Bangalore: ಮ್ಯೂಸಿಯಂಗಳಿಗೆ ಬಾಂಬ್‌ ಬೆದರಿಕೆ; ಮೂರು ಪ್ರತ್ಯೇಕ ಪ್ರಕರಣ ದಾಖಲು


Team Udayavani, Jan 7, 2024, 1:47 PM IST

Bangalore: ಮ್ಯೂಸಿಯಂಗಳಿಗೆ ಬಾಂಬ್‌ ಬೆದರಿಕೆ; ಮೂರು ಪ್ರತ್ಯೇಕ ಪ್ರಕರಣ ದಾಖಲು

ಬೆಂಗಳೂರು: ಕೇಂದ್ರ ವಿಭಾಗದ ಮೂರು ವಸ್ತು ಸಂಗ್ರಹಾಲಯಕ್ಕೆ ಬಂದಿದ್ದ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಸಂಬಂಧ ಕಬ್ಬನ್‌ ಪಾರ್ಕ್‌, ವಿಧಾನಸೌಧ ಮತ್ತು ಹೈಗ್ರೌಂಡ್ಸ್‌ ಠಾಣೆ ಗಳಲ್ಲಿ ಪ್ರತ್ಯೇಕ ಮೂರು ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡಗಳ ರಚಿಸಲಾಗಿದೆ. ಹಾಗೆಯೇ ತಾಂತ್ರಿಕ ತನಿಖೆ ನಡೆಸಲಾಗುತ್ತಿದೆ.

ಈ ಕುರಿತು ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ವಿಭಾಗದ ಡಿಸಿಪಿ ಎಚ್‌ .ಟಿ.ಶೇಖರ್‌, ಶುಕ್ರವಾರ ಕಬ್ಬನ್‌ ಪಾರ್ಕ್‌ ಠಾಣಾ ವ್ಯಾಪ್ತಿಯ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಆ್ಯಂಡ್‌ ಟೆಕ್ನಾಲಜಿಕಲ್ ಮ್ಯೂಸಿಯಂ, ವಿಧಾನಸೌಧ ಠಾಣಾ ವ್ಯಾಪ್ತಿಯ ರಾಜ ಭವನ ರಸ್ತೆಯಲ್ಲಿರುವ ನೆಹರು ತಾರಾಲಯ, ಹೈಗ್ರೌಂಡ್ಸ್‌ ಠಾಣಾ ವ್ಯಾಪ್ತಿಯ ವಸಂತನಗರದಲ್ಲಿರುವ ನ್ಯಾಷನಲ್ ಗ್ಯಾಲರಿ ಫಾರ್‌ ಮಾಡರ್ನ್ ಆರ್ಟ್‌ಗೆ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶಗಳು ಬಂದಿವೆ. ‌

ಕೂಡಲೇ ಆಯಾ ಠಾಣಾ ವ್ಯಾಪ್ತಿಯ ಪೊಲೀಸರು, ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಹಾಯದಿಂದ ತಪಾಸಣೆ ನಡೆಸಿದಾಗ ಇದೊಂದು ಹುಸಿ ಬೆದರಿಕೆ ಸಂದೇಶಗಳು ಎಂಬುದು ಬೆಳಕಿಗೆ ಬಂದಿದೆ ಎಂದರು. ‌

ಐಪಿ ವಿಳಾಸ ಪತ್ತೆಗೆ ಕೋರಿಕೆ: ಬೆದರಿಕೆ ಸಂದೇಶ ಬಂದ ಇ-ಮೇಲ್‌ ವಿಳಾಸಗಳ ಐಪಿ ವಿಳಾಸ ಪತ್ತೆಗೆ ತಾಂತ್ರಿಕ ತನಿಖೆ ನಡೆಸಲಾಗುತ್ತಿದ್ದು, ಜತೆಗೆ ಸಂಬಂಧಿತ ಸಂಸ್ಥೆಗೆ ಐಪಿ ವಿಳಾಸ ನೀಡುವಂತೆ ಕೋರಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ವಿಪಿಎನ್‌ ಬಳಸಿ ಬೆದರಿಕೆ ಸಂದೇಶ ಕಳುಹಿಸಿರುವ ಸಾಧ್ಯತೆಯಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹೊರರಾಜ್ಯದಿಂದ ಕರೆ: ಮತ್ತೂಂದೆಡೆ ವಿಧಾನಸೌಧ ಪೊಲೀಸ್‌ ಠಾಣೆಗೆ ಕೆಲ ದಿನಗಳ ಹಿಂದೆ ಮುಂಬೈನ ಎನ್‌ಎಸ್‌ಇ ಕಚೇರಿಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಕಚೇರಿಯ ಸಿಬ್ಬಂದಿ ವಿಧಾನಸೌಧ ಪೊಲೀಸ್‌ ಠಾಣೆಗೆ ಕರೆ ಮಾಡಿ ಕನ್ನಿಂಗ್ಯಾಮ್‌ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ ಬಾಂಬ್‌ ಇಟ್ಟಿರುವ ಸಂದೇಶ ಬಂದಿದೆ. ಈ ಬಗ್ಗೆ ಕ್ರಮಕೈಗೊಳ್ಳಲು ಕೋರಿದ್ದರು. ಈ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ನೆರೆ ರಾಜ್ಯದಿಂದ ಕರೆ ಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.