ಕಮಿಟಿ ಅಧಿಕಾರ ಮೊಟಕುಗೊಳಿಸದಿರಿ

ನಗರದ ಅಭಿವೃದ್ಧಿ ಕುರಿತು ಸಂವಾದ

Team Udayavani, Sep 13, 2020, 11:52 AM IST

ಕಮಿಟಿ ಅಧಿಕಾರ ಮೊಟಕುಗೊಳಿಸದಿರಿ

ಬೆಂಗಳೂರು: ಬಿಬಿಎಂಪಿ ಆಡಳಿತ ಹಾಗೂ ನಿರ್ವಹಣೆಗೆ ಸರ್ಕಾರ ರೂಪಿಸಲು ಉದ್ದೇಶಿಸಿರುವ ಪ್ರತ್ಯೇಕ ಕಾಯ್ದೆಯಲ್ಲಿ ವಾರ್ಡ್‌ ಮಟ್ಟದ ಕಮಿಟಿಗಳ ಅಧಿಕಾರ ಮೊಟಕುಗೊಳಿಸಬಾರದು ಎಂದು ಮಾಜಿ ಮೇಯರ್‌ಗಳು,ಪಾಲಿಕೆ ಮಾಜಿ ಸದಸ್ಯರು ಒತ್ತಾಯ ಮಾಡಿದ್ದಾರೆ. ಜನಾಗ್ರಹ ಸಂಸ್ಥೆಯಿಂದ ಶನಿವಾರ ನಗರದ ಸಮಗ್ರ ಅಭಿವೃದ್ಧಿ ಕುರಿತು ಬಿಬಿಎಂಪಿ ಮಾಜಿ ಸದಸ್ಯರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಆಗ್ರಹ ಕೇಳಿಬಂದಿದೆ.

ಪ್ರತಿ ವಾರ್ಡ್‌ಗಳಲ್ಲಿ ಸರ್ವ ಪಕ್ಷಗಳ ಮುಖಂಡರು ಹಾಗೂ ವಾರ್ಡ್‌ನ ಎಲ್ಲ ಹಲವು ಜನರನ್ನು ಒಳಗೊಂಡಂತೆ ವಾರ್ಡ್‌ ಕಮಿಟಿ ರಚನೆ ಆಗುತ್ತದೆ. ಇದರಿಂದ ವಾರ್ಡ್‌ನ ಸದಸ್ಯರು ಹಾಗೂ ಜನರ ನಡುವೆ ಉತ್ತಮ ಸಂವಾದ ಇರುತ್ತದೆ. ವಾರ್ಡ್‌ನ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಹೊಸ ಯೋಜನೆ ಅನುಷ್ಟಾನದಬಗ್ಗೆ ಚರ್ಚೆ ಮಾಡಲು ಸಹಾಯ ವಾಗಲಿದೆ. ಹೀಗಾಗಿ, ವಾರ್ಡ್‌ ಮಟ್ಟದ ಕಮಿಟಿ ಅಧಿಕಾರ ಮೊಟಕುಗೊಳಿಸಬಾರದು ಎಂದು ಮಾಜಿ ಮೇಯರ್‌ ಗಂಗಾಂಬಿಕೆ ಅಭಿಪ್ರಾಯ ಪಟ್ಟರು.

ಪಾಲಿಕೆಯ 50 ಸಾವಿರ ಕೋಟಿಗೂ ಹೆಚ್ಚು ಪಾಲಿಕೆಯ ಆಸ್ತಿ ಭೂಗಳ್ಳರ ಪಾಲಾಗಿದ್ದು, ಅದನ್ನು ಪರಿಶೀಲಿಸಿ ವಶಕ್ಕೆ ಪಡೆಯಬೇಕು. ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ಸುಧಾರಣೆ ತರಬೇಕು ಎಂದು ಪಾಲಿಕೆ ಮಾಜಿ ಸದಸ್ಯ ಮೋಹನ್‌ ಕುಮಾರ್‌ ಆಗ್ರಹಿಸಿದರು.

ಮಾಜಿ ನಾಯಕ ಎಂ. ಶಿವರಾಜು ಮಾತನಾಡಿ, ಪಾಲಿಕೆಗೆ ಆಸ್ತಿ ತೆರಿಗೆ ಮತ್ತು ತೆರಿಗೆಯೇತರ ಆದಾಯ ಸೇರಿ ಒಟ್ಟು 3,500 ಕೋಟಿ ರೂ. ಗೂ ಕಡಿಮೆ ಆದಾಯ ಇದೆ ಇಷ್ಟಾದರೂ, ಆದಾಯಕ್ಕಿಂತ ಹೆಚ್ಚು ವೆಚ್ಚದ ಬಜೆಟ್‌ ಮಂಡನೆ ಮಾಡಲಾಗುತ್ತಿದೆ. ಸರ್ಕಾರವೂ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ನೀಡುತ್ತಿಲ್ಲ. ಹೀಗಾಗಿ, ವಾಸ್ತವಿಕ ಆದಾಯದ ಆಧಾರದಲ್ಲಿ ಬಜೆಟ್‌ ಮಂಡನೆ ಮಾಡಬೇಕು ಎಂದು ಹೇಳಿದರು. ಸಂವಾದಲ್ಲಿ ಮಾಜಿ ಮೇಯರ್‌ ಗೌತಮ್‌ಕುಮಾರ್‌, ಸಂವಾದದಲ್ಲಿ ಜನಾಗ್ರಹ ಸಂಸ್ಥೆಯ ಸ್ವಪ್ನ, ಪಾಲಿಕೆ ಮಾಜಿ ಸದಸ್ಯರು ಹಾಜರಿದ್ದರು.

ಸಮಸ್ಯೆಯ ಬಗ್ಗೆ ಜನಾಭಿಪ್ರಾಯ :  ಸಂಚಾರ ದಟ್ಟಣೆ ಶೇ.30, ರಸ್ತೆಗುಂಡಿ ಶೇ.27, ಕಸದ ಸಮಸ್ಯೆ ಶೇ.17, ನೀರು ಸರಬರಾಜು ಶೇ.9, ಪ್ರವಾಹ ಶೇ.6, ಕೆರೆಗಳು ಶೇ.6 ಹಾಗೂ ರಾಜಕಾಲುವೆ ಸಮಸ್ಯೆಗಳ ಬಗ್ಗೆ ಶೇ.5 ಜನರು ಮುಖ್ಯ ಸಮಸ್ಯೆಯಾಗಿ ಗುರುತಿಸಿದ್ದಾರೆ. ಬಿಬಿಎಂಪಿ ಕಸದ ನಿರ್ವಹಣೆಗೆ ಶೇ.11 ಉತ್ತಮ, ಶೇ.38 ಸುಧಾರಿಸಿದೆ ಹಾಗೂ ಶೇ.51 ಜನರು ಕಳಪೆ ನಿರ್ವಹಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಬಗ್ಗೆ ಜನಾಗ್ರಹ ಸಂಘಟನೆಯ ಶ್ರೀನಿವಾಸ್‌ ಅಲವಳ್ಳಿ ತಿಳಿಸಿದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.