Crime: ದೈಹಿಕ ಸಂಬಂಧ ಮುಂದುವರಿಸಲು ನಿರಾಕರಣೆ; ಪ್ರೇಯಸಿ ಮೇಲೆ ಸಾಮೂಹಿಕ ಅತ್ಯಾಚಾರ


Team Udayavani, Aug 2, 2023, 10:17 AM IST

Crime: ದೈಹಿಕ ಸಂಬಂಧ ಮುಂದುವರಿಸಲು ನಿರಾಕರಣೆ; ಪ್ರೇಯಸಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು: ದೈಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ ಪ್ರೇಯಸಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದಲ್ಲದೆ, ತನ್ನ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಡ್ಯಾನ್ಸ್‌ ಮಾಸ್ಟರ್‌ ಸೇರಿ ಮೂವರು ಕೊಡಿಗೇಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಡ್ಯಾನ್ಸ್‌ ಮಾಸ್ಟರ್‌ ಆ್ಯಂಡ್ರಿ ಜಾರ್ಜ್‌(25) ಮತ್ತು ಆತನ ಸ್ನೇಹಿತರಾದ ಸಂತೋಷ್‌ (29) ಹಾಗೂ ಶಶಿ (30) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು 24 ವರ್ಷದ ಯುವತಿ ಮೇಲೆ ಕಳೆದೊಂದು ವರ್ಷದಿಂದ ಕೃತ್ಯ ಎಸಗುತ್ತಿದ್ದರು. ಆರೋಪಿಗಳ ಬಳಿಯಿದ್ದ ಲ್ಯಾಪ್‌ಟಾಪ್‌, ಮೊಬೈಲ್‌ಗ‌ಳು, ಪೆನ್‌ಡ್ರೈವ್‌, ಫೋಟೋ, ವಿಡಿಯೋಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಸಂತ್ರಸ್ತೆ ಹಾಗೂ ಡ್ಯಾನ್ಸ್‌ ಮಾಸ್ಟರ್‌ ಆ್ಯಂಡ್ರಿ ಜಾರ್ಜ್‌ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಆಗ ಆರೋಪಿ ಆಕೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ವೇಳೆ ಆಕೆಗೆ ತಿಳಿಯದಂತೆ ಮೊಬೈಲ್‌ನಲ್ಲಿ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದುಕೊಂಡಿದ್ದ. ಕೆಲ ದಿನಗಳ ಬಳಿಕ ಆತನ ವಿಕೃತ ವ್ಯಕ್ತಿತ್ವ ತಿಳಿದ ಸಂತ್ರಸ್ತೆ, 2021ರಿಂದ ದೂರವಾಗಿದ್ದಳು. ಆದರೆ, ಆರೋಪಿ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿ, ಹತ್ತಾರು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ತನಗೆ ಹಣ ಬೇಕಾದಾಗ, ಕೆಲ ಸ್ನೇಹಿತರಿಂದ ಸಾವಿರಾರು ರೂ. ಪಡೆದುಕೊಂಡಿದ್ದು, ಅವರಿಗೂ ವಿಡಿಯೋ ಕಳುಹಿಸಿದ್ದ. ಅವರು ಸಹ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿದ್ದಾರೆ. ಹೀಗೆ ಐದಾರು ಮಂದಿ ಆಕೆಗೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇನ್‌ಸ್ಟ್ರಾದಲ್ಲಿ ವಿಡಿಯೋ ಅಪ್‌ಲೋಡ್‌ :

ಈ ಮಧ್ಯೆ ಆರೋಪಿ ಇನ್‌ಸ್ಟ್ರಾಗ್ರಾಂನಲ್ಲಿ ನಕಲಿ ಪೇಜ್‌ ತೆರೆದು, ಖಾಸಗಿ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಿದ್ದಾನೆ. ಅದನ್ನು ಆಕೆಯ ಸ್ನೇಹಿತರು, ಪರಿಚಯಸ್ಥರಿಗೆ ಶೇರ್‌ ಮಾಡಿದ್ದ. ಅದರಿಂದ ಗಾಬರಿಗೊಂಡ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಮುಖ ಆರೋಪಿ ಡ್ಯಾನ್ಸ್‌ ಮಾಸ್ಟರ್‌ ಸಂತ್ರಸ್ತೆಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ವೆುàಲ್‌ ಮಾಡಿ, ತನ್ನ ಸ್ನೇಹಿತರ ಜತೆ ಸೇರಿ ಅತ್ಯಾಚಾರ ಎಸಗಿದ್ದಾನೆ. ನೃತ್ಯ ಶಾಲೆಯ ವಿದ್ಯಾರ್ಥಿನಿಯರ ಮೇಲೂ ಈ ರೀತಿಯ ದೌರ್ಜನ್ಯ ಎಸಗಿದ್ದಾನೆ ಎಂಬ ಬಗ್ಗೆ ಪರಿಶೀಲಿಸಲಾಗಿದೆ.-ಲಕ್ಷ್ಮೀ  ಪ್ರಸಾದ್‌, ಈಶಾನ್ಯ ವಿಭಾಗ ಡಿಸಿಪಿ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.