ಬಿಜೆಪಿ ರಾಜ್ಯ ಕಾರ್ಯಕಾರಿಣಿ ಇಂದು
Team Udayavani, Jun 29, 2018, 6:35 AM IST
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಶುಕ್ರವಾರ ನಗರದಲ್ಲಿ ನಡೆಯಲಿದ್ದು, ಮುಂದಿನ ಲೋಕಸಭೆ ಚುನಾವಣೆ ಎದುರಿಸುವ ಕಾರ್ಯ ತಂತ್ರಗಳ ಬಗ್ಗೆ ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಲೋಕಸಭೆ ಚುನಾವಣೆಯಲ್ಲೂ ಎರಡೂ ಪಕ್ಷಗಳು ಮೈತ್ರಿ
ಮಾಡಿಕೊಳ್ಳುವುದಾಗಿ ಘೋಷಿಸಿರುವುದರಿಂದ ಬಿಜೆಪಿ ತನ್ನ ಕಾರ್ಯತಂತ್ರ ಬದಲಿಸಿಕೊಳ್ಳಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ -ಬಿಎಸ್ಪಿ ಮೈತ್ರಿಕೂಟವನ್ನು ಲೋಕಸಭೆ ಚುನಾವಣೆಯಲ್ಲಿ ಎದುರಿಸಲು ಯಾವ ತಂತ್ರ ಅನುಸರಿಸಬೇಕು ಎಂಬುದರ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.
ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕಾರಿಣಿಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸಾಧನೆ, ಪ್ರಸಕ್ತ ರಾಜಕೀಯ ವಿದ್ಯಮಾನ,ರಾಜ್ಯದ 28 ಲೋಕಸಭೆ ಕ್ಷೇತ್ರವಾರು ಸ್ಥಿತಿಗತಿ, 25 ಸೀಟು ಗೆಲ್ಲುವಂತೆ ಅಮಿತ್ ಶಾ ನೀಡಿದ್ದ ಗುರಿ ತಲುಪಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚೆಯಾಗಲಿದೆ ಎನ್ನಲಾಗಿದೆ.
ರಾಜಕೀಯ ನಿರ್ಣಯ, ಕೇಂದ್ರ ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆ,ಲೋಕಸಭೆ ಚುನಾವಣಾ ಕಾರ್ಯತಂತ್ರ
ಸೇರಿ ಒಟ್ಟು 3 ನಿರ್ಣಯ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಾರ್ಯಕಾರಿಣಿ ಉದ್ಘಾಟಿಸಲಿದ್ದು, ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಕೇಂದ್ರ ಸಚಿವರಾದ ಅನಂತಕುಮಾರ್,ಸದಾನಂದಗೌಡ, ರಮೇಶ್ ಜಿಗಜಿಣಗಿ, ಅನಂತ ಕುಮಾರ್ ಹೆಗಡೆ ಭಾಗವಹಿಸಲಿದ್ದಾರೆ.
ಇತ್ತೀಚೆಗೆ ಅಹಮದಾಬಾದ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾರ್ಯಕಾರಿಣಿಗೆ ಬರುವಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಯಡಿಯೂರಪ್ಪ ಆಹ್ವಾನ ನೀಡಿದ್ದರು. ಆದರೆ, ಕಾರ್ಯದ ಒತ್ತಡದಿಂದ ಆಗಮಿಸಲು ಸಾಧ್ಯವಾಗದು ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್