ಧರ್ಮದಿಂದ ಅಜ್ಞಾನ ತೊಲಗಿಸಿ

Team Udayavani, Mar 7, 2020, 11:04 AM IST

ಧರ್ಮದಿಂದ ಅಜ್ಞಾನ ತೊಲಗಿಸಿ

ಬೆಂಗಳೂರು: ಧರ್ಮದಿಂದ ಮಾತ್ರ ಅಜ್ಞಾನ ತೊಲಗಿಸಲು ಸಾಧ್ಯವಿದ್ದು ಧರ್ಮ ವೈಜ್ಞಾನಿಕವಲ್ಲ ಎಂಬ ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಪಂಡಿತ ರತ್ನ ಎ.ಶಾಂತಿರಾಜಶಾಸ್ತ್ರಿ ಟ್ರಸ್ಟ್ ಶುಕ್ರವಾರ ಕುವೆಂಪು ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಪ್ರೊ.ಕೆ.ಈ.ರಾಧಾಕೃಷ್ಣ ಅವರು ರಚಿಸಿರುವ “ಮಹಾಪುರಾಣ’ ಗ್ರಂಥ ಲೋಕಾರ್ಪಣೆಯಲ್ಲಿ ಮಾತನಾಡಿದರು.  ಅಜ್ಞಾನದ ಮೇಲೆ ವಿಜ್ಞಾನ ದಾಳಿ ಮಾಡುವಷ್ಟು ಧರ್ಮವು ಮಾಡಿಲ್ಲ. ಹೀಗಾಗಿ ವಿಜ್ಞಾನದಿಂದ ಮಾತ್ರ ಅಜ್ಞಾನ ಕಳೆಯಲು ಸಾಧ್ಯ ಎಂಬ ಭ್ರಮೆಯಿಂದ ಜನ ಹೊರಬರ ಬೇಕೆಂದರು. ಮಹಾಪುರಾಣ ವಿಶ್ವಮಾನ್ಯ ಗ್ರಂಥ. ಇದನ್ನು ಜೈನ ಧರ್ಮಿಯರ ಸಂಪತ್ತು ಎಂದು ತಿಳಿದುಕೊಳ್ಳುವುದರ ಬದಲು ಕೊಡುಗೆ ಎಂದು ತಿಳಿದುಕೊಳ್ಳಬೇಕು. ಸಂಪತ್ತು ಕಪಾಟುಗಳಲ್ಲಿ ಇರುತ್ತೆ, ಜ್ಞಾನ ಪಸರುತ್ತದೆ. ಈ ಗ್ರಂಥವನ್ನು ಪ್ರೊ.ಕೆ.ಈ.ರಾಧಾಕೃಷ್ಣ ಅವರು ಕನ್ನಡದಿಂದ ಆಂಗ್ಲ ಭಾಷೆಗೆ ತರ್ಜುಮೆ ಮಾಡಿದ್ದು, ವಿಶ್ವದ ಯಾವುದೇ ವ್ಯಕ್ತಿ ಓದಲು ಅನುಕೂಲ. ಇದು ದೇಶದ ಎಲ್ಲಾ ಖ್ಯಾತ ವಿಶ್ವವಿದ್ಯಾಲಯ, ಗ್ರಂಥಾಲಯಗಳಲ್ಲಿ ಲಭ್ಯವಾಗಬೇಕೆಂದರು. ವಿದ್ವಾಂಸ ಡಾ.ಹಂಪ ನಾಗರಾಜಯ್ಯ ಮಾತನಾಡಿ, ಜೈನ ಧರ್ಮಕ್ಕೆ ರೂಪ ಕೊಡಲು ಅಗತ್ಯ ಗ್ರಂಥವನ್ನು ಸಂಸ್ಕೃತದಿಂದ ಕನ್ನಡಕ್ಕೆ ಪಂಡಿತ ರತ್ನ ಎ.ಶಾಂತಿರಾಜಶಾಸ್ತ್ರಿಗಳು ತಂದರು.

ಇದೀಗ ಅಂತಾರಾಷ್ಟ್ರಮಟ್ಟದಲ್ಲಿ ಗ್ರಂಥದ ಅಂಶ ಲಭ್ಯವಾಗಲು ಇಂಗ್ಲಿಷ್‌ಗೆ ಅನುವಾದಗೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಇದೇ ವೇಳೆ ಜಿನಸೇನ ಗುಣಭದ್ರಾಚಾರ್ಯರು ಹಾಗೂ ಪಂಡಿತ ರತ್ನ ಎ. ಶಾಂತಿ ರಾಜಶಾಸ್ತ್ರಿಗಳ ಭಾವಚಿತ್ರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅನಾವರಣಗೊಳಿಸಿದರು. ಶ್ರವಣಬೆಳಗೊಳದ ಜಗದ್ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮಿ, ಮುನಿಶ್ರೀ ಕಮಲಕುಮಾರಜಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಪದ್ಮಾಶೇಖರ್‌ ಮತ್ತು ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್‌, ಗ್ರಂಥ ಅನುವಾದಕ ಪ್ರೊ.ಕೆ.ಈ.ರಾಧಾಕೃಷ್ಣ, ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಜಿ.ಪಿ.ನಾಗೇಂದ್ರ ಪ್ರಸಾದ್‌ ಮತ್ತಿತರರಿದ್ದರು.

ಲೌಕಿಕ ಜೀವನಕ್ಕೆ ಜ್ಞಾನ ಸಂಪಾದನೆ ಮುಖ್ಯ :  ಲೌಕಿಕ ಜೀವನಕ್ಕೆ ಜ್ಞಾನ ಸಂಪಾದನೆ ಮುಖ್ಯ. ಅಂತಹ ಜ್ಞಾನ ಸಂಗ್ರಹಿಸಲು “ಮಹಾಪುರಾಣ’ ಸಹಕಾರಿ. ಶಾಸ್ತ್ರ, ಪುರಾಣ ಓದುವುದರಿಂದ ಕೇವಲ ಸ್ವರ್ಗ, ಮೋಕ್ಷ ಪ್ರಾಪ್ತಿ ಲಭಿಸುವುದರ ಜತೆಗೆ ಬದುಕಿದ್ದಾಗಲೂ ಸಾಂಸಾರಿಕ ಸ್ವರ್ಗ ಸುಖ ಕಾಣಲು ನೆರವಾಗುತ್ತದೆ. ಜತೆಗೆ ರಾಜಕೀಯ ಆಡಳಿತಕ್ಕೆ, ಆರ್ಥಿಕ ತಜ್ಞರಿಗೆ ಹಾಗೂ ವಿಜ್ಞಾನಿಗಳಿಗೆ ಬೇಕಾದ ಅಗತ್ಯ ಅಂಶ ಈ ಗ್ರಂಥ ಒದಗಿಸಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.