ಕಾಮುಕರ ಅಟ್ಟಹಾಸ: ನಡುರಸ್ತೆಯಲ್ಲಿ ಯುವತಿಯ ತಬ್ಬಿ ಲೈಂಗಿಕ ಕಿರುಕುಳ

Team Udayavani, Jan 4, 2017, 10:55 AM IST

10.jpg

ಬೆಂಗಳೂರು: ನಗರದಲ್ಲಿ ವರ್ಷಾಚರಣೆ ಸಂಭ್ರಮದ ವೇಳೆ ನಡೆದಿದೆ ಎನ್ನಲಾದ ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ರಾಷ್ಟ್ರವ್ಯಾಪಿ ಸುದ್ದಿಯಾಗಿದ್ದು, ಇದೀಗ ಬಯಲಾಗಿರುವ ಸಿಸಿಟಿವಿ ದೃಶ್ಯಾವಳಿಯೊಂದರಲ್ಲಿ ಯುವತಿಯೊಬ್ಬಳನ್ನು ಕಾಮುಕರಿಬ್ಬರು ನಡುರಸ್ತೆಯಲ್ಲಿ ತಬ್ಬಿ,ಚುಂಬಿಸಿ,ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ರಸ್ತೆಗೆ ಎಸೆದ ಹೇಯ ಘಟನೆ ಬಯಲಿಗೆ ಬಂದಿದೆ. 

ಕಮ್ಮನಹಳ್ಳಿಯ 5 ನೆ ಮುಖ್ಯರಸ್ತೆಯಲ್ಲಿ  ಜನವರಿ 1 ರಂದು ನಸುಕಿನ 2.30 ರ ವೇಳೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿಳಿದ ಯುವತಿಯನ್ನು ಸ್ಕೂಟರ್‌ನಲ್ಲಿ ಬಂದ ಕಾಮುಕರಿಬ್ಬರು ಅಡ್ಡಗಟ್ಟಿದ್ದಾರೆ. ಒಬ್ಟಾತ ಸ್ಕೂಟರ್‌ನಿಂದ ಇಳಿದು ಯುವತಿಯನ್ನು ತಬ್ಬಿ ಮುದ್ದಾಡಿ ಚುಂಬಿಸಿದ್ದಾನೆ. ಯುವತಿಯನ್ನು ಎಳೆದೊಯ್ದು ಸ್ಕೂಟರ್‌ನಲ್ಲಿ ಕೂರಿಸಲು ಯತ್ನಿಸಿದ್ದಾನೆ, ಪ್ರತಿರೋಧ ತೋರಿದಾಗ ರಸ್ತೆಗೆ ಎಸೆದು ಪರಾರಿಯಾಗಿದ್ದಾರೆ. 

ಘಟನೆ ನಡೆಯುವ ವೇಳೆ 50 ಮೀಟರ್‌ ದೂರದಲ್ಲಿ ನಾಲ್ಕೈದು ಜನ ನಿಂತು ನೋಡುತ್ತಿದ್ದರೆ ಹೊರತು ಯಾರೊಬ್ಬರು ಯುವತಿಯ ನೆರವಿಗೆ ಧಾವಿಸಲಿಲ್ಲ. 

ಪ್ರಕರಣ ತನಿಖೆ ಹಂತದಲ್ಲಿದ್ದು, ಅಧಿಕಾರಿಗಳು ಸದ್ದಿಲ್ಲದೇ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಎಂ.ಜಿ.ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಕುರಿತು ರಾಷ್ಟ್ರೀಯ ಹಾಗೂ ಆಂಗ್ಲ ಮಾಧ್ಯಮಗಳಲ್ಲಿ ರೋಚಕವಾಗಿ ಸುದ್ದಿ ಪ್ರಕಟವಾಗುತ್ತಿದ್ದಂತೆ ರಾಷ್ಟ್ರವ್ಯಾಪಿ ಭಾರೀ
ಸುದ್ದಿಯಾಗಿತ್ತು. ಇದಾದ ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಪ್ರಕರಣದ ತನಿಖೆಯ ನೇತೃತ್ವವನ್ನು ಹಿರಿಯ ಮಹಿಳಾ ಐಪಿಎಸ್‌ ಅಧಿಕಾರಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ವಹಿಸಲಾಗಿತ್ತು. 

ನಾಲ್ವರು ಶಂಕಿತರು ವಶಕ್ಕೆ 

 ಪ್ರಕರಣದ ಸಿಸಿಟಿವಿ ದೃಶ್ಯಾವಳಿ ರಾಷ್ಟ್ರವ್ಯಾಪಿ ಪ್ರಸಾರವಾಗಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ಬುಧವಾರ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಇಬ್ಬರು ಅಪರಿಚಿತರ ವಿರುದ್ಧ  ಬಾಣಸವಾಡಿ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ. 

ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಾಣಸವಾಡಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಯುವಕರನ್ನು ಕರೆತರುತ್ತಿದ್ದಂತೆ ಆತಂಕಿತರಾದ ಅವರ ತಾಯಂದಿರು , ಸಹೋದರಿಯರು ಮತ್ತು ಸಂಬಂಧಿಕರು ಠಾಣೆಯ ಎದುರು ಬಂದು ನಮ್ಮ ಮಕ್ಕಳು ಅಮಾಯಕರು ಅವರನ್ನು ಬಿಟ್ಟು ಬಿಡಿ ಎಂದು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿ  ಹೆಣ್ಣೂರು ಠಾಣೆ ಇನ್ಸ್‌ಪೆಕ್ಟರ್‌ ಪಿ.ಶ್ರೀನಿವಾಸ್‌ ಅವರು ನೀಡಿದ ದೂರಿನಂತೆ ಕೇಸು ದಾಖಲಿಸಿಕೊಳ್ಳಲಾಗಿದೆ. 

ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ಪ್ರಕರಣದ ಪ್ರಾಥಮಿಕ ತನಿಖೆಯ ವೇಳೆಗೆ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಕಾಮುಕರಿಗೆ  ಇನ್ನೆರಡು ಬೈಕ್‌ಗಳಲ್ಲಿದ್ದ ನಾಲ್ಕು ಮಂದಿ ಕಾಮುಕರು ನೀಚ ಕೃತ್ಯಕ್ಕೆ ಸಾಥ್‌ ನೀಡಿರುವ ಬಗ್ಗೆ ಕಂಡು ಬಂದಿದೆ. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.