ಬಿ-ಫಾರ್ಮ ಸೀಟು ಹಂಚಿಕೆ ತಾತ್ಕಾಲಿಕ ಸ್ಥಗಿತ

Team Udayavani, Jul 19, 2017, 11:21 AM IST

b-farma.jpg

ಬೆಂಗಳೂರು: ರಾಜ್ಯ ಸರ್ಕಾರ ಬಿ-ಫಾರ್ಮ ಕೋರ್ಸ್‌ಗೆ 20:80ರ ಸರಾಸರಿಯಲ್ಲಿದ್ದ ಸೀಟು ಹಂಚಿಕೆ ಪ್ರಮಾಣವನ್ನು 50:50ಕ್ಕೆ  ಮಾರ್ಪಾಡು ಮಾಡಿ ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವ ಹಿನ್ನೆಲೆಯ ಬಿ-ಫಾರ್ಮ ಕೋರ್ಸ್‌ಗೆ ಪ್ರವೇಶಾತಿ ತಾತ್ಕಾಲಿಕ ಸ್ಥಗಿತಗೊಂಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿ-ಫಾರ್ಮ ಕೋರ್ಸ್‌ಗೆ ಲಭ್ಯವಿರುವ ಸೀಟಿಗೆ ಕೌನ್ಸೆಲಿಂಗ್‌ ಹಾಗೂ ಆಪ್ಷನ್‌ ಎಂಟ್ರಿ ಕೂಡ ಅವಕಾಶ ನೀಡಿತ್ತು. ಈ ಮಧ್ಯೆ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಪ್ರಕ್ರಿಯೆ ಸದ್ಯ ಸ್ಥಗಿತಗೊಂಡಿದೆ. ಶೇ.20ರಷ್ಟು ಸರ್ಕಾರಿ ಕೋಟಾ ಹಾಗೂ ಶೇ.80ರಷ್ಟು ಖಾಸಗಿ ಕೋಟಾದ ಬದಲಿಗೆ  ತಲಾ ಶೇ.50ರಷ್ಟು ಸರ್ಕಾರಿ ಹಾಗೂ ಖಾಸಗಿ ಕೋಟಾ ಮಾಡಿರುವುದರ ವಿರುದ್ಧ ಕೆಲವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. 

ಸರ್ಕಾರಿ ಕೋಟಾವನ್ನು ಶೇ.20ರಿಂದ ಶೇ.50ಕ್ಕೆ ಏರಿಕೆ ಮಾಡಿದ್ದರಲ್ಲಿ ಶೇ.30ರಷ್ಟು ಹೆಚ್ಚುವರಿಯಾಗಿದ್ದು, ಅದಕ್ಕೆ ಮಾತ್ರ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಕಳೆದ ವರ್ಷದಂತೆ 20:80ರ ಅನುಪಾತದಲ್ಲಿ ಸೀಟು ಹಂಚಿಕೆಗೆ ಅವಕಾಶ ನೀಡಬೇಕು ಎಂದು ಪ್ರಾಧಿಕಾರದ ಅಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಸರ್ಕಾರದಿಂದ ಈವರೆಗೆ ಪ್ರಾಧಿಕಾರಕ್ಕೆ ಯಾವುದೇ ಉತ್ತರ ಬಂದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿದೆ.

ಕೆಎಇ ಎದುರು ವಿದ್ಯಾರ್ಥಿಗಳ ಜಾತ್ರೆ: ನೀಟ್‌ ತೇರ್ಗಡೆಯಾಗಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಸೋಮವಾರದಿಂದಲೇ ಆರಂಭವಾಗಿದ್ದು, ಹೊರ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ ಬಹುತೇಕ ವಿದ್ಯಾರ್ಥಿಗಳು ಬೆಂಗಳೂರು ಕೇಂದ್ರ ಆಯ್ಕೆ ಮಾಡಿಕೊಂಡಿರುವುದರಿಂದ ಪರಿಶೀಲನೆ ವೇಳೆ ವಿದ್ಯಾರ್ಥಿಗಳ ಸಂಖ್ಯೆ ನಿರೀಕ್ಷೆಗೂ ಮೀರಿತ್ತು.

ಪರಿಶೀಲನೆ ತ್ವರಿತಗತಿಯಲ್ಲಿ ಆಗದ ಕಾರಣ ಮತ್ತು ಅನೇಕ ವಿದ್ಯಾರ್ಥಿಗಳಲ್ಲಿ ಸಮರ್ಪಕ ದಾಖಲೆ ಇಲ್ಲದ ಕಾರಣ ಕೆಇಎ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ರಾತ್ರಿ ಪೂರ್ತಿ ಜಾಗರಣೆ ಮಾಡಿದ್ದಾರೆ. ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಹಾಗೂ ದಂತವೈದ್ಯಕೀಯ ಸೀಟ್‌ಗೆ ನೀಟ್‌ ತೇರ್ಗಡೆಯಾದ ಸಾವಿರಾರು ವಿದ್ಯಾರ್ಥಿಗಳು ಪ್ರಾಧಿಕಾರದ ಸೂಚನೆಯಂತೆ ನೋಂದಣಿ ಮಾಡಿಕೊಂಡಿದ್ದರು.

ಹೊರ ರಾಜ್ಯದ ವಿದ್ಯಾರ್ಥಿಗಳಿಗೂ ಅವಕಾಶ ನೀಡಿರುವುದರಿಂದ ಅವರ ಸಂಖ್ಯೆಯೂ ಹೆಚ್ಚಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ದಾಖಲೆ ಪರಿಶೀಲನೆ ಪ್ರಕ್ರಿಯೆ ಮಂಗಳವಾರ ತಡರಾತ್ರಿ ತನಕವೂ ನಿರಂತವಾಗಿ ನಡೆದಿದೆ. ಹೊರ ರಾಜ್ಯ ಹಾಗೂ ಬೇರೆ ಬೇರೆ ಊರುಗಳಿಂದ ಬಂದಿರುವ ವಿದ್ಯಾರ್ಥಿಗಳು ಹಾಗೂ ಪಾಲಕರು ಸಾಕಷ್ಟು ಸಂಕಟ ಎದುರಿಸುವಂತಾಗಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವ ಸೀಟು ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಹಂಚಿಕೆಯಾಗುವುದಿಲ್ಲ. ದಾಖಲೆ ಪರಿಶೀಲನೆ ಜು.19ರ ತನಕವೂ ನಡೆಯಲಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಮೊದಲೆರೆಡುದಿನ ಒತ್ತಡ ಜಾಸ್ತಿ.
-ಗಂಗಾಧರಯ್ಯ, ಆಡಳಿತಾಧಿಕಾರಿ, ಕೆಇಎ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.