ಕಸದ ತೊಟ್ಟಿಯಲ್ಲಿದ್ದ ಮಗು ರಕ್ಷಿಸಿದ ಆಟೋಚಾಲಕ
Team Udayavani, Apr 20, 2019, 3:00 AM IST
ಬೆಂಗಳೂರು: ಬಟ್ಟೆಯಲ್ಲಿ ಸುತ್ತಿ ಕಸದ ತೊಟ್ಟಿ ಸಮೀಪ ಇರಿಸಿದ್ದ ನವಜಾತ ಶಿಶುವನ್ನು ಆಟೋ ಚಾಲಕರೊಬ್ಬರು ರಕ್ಷಿಸಿದ ಘಟನೆ ಆರ್‌ಎಂಸಿ ಯಾರ್ಡ್‌ನಲ್ಲಿ ಶುಕ್ರವಾರ ನಡೆದಿದೆ.
ನಂದಿನಿ ಲೇಔಟ್‌ನ ಸುನೀಲ್ ಕುಮಾರ್ ಮಗುವನ್ನು ರಕ್ಷಿಸಿದ ಆಟೋ ಚಾಲಕ. ಸುನೀಲ್ ಕುಮಾರ್ ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೀಣ್ಯದ ಇಎಸ್‌ಐ ಆಸ್ಪತ್ರೆ ಬಳಿ ಆಟೋ ಚಾಲನೆ ಮಾಡಿಕೊಂಡು ಹೋಗುವಾಗ ಮೂತ್ರ ವಿಸರ್ಜಿಸಲೆಂದು ಆಟೋ ನಿಲ್ಲಿಸಿದ್ದಾರೆ.
ಈ ವೇಳೆ ಕಸದ ತೊಟ್ಟಿ ಬಳಿ ಮಗುವಿನ ಅಳು ಕೇಳಿಸಿದೆ. ಹತ್ತಿರ ಹೋಗಿ ನೋಡಿದಾಗ ಬಟ್ಟೆಯಲ್ಲಿ ನವಜಾತ ಗಂಡು ಮಗು ಕಂಡುಬಂದಿದೆ. ಕೂಡಲೇ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆರ್‌ಎಂಸಿ ಯಾರ್ಡ್ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮಗುವಿನ ಪೋಷಕರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದರು. ಮಗು ಆರೋಗ್ಯವಾಗಿದೆ. ಮಗು ದತ್ತು ಪಡೆಯಲು ಹಲವರು ಆಸಕ್ತಿ ತೋರಿದ್ದಾರೆ.
ಆದರೆ, ಮಗವನ್ನು ಮಕ್ಕಳ ಆಯೋಗದ ಸುಪರ್ದಿಗೆ ಒಪ್ಪಿಸಬೇಕು ಹಾಗೂ ಕಾನೂನು ಪ್ರಕ್ರಿಯೆಗಳ ಪಾಲನೆ ಬಳಿಕ ಮಗು ದತ್ತು ಪ್ರಕ್ರಿಯೆಗೆ ಅವಕಾಶವಿದೆ ಎಂದು ಹೇಳಿದ್ದೇವೆ ಎಂದು ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸ್ಕೆಟ್ ವ್ಯವಹಾರಕ್ಕೆಂದು ಕೋಟಿಗಟ್ಟಲೆ ಸಾಲ ಪಡೆದು ಕ್ಯಾಸಿನೋ ಜೂಜಾಟ ಆಡಿದ ಆರೋಪಿ ಅರೆಸ್ಟ್
ಕ್ರಿಕೆಟ್ ಬೆಟ್ಟಿಂಗ್: ಸಾಲ ತೀರಿಸಲು ಬೈಕ್ ಕಳ್ಳತನ; ಆರೋಪಿ ಬಂಧನ
ಶಾಲೆ ಬಳಿ ಸಾರಿ.. ಸಾರಿ.. ಬರಹ: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ?
ಶೋಕಿ ಜೀವನಕ್ಕಾಗಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ; ಮೂವರ ಬಂಧನ
ಫೇಸ್ ಬುಕ್ ನಲ್ಲಿ ಹಾಕಿದ್ದ ಸೆಲ್ಫಿ ಪೋಸ್ಟ್ ನಿಂದ 5 ವರ್ಷದ ಬಳಿಕ ಅರೆಸ್ಟ್ ಆದ ಕೊಲೆ ಆರೋಪಿ!
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ಮಳಲಿ ವಿವಾದ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ: ಅಲೋಕ್ ಕುಮಾರ್
ಹೆಬ್ರಿ ತಾ| ಆಡಳಿತ ಕಟ್ಟಡ ಲೋಕಾರ್ಪಣೆಗೆ ಸಿದ್ಧ
ವಿಜಯಪುರ: ಆಕಸ್ಮಿಕ ಬೆಂಕಿ ಅವಘಡ; 30 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿ
ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!
ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ