ವೈಟ್ಟಾಪಿಂಗ್ಗೆ ಅವಕಾಶ ನೀಡಲು ಬಿಬಿಎಂಪಿ ಮನವಿ
Team Udayavani, May 25, 2018, 11:53 AM IST
ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಥಗಿತಗೊಂಡಿದ್ದ ವೈಟ್ಟಾಪಿಂಗ್ ಕಾಮಗಾರಿಗೆ ಮರು ಚಾಲನೆ ನೀಡಲು ಬಿಬಿಎಂಪಿ ಮುಂದಾಗಿದ್ದು, ಕಾಮಗಾರಿ ಮುಂದುವರಿಕೆಗೆ ಅನುಮತಿ ಕೋರಿ ನಗರ ಸಂಚಾರ ಪೊಲೀಸರಿಗೆ ಮನವಿ ಮಾಡಿದೆ.
ರಾಜಧಾನಿಯಲ್ಲಿ ರಸ್ತೆ ಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಮುಖ ರಸ್ತೆಗಳನ್ನು ವೈಟ್ ಟಾಪಿಂಗ್ನಡಿ ಅಭಿವೃದ್ಧಿಪಡಿಸಲು ಪಾಲಿಕೆ ಮುಂದಾಗಿತ್ತು. ಆದರೆ ಹಲವು ರಸ್ತೆಗಳಲ್ಲಿ ಏಕಕಾಲಕ್ಕೆ ಕಾಮಗಾರಿ ಆರಂಭವಾಗಿದ್ದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಇಲ್ಲದ ಪರದಾಡುವಂತಾಗಿದ್ದರಿಂದ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಅದೇ ವೇಳೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಅಧಿಕಾರಿಗಳು, ಇದೀಗ ಹಂತ ಹಂತವಾಗಿ ಕಾಮಗಾರಿ ಮುಂದುವರಿಸಲು ಯೋಜನೆ ರೂಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ವೈಟ್ಟಾಪಿಂಗ್ ಕಾಮಗಾರಿ ಮುಂದುವರಿಸಲು ಸಂಚಾರ ಬದಲಾವಣೆಗೆ ಅವಕಾಶ ಕೋರಿ ಅಧಿಕಾರಿ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ನಗರದ ಹೊರವರ್ತುಲ ರಸ್ತೆ ಸೇರಿದಂತೆ ಒಟ್ಟು 29 ರಸ್ತೆಗಳನ್ನು ಪಾಲಿಕೆ ವೈಟ್ಟಾಪಿಂಗ್ನಡಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದು, 972.69 ಕೋಟಿ ರೂ. ವೆಚ್ಚದಲ್ಲಿ ಒಟ್ಟು 93.47 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಎರಡು ಕಂಪನಿಗಳಿಗೆ ವಹಿಸಲಾಗಿದೆ.
ಅದರಂತೆ ಮೊದಲ ಹಂತದಲ್ಲಿ 281 ಕೋಟಿ ರೂ. ವೆಚ್ಚದಲ್ಲಿ ಐದು ಮಾರ್ಗಗಳ 39.80 ಕಿ.ಮೀ. ಉದ್ದದ ವೈಟ್ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಿರುವ ಗುತ್ತಿಗೆದಾರರು ಈವರೆಗೆ ಒಟ್ಟು 9.5 ಕಿ.ಮೀ. ಕಾಮಗಾರಿ ಪೂರ್ಣಗೊಳಿಸಿದ್ದಾರೆ.
ಹೊರವರ್ತುಲ ರಸ್ತೆಯ ಜ್ಞಾನಭಾರತಿಯಿಂದ ಸುಮನಹಳ್ಳಿ ಜಂಕ್ಷನ್ ಹಾಗೂ ತುಮಕೂರು ರಸ್ತೆಯಿಂದ ಹಳೇ ಮದ್ರಾಸ್ ರಸ್ತೆಯ ಒಟ್ಟು 22.20 ಕಿ.ಮೀ. ಮಾರ್ಗದ ಪೈಕಿ ಒಟ್ಟು 2.9 ಕಿ.ಮೀ. ವೈಟ್ಟಾಪಿಂಗ್ ಪೂರ್ಣಗೊಂಡಿದೆ. ನಾಗವಾರ ಹೊರವರ್ತುಲ ರಸ್ತೆ, ವಿಜಯನಗರ, ಹೊಸೂರು ರಸ್ತೆ, ಕೋರಮಂಗಲ, ಮೈಸೂರು ರಸ್ತೆ ಸೇರಿದಂತೆ ಒಟ್ಟು 9.5 ಕಿ.ಮೀ. ಉದ್ದದ ವೈಟ್ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.
ಈಗಾಗಲೇ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶದಿಂದ ಕಾಮಗಾರಿ ಮುಂದುವರಿಸಲು ಅನುಮತಿ ನೀಡುವಂತೆ ನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ. ಏಕಕಾಲದಲ್ಲಿ ಕಾಮಗಾರಿ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಡೆಸಲು ಅನುಮತಿ ಕೋರಲಾಗಿದೆ.
-ಕೆ.ಟಿ.ನಾಗರಾಜ್, ಮುಖ್ಯ ಎಂಜಿನಿಯರ್ (ಯೋಜನೆ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ