ನೌಕರಿ ನೆಪದಲ್ಲಿ ಯುವತಿಯರ ಕರೆಸಿಕೊಂಡು ವೇಶ್ಯಾವಾಟಿಕೆ; ಮಹಿಳೆ ಸೇರಿ ಮೂವರ ಬಂಧನ
ನರ್ಸಿಂಗ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ; ನಾಲ್ವರು ಮಹಿಳೆಯರ ರಕ್ಷಣೆ
Team Udayavani, Nov 24, 2022, 12:33 PM IST
ಬೆಂಗಳೂರು: ನೆರೆ ರಾಜ್ಯದ ಮಹಿಳೆಯರು ಮತ್ತು ಯುವತಿಯರಿಗೆ ಉದ್ಯೋಗ ಕೊಡಿಸುವುದಾಗಿ ನರ್ಸಿಂಗ್ ಸೆಂಟರ್‌ಗೆ ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆ ಸೇರಿ ಮೂವರನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.
ಸಂಜಯನಗರದ ನಾಗಶೆಟ್ಟಿಹಳ್ಳಿ ನಿವಾಸಿ ಅರ್ಚನಾ (37), ದಾವಣಗೆರೆ ಜಿಲ್ಲೆಯ ರಾಘವೇಂದ್ರ (30) ಮತ್ತು ತುಮಕೂರಿನ ಮಂಜುನಾಥ್ (33) ಬಂಧಿತರು. ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.
ಕಾಟನ್ ಪೇಟೆ ಠಾಣೆ ವ್ಯಾಪ್ತಿಯ ಬಳೇಪೇಟೆಯ ಕೆವಿ ಟೆಂಪಲ್ ಸ್ಟ್ರೀಟ್‌ನಲ್ಲಿರುವ ಗಂಧರ್ವ ಡಿಲಕ್ಸ್ ಲಾಡ್ಜ್ ನಲ್ಲಿ ಅಕ್ರಮವಾಗಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಮಾಹಿತಿ ದೊರಕಿತ್ತು. ಈ ಮಾಹಿತಿ ಮೇರೆಗೆ ಕಾಟನ್‌ಪೇಟೆ ಠಾಣೆ ಪೊಲೀಸರು ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ. ನಂತರ ಸಂತ್ರಸ್ತೆಯ ವಿಚಾರಣೆ ವೇಳೆ ನರ್ಸಿಂಗ್ ಸೆಂಟರ್ ಹೆಸರಿನಲ್ಲಿ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳ ಪೈಕಿ ಅರ್ಚನಾ ಸಂಜಯನಗರದಲ್ಲಿ ಅರ್ಚನಾ ಸಿಬಿಕಾ ಆ್ಯಂಡ್ ಆಯು ಸೆಂಟರ್(ಬ್ಯೂರೋ ಆಫ್ ಕ್ವಾಲಿಫೈಡ್ ನರ್ಸ್ ಆ್ಯಂಡ್ ಆಯು) ಎಂಬ ಹೆಸರಿನಲ್ಲಿ ನರ್ಸಿಂಗ್ ಸೆಂಟರ್ ನಡೆಸುತ್ತಿದ್ದಾಳೆ. ನರ್ಸಿಂಗ್ ತರಬೇತಿಗೆಂದು ಬರುವ ಕೆಲ ಯುವತಿಯರು ಹಾಗೂ ಮಹಿಳೆಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…
ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ
ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ
ಗುಬ್ಬಿ, ತುಮಕೂರು ನಗರ, ಗ್ರಾಮಾಂತರ ಕ್ಷೇತ್ರ ಕಗ್ಗಂಟು
ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ