ಕಾರಿನಲ್ಲಿ ಪೆಪ್ಪರ್‌ ಸ್ಪ್ರೆ ಇಟ್ಟುಕೊಳ್ಳುವುದು ತಪ್ಪಾ?: ಏನಿದು ಬೆಂಗಳೂರು ಘಟನೆ?

Team Udayavani, Jan 12, 2023, 9:48 AM IST

Bengaluru man taken to station for keeping pepper spray in car

ಬೆಂಗಳೂರು: ಕಾರಿನಲ್ಲಿ ಪೆಪ್ಪರ್‌ ಸ್ಪ್ರೆ ಇಟ್ಟುಕೊಳ್ಳುವುದು ತಪ್ಪಾ?! ಹೀಗೊಂದು ಪ್ರಶ್ನೆ ಹುಟ್ಟಿಕೊಂಡಿದೆ.

ಇತ್ತೀಚೆಗೆ ಆಡುಗೋಡಿ ಠಾಣೆ ಪೊಲೀಸರು ವಾಹನಗಳ ತಪಾಸಣೆ ವೇಳೆ ಕಾರಿನಲ್ಲಿ ಪೆಪ್ಪರ್‌ ಸ್ಪ್ರೆ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿರುವ ಸ್ವಾರಸ್ಯಕರ ಪ್ರಸಂಗ ಬೆಳಕಿಗೆ ಬಂದಿದೆ.

ಈ ಕುರಿತು ವಿಚಾರಣೆಗೊಳಗಾದ ವ್ಯಕ್ತಿ ಆಡುಗೋಡಿ ಠಾಣೆ ಪೊಲೀಸರ ವರ್ತನೆ ಬಗ್ಗೆ ಬೇಸರಗೊಂಡು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಘಟನೆಯನ್ನು ವಿವರಿಸಿದ್ದಾರೆ. ಅಲ್ಲದೆ, ಕಾರಿನಲ್ಲಿ ಪೆಪ್ಪರ್‌ ಸ್ಪ್ರೆ ಇಟ್ಟುಕೊಳ್ಳುವುದು ತಪ್ಪಾ? ಎಂದು ಪ್ರಶ್ನಿಸಿ ನಗರ ಪೊಲೀಸ ಆಯುಕ್ತರು, ಡಿಜಿಪಿ-ಐಜಿಪಿಗೆ ಟ್ಯಾಗ್‌ ಮಾಡಿದ್ದಾರೆ.

ಇದನ್ನೂ ಓದಿ:ಭಾರತೀಯ ದೃಷ್ಟಿಕೋನದಿಂದ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ಜ.8ರಂದು ದೂರುದಾರ ವ್ಯಕ್ತಿ ಕೋರಮಂಗಲದ ಮಾಲ್‌ ಎಂದುರು ಕಾರಿನಲ್ಲಿ ಸ್ನೇಹಿತರಿಗಾಗಿ ಕಾಯುತ್ತಾ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆಡುಗೋಡಿ ಠಾಣೆ ಕಾನ್‌ಸ್ಟೇಬಲ್‌, ಭದ್ರತಾ ತಪಾಸಣೆಗಾಗಿ ಕಾರು ಪರಿಶೀಲಿಸಿದ್ದಾರೆ. ಆಗ ಕಾರಿನಲ್ಲಿ ಪೆಪ್ಪರ್‌ ಸ್ಪ್ರೆ ಪತ್ತೆಯಾಗಿದೆ. ಆಗ ಕಾರು ಮಾಲೀಕನಿಗೆ ಯಾವ ಕಾರಣಕ್ಕೆ ಪೆಪ್ಪರ್‌ ಸ್ಪ್ರೆ ಇಟ್ಟುಕೊಂಡಿದ್ದಿರಾ? ಎಂದು ಪ್ರಶ್ನಿಸಿದ್ದಾರೆ. ಕಾರು ಮಾಲೀಕ ಸುರಕ್ಷತೆಗಾಗಿ ಇಟ್ಟುಕೊಂಡಿದ್ದೇನೆ ಪ್ರತಿಕ್ರಿಯಿಸಿದ್ದಾರೆ. ಆಗ ಕಾನ್‌ ಸ್ಟೇಬಲ್‌ ಈ ರೀತಿ ಅನಗತ್ಯವಾಗಿ ಪೆಪ್ಪರ್‌ ಸ್ಪ್ರೆ ಇಟ್ಟುಕೊಳ್ಳುವುದು ತಪ್ಪು ಎಂದಿದ್ದಾರೆ. ಆಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದನ್ನು ವಿಡಿಯೋ ಮಾಡಿಕೊಳ್ಳುವಾಗ ಸ್ಥಳಕ್ಕೆ ಬಂದ ಮತ್ತೂಬ್ಬ ಕಾನ್‌ ಸ್ಟೇಬಲ್‌ ಮೊಬೈಲ್‌ ಕಸಿದುಕೊಂಡು ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕೂರಿಸಿ, ಬಳಿಕ ತನ್ನ ಮೊಬೈಲ್‌ ನಲ್ಲಿದ್ದ ವಿಡಿಯೋ ಡಿಲೀಟ್‌ ಮಾಡಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಆರೋಪಿಸಿ ಡಿಜಿಪಿ ಪ್ರವೀಣ್‌ ಸೂದ್‌, ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಖಾತೆಗೆ ಟ್ಯಾಗ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಳಿಕ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅವರಿಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಮಡಿವಾಳ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆಎಂದು ಪೊಲೀಸರು ಹೇಳಿದರು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಗ್ನೇಯ ವಿಭಾಗದ ಪೊಲೀಸರು ಜನವರಿ 8ರಂದು ರಾತ್ರಿ ದೂರು ನೀಡಿರುವ ವ್ಯಕ್ತಿ ಅನುಮಾನಸ್ಪಾದವಾಗಿ ಕಂಡಿದ್ದರ ಹಿನ್ನೆಲೆಯಲ್ಲಿ ಪೊಲೀಸ್‌ ಸಿಬ್ಬಂದಿ ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಮಡಿವಾಳ ವಿಭಾಗದ ಎಸಿಪಿ ತನಿಖೆ ನಡೆಸುತ್ತಿದ್ದು ವರದಿ ಬಂದ ಬಳಿಕ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.