ಸ್ಫೋಟ ಪ್ರಕರಣ: ಅಪರಾಧಿಯ ಅಣ್ಣನಿಂದ ಅರ್ಜಿ


Team Udayavani, Mar 15, 2019, 6:15 AM IST

highcourt4.jpg

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2010ರಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಅಪರಾಧಿ ಗೌಹರ್‌ ಅಜೀಜ್‌ ಖುಮಾನಿಯನ್ನು ಅಕ್ರಮ ಬಂಧನದಲ್ಲಿ ಇಟ್ಟುಕೊಳ್ಳಲಾಗಿದೆ ಎಂದು ಆರೋಪಿಸಿ ಆತನ ಸಹೋದರ ಹಸನ್‌ ಅಜೀಜ್‌ ಅಮೀರ್‌ ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದಾನೆ.

ಅಕ್ರಮ ಬಂಧನದಲ್ಲಿರುವ ತನ್ನ ಸಹೋಹದರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅಮೀರ್‌ ಸಲ್ಲಿಸಿದ ಈ ಹೇಬಿಯಸ್‌ ಕಾರ್ಪಸ್‌ ಅರ್ಜಿಯು ಗುರುವಾರ ನ್ಯಾ. ಕೆ.ಎನ್‌. ಫ‌ಣೀಂದ್ರ ಹಾಗೂ ನ್ಯಾ. ಎಚ್‌.ಬಿ. ಪ್ರಭಾಕರ ಶಾಸಿŒ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿಗೆ ಸಂಬಂಧಿಸಿದಂತೆ ಪ್ರಾಥಮಿಕ ವಾದ ಆಲಿಸಿದ ನ್ಯಾಯಪೀಠ, ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆ ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಿಗೆ ನೋಟಿಸ್‌ ಜಾರಿಗೆ ಆದೇಶಿಸಿತು. ಅಲ್ಲದೇ  ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹೈಕೋರ್ಟ್‌ ಆದೇಶದಂತೆ ಅರ್ಜಿದಾರ ದಂಡವನ್ನು ಪಾವತಿಸಿದ್ದಾನೆ. ಆದರೆ, ಶಿಕ್ಷೆಯ ಅವಧಿ ಕಡಿತವಾದ ಹಾಗೂ ಬಂಧಿಸಿದ ದಿನಾಂಕದ ಬಗ್ಗೆ ಇರುವ ಗೊಂದಲಗಳ ಬಗ್ಗೆ ಜೈಲು ಅಧಿಕಾರಿಗಳು ಅಧೀನ ನ್ಯಾಯಾಲಯಕ್ಕೆ ವಿವರಣೆ ಕೇಳಿದ್ದರು. ಅಧೀನ ನ್ಯಾಯಾಲಯ ಸ್ಪಷ್ಟನೆ ನೀಡಿ, ಬಿಡುಗಡೆ ಆದೇಶ ಸಹ ನೀಡಿದೆ. ಆದರೆ, ಜೈಲು ಅಧಿಕಾರಿಗಳು ಬಿಡುಗಡೆ ಮಾಡದೇ ಅಕ್ರಮ ಬಂಧನದಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಬಿಡುಗಡೆಗೆ ಆದೇಶಿಸುವಂತೆ ಕೋರಿದರು.

ಪ್ರಕರಣವೇನು?: 2010ರ ಏ. 17ರಂದು ಮಧ್ಯಾಹ್ನ ಚಿನ್ನಸ್ವಾಮಿ ಸ್ಟೇಡಿಯಂ ಗೇಟ್‌ ಸಂಖ್ಯೆ 12ರಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 15ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದರು. ಇಂಡಿಯನ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯ ಯಾಸೀನ್‌ ಭಟ್ಕಳ್‌ ಸೇರಿದಂತೆ 14 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದ ಗೌಹರ್‌ ಅಜೀಜ್‌ ಖುಮಾನಿಯನ್ನು 2012ರಲ್ಲಿ ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಎನ್‌ಐಎ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಟಾಪ್ ನ್ಯೂಸ್

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

panchamasali

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ದೀಪಗಳ ಉತ್ಸವಕ್ಕೆ ಚಾಲನೆ

ದೀಪಗಳ ಉತ್ಸವಕ್ಕೆ ಚಾಲನೆ

ಹೆಲ್ತ್‌ ಕೇರ್

ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯಿಂದ ಮಿತ್ರಾಕ್ಲಿಪ್‌ ಯಶಸ್ವಿ ಬಳಕೆ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.