
ಚಾಕುವಿನಿಂದ ಇರಿದು ಯುವತಿಯ ಮೊಬೈಲ್ ಸುಲಿಗೆ
Team Udayavani, Jun 8, 2023, 2:50 PM IST

ಬೆಂಗಳೂರು: ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಯುವತಿಗೆ ಚಾಕುವಿ ನಿಂದ ಇರಿದು ಮೊಬೈಲ್ ದರೋಡೆ ಮಾಡಿರುವ ಘಟನೆ ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎಚ್‌ಬಿಆರ್ ಲೇಔಟ್ ನಿವಾಸಿ ರೋಸಲೀನಾ (26) ಮೊಬೈಲ್ ಕಳೆದುಕೊಂಡವರು. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ರೋಸಲೀನಾ, ಸೋಮವಾರ ರಾತ್ರಿ ಪಾಳಿ ಕೆಲಸಕ್ಕೆ ತೆರಳಿ ದ್ದರು. ಕೆಲಸ ಮುಗಿಸಿಕೊಂಡು ಮಂಗಳವಾರ ಮುಂಜಾನೆ ಕ್ಯಾಬ್‌ನಲ್ಲಿ ಮನೆ ಸಮೀಪ ಡ್ರಾಪ್ ಪಡೆದುಕೊಂಡಿದ್ದಾರೆ. ಬಳಿಕ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಆಕೆಯ ಕೈಹಿಡಿದು ಎಳೆದಾಡಿದ್ದು, ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾನೆ. ಆದರೆ, ಮೊಬೈಲ್ ಬಿಗಿಯಾಗಿ ಹಿಡಿದುಕೊಂಡಿದ್ದರಿಂದ, ಚಾಕುವಿನಿಂದ ಇರಿದು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಮಹಿಳೆಯ ಚೀರಾಟ ಕೇಳಿದ ಸ್ಥಳೀಯರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಆಕೆಯಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Amazon: ಅಕ್ಟೋಬರ್ 8ರಿಂದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್

Vitla: ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ರಾನೈಟ್ ಲಾರಿ; ಐವರು ಕಾರ್ಮಿಕರ ಕೈಕಾಲು ಛಿದ್ರ

Bigg Boss 10: ಈ ಬಾರಿ ಕಿಚ್ಚನ ಬಿಗ್ ಬಾಸ್‌ನಲ್ಲಿ ಭಾಗಿಯಾಗುವ ಸ್ಪರ್ಧಿಗಳು ಇವರೇ ನೋಡಿ..

Mumbai: 3,816 ಕೋಟಿ ಮೊತ್ತದ ದಹಿಸರ್-ಭಯಾಂದರ್ ಸೇತುವೆ ಕಾಮಗಾರಿ ಗುತ್ತಿಗೆ L&T ತೆಕ್ಕೆಗೆ