗೆ 8000 ಕೋಟಿ ರೂ. ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಜಲಪ್ರಳಯ ಬಂದು ಬೆಂಗಳೂರಿನ ಜನ ಮುಳುಗಿ ಹೋಗುವಂತಾಗಿದೆ. ಹಾಗಿದ್ದರೆ ಈ ಹಣ ಯಾವ ಮೋರಿಯಲ್ಲಿ ಕೊಚ್ಚಿಕೊಂಡು ಹೋಗಿದೆ? ಯಾವ ಕಾಂಗ್ರೆಸ್‌ ನವರ, ಯಾವ ಮಂತ್ರಿ ಮನೆ ಬಾಗಿಲಿಗೆ ಹೋಗಿದೆ ಎಂಬುದಕ್ಕೆ ಉತ್ತರಿಸಬೇಕು.
– ಆರ್‌.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.