ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ!

ಸಾಲ ತೀರಿಸಲು ಕೃತ್ಯವೆಸಗಿ ಪೊಲೀಸರ ಅತಿಥಿಯಾದ!

Team Udayavani, Jan 23, 2022, 9:15 AM IST

ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ! ಸಾಲ ತೀರಿಸಲು ಕೃತ್ಯವೆಸಗಿ ಪೊಲೀಸರ ಅತಿಥಿಯಾದ!

ಬೆಂಗಳೂರು: ಓದಿದ್ದು ಮೆಕ್ಯಾನಿಕಲ್‌ ಎಂಜಿನಿಯರ್‌… ಮಾಡಿದ್ದು ಬ್ಯಾಂಕ್‌ ದರೋಡೆ!

ಇದು ಸಿನಿಮಾ ಕಥೆಯಲ್ಲ. ಆದರೆ, ಸಿನಿಮೀಯ ಮಾದರಿಯಲ್ಲಿ ಬ್ಯಾಂಕ್‌ ದರೋಡೆ ಮಾಡಿ ಶೇ.95ರಷ್ಟು ಸಾಲವನ್ನು ತೀರಿಸಿ, ಕೊನೆಗೂ ಪೊಲೀಸರ ಅತಿಥಿಯಾದ ಬೆಂಗಳೂರಿನ ಬಸವೇಶ್ವರನಗರ ನಿವಾಸಿ ಎಸ್‌. ಧೀರಜ್‌ (28) ಎಂಬಾತನ ಕಥೆಯಿದು.

ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಲಕ್ಷಾಂತರ ರೂ. ನಷ್ಟ ಉಂಟಾಗಿ ಮಾಡಿಕೊಂಡಿದ್ದ ಸಾಲ ತೀರಿಸಲು ಯೂ ಟ್ಯೂಬ್‌, ಗೂಗಲ್‌ ನೋಡಿ ಈತ ಬ್ಯಾಂಕ್‌ ದರೋಡೆ ಮಾಡಿದ್ದಾನೆ. ಈತ ಮಡಿವಾಳ ಠಾಣೆ ವ್ಯಾಪ್ತಿಯ ರಾಷ್ಟ್ರೀಕೃತ ಬ್ಯಾಂಕ್‌ಗೆ ಜ.14ರಂದು ಸಂಜೆ 5.40ರ ಸುಮಾರಿಗೆ ನುಗ್ಗಿ ಸಿಬ್ಬಂದಿಗೆ ಚಾಕು ತೋರಿಸಿ, ಸ್ಟ್ರಾಂಗ್‌ ರೂಮ್‌ನಲ್ಲಿ 16 ಪಾಕೆಟ್‌ನಲ್ಲಿದ್ದ 1 ಕೆ.ಜಿ. 805 ಗ್ರಾಂ ಚಿನ್ನಾಭರಣ, 3,76,960 ರೂ. ನಗದು ದೋಚಿ ಪರಾರಿಯಾಗಿದ್ದ.

ಸಾಲ ತೀರಿಸಲು ದರೋಡೆಗಿಳಿದ: ಮೆಕ್ಯಾನಿಕಲ್‌ ಎಂಜಿನಿಯರ್‌ ವ್ಯಾಸಂಗ ಮಾಡಿರುವ ಧೀರಜ್‌, ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮಾಸಿಕ 30 ಸಾವಿರ ರೂ. ವೇತನ ಪಡೆಯುತ್ತಿದ್ದ. ಈ ಮಧ್ಯೆ ಆರೋಪಿ “ಒಎಲ್‌ವೈಎಂಪಿ ಟ್ರೇಡಿಂಗ್‌’ನಲ್ಲಿ ಲಕ್ಷಾಂತರ ರೂ. ಹೂಡಿಕೆ ಮಾಡಿದ್ದಾನೆ. ಅದರಿಂದ ನಷ್ಟ ಹೊಂದಿದ್ದು, ಕ್ರೆಡಿಟ್‌ ಕಾರ್ಡ್‌, ಫೈನಾನ್ಸ್‌, ಸ್ನೇಹಿತರಿಂದ 35 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾನೆ. ಸಾಲ ಹಿಂದಿರುಗಿಸುವಂತೆ ಸಾಲಗಾರರ ಒತ್ತಡ ಹೆಚ್ಚಾಗಿತ್ತು. ಬರುವ ಮಾಸಿಕ ವೇತನದಲ್ಲಿ ಅದು ಸಾಧ್ಯವಾಗಿರಲಿಲ್ಲ. ಅಂಥ ಸಮಯದಲ್ಲಿ ಅವನಿಗೆ ಹೊಳೆದಿದ್ದೇ “ದರೋಡೆ’ ಐಡಿಯಾ.

ಕೃತ್ಯಕ್ಕೆ ಯುಟ್ಯೂಬ್‌ ಶೋಧ: ಕೆಲವು ದಿನಗಳ ಹಿಂದೆ ನೆರೆ ರಾಜ್ಯದಲ್ಲಿ ಬ್ಯಾಂಕ್‌ವೊಂದರಲ್ಲಿ ಕೋಟ್ಯಂತರ ರೂ. ದರೋಡೆ ಮಾಡಿದ ಸುದ್ದಿ ಪ್ರಕಟವಾಗಿತ್ತು. ಆ ಸುದ್ದಿಯೇ ಈತನಿಗೆ “ಪ್ರೇರಣೆ’ ನೀಡಿತ್ತು. ಕೂಡಲೇ ಗೂಗಲ್‌, ಯೂಟ್ಯೂಬ್‌ನಲ್ಲಿ ದರೋಡೆ ಮಾಡುವುದು ಹೇಗೆ ಎಂಬ ಬಗ್ಗೆ ಜಾಲಾಡಿದ್ದಾನೆ. ತನಗೆ ಬೇಕಾದ ಮಾಹಿತಿ ಸಿಕ್ಕ ನಂತರ, ಭದ್ರತಾ ಸಿಬ್ಬಂದಿ ಇಲ್ಲದಿರುವ ಮಡಿವಾಳದ ರಾಷ್ಟ್ರೀಕೃತ ಬ್ಯಾಂಕ್‌ ಅನ್ನು ದರೋಡೆ ಮಾಡಲು ನಿರ್ಧರಿಸಿದ್ದಾನೆ.

ಇದನ್ನೂ ಓದಿ:ಉ.ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ,ಮೂವರು ಡಿಸಿಎಂ: ಅಸಾದುದ್ದೀನ್ ಓವೈಸಿ

ಇಲ್ಲಿ ಯಾವ ಸಮಯದಲ್ಲಿ ಎಷ್ಟು ಮಂದಿ ಇರುತ್ತಾರೆ? ಎಷ್ಟು ಗಂಟೆಗೆ ವ್ಯವಹಾರ ಮುಕ್ತಾಯಗೊಳ್ಳುತ್ತದೆ? ಎಂಬೆಲ್ಲ ವಿಚಾರಗಳ ಬಗ್ಗೆ 3 ದಿನಗಳ ಕಾಲ ಮಾಹಿತಿ ಸಂಗ್ರಹಿಸಿಕೊಂಡಿದ್ದಾನೆ. ಪ್ಲ್ರಾನ್‌ ಸಿದ್ಧವಾದ ನಂತರ, ಜ.14ರಂದು ಸಂಜೆ ಒಬ್ಬರು ಸಿಬ್ಬಂದಿ ಬ್ಯಾಂಕ್‌ ಬಾಗಿಲು ಹಾಕುವಷ್ಟರಲ್ಲಿ ತನ್ನ ಕೃತ್ಯ ಮಾಡಿ ಮುಗಿಸಿದ್ದ.

4 ಕಿ.ಮೀ. ನಡೆದೇ ಸಾಗಿದ!: ದರೋಡೆಯ ಬಳಿಕ ಸುಮಾರು ನಾಲ್ಕೈದು ಕಿ.ಮೀ. ನಡೆದುಕೊಂಡೇ ಸಾಗಿದ್ದಾನೆ. ನಂತರ ಬಿಎಂಟಿಸಿ ಬಸ್‌ನಲ್ಲಿ ಬನಶಂಕರಿಗೆ ಹೋಗಿ, ಚಿನ್ನಾಭರಣ ಮಾರಾಟಕ್ಕೆ ಯತ್ನಿಸಿದ್ದಾನೆ. ಸಾಧ್ಯವಾಗಿಲ್ಲ. ನಂತರ ಚಿಕ್ಕಮಗಳೂರಿಗೆ ಹೋಗಿದ್ದ. ಆದರೆ, ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರಿಂದ ತುಮಕೂರು, ನಂತರ ಆಂಧ್ರಕ್ಕೆ ತೆರಳಿದ್ದಾನೆ. ಅಲ್ಲೂ ಮಾರಲಾಗದೇ, ಬಳ್ಳಾರಿಗೆ ಬಂದು, ಬಳಿಕ ಬೆಂಗಳೂರಿಗೆ ಬಂದು, ಹಂತ-ಹಂತವಾಗಿ ಮಾರಾಟ ಮಾಡಿ ಶೇ.95ರಷ್ಟು ಸಾಲ ತೀರಿಸಿದ್ದ. ಕೊನೆಯ ಸಾಲಗಾರನಿಗೆ ಹಣ ಕೊಡಲು ಮುಂದಾಗಿರುವ ಮಾಹಿತಿ ಸಿಗುತ್ತಿದ್ದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಾರಾಟ ಮಾಡಿದ್ದ ಎಲ್ಲ ಚಿನ್ನಾಭರಣವನ್ನು ಜಪ್ತಿ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.