ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ಇಲ್ಲ ಬೇರೆ ಜಾಗ ನೋಡಿಕೊಳ್ಳಿ: ಡಿಕೆ ಶಿವಕುಮಾರ್ ಎಚ್ಚರಿಕೆ

Team Udayavani, Sep 25, 2023, 4:16 PM IST

ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ಇಲ್ಲ ಬೇರೆ ಜಾಗ ನೋಡಿಕೊಳ್ಳಿ: ಡಿಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಮಾತನಾಡಿದರು.

ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದರ ನಿವಾರಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೀರಿಗಾಗಿ ನಾವು ಬಡಿದಾಡುತ್ತಾ ಇದ್ದೇವೆ. ಆದರೆ ನಿಮ್ಮ ಬಳಿ ಮಾಹಿತಿಯೇ ಇಲ್ಲ. ಎಷ್ಟು ಶುದ್ಧ ನೀರು ಪೂರೈಕೆ ಘಟಕಗಳು (RO) ಗಳು ಇವೆ. ನಿತ್ಯ ಎಷ್ಟು ನೀರು ಪೂರೈಕೆ ಆಗುತ್ತಿದೆ. ಎಷ್ಟು ಜನ ಬಳಸುತ್ತಿದ್ದಾರೆ ಎಂಬ ವಿವರವೇ ನಿಮ್ಮ ಬಳಿ ಇಲ್ಲ. ಸಭೆಗೆ ಬರುವ ಮುನ್ನ ಸಿದ್ಧತೆಯನ್ನೇ ಮಾಡಿಕೊಂಡು ಬಂದಿಲ್ಲ. ಸಭೆಯ ಗಂಭೀರತೆಯೇ ನಿಮಗೆ ಅರ್ಥವಾಗಿಲ್ಲ ಎಂದು ಕಿಡಿಕಾರಿದರು.

“ಪ್ರತಿ ಕಚೇರಿಯಲ್ಲಿ ಏನು ಕೆಲಸ ನಡೆಯುತ್ತದೆ ಎನ್ನುವ ವರದಿ ಪಡೆದುಕೊಳ್ಳುವ ವ್ಯವಸ್ಥೆ ನನ್ನ ಬಳಿ ಇದೆ. ನಾನು ಅದನ್ನು ಬಿಚ್ಚಿ ನಿಮ್ಮ ಮರ್ಯಾದೆ ತೆಗೆದರೆ, ಮಾಧ್ಯಮದವರು ನಿಮ್ಮ ಜನ್ಮ ಜಾಲಾಡಿ ಬಿಡುತ್ತಾರೆ. ಆದರೆ ಆ ಕೆಲಸವನ್ನು ನಾನು ಮಾಡುವುದಿಲ್ಲ” ಎಂದು ಎಚ್ಚರಿಸಿದರು.

ಇದನ್ನೂ ಓದಿ:Khalistani:ಭಾರತವನ್ನು ವಿಭಜಿಸಿ ಹಲವು ದೇಶಗಳನ್ನು ಸೃಷ್ಟಿಸಬೇಕು: ಖಲಿಸ್ತಾನಿ ಉಗ್ರ ಪನ್ನು !

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳ ಸಾವು-ನೋವು, ಡೆಂಗ್ಯೂ ಜ್ವರ, ಮಳೆ ಕೊರತೆ, ಬರ, ಕುಡಿಯುವ ನೀರು ಮತ್ತಿತರ ವಿಚಾರಗಳ ಬಗ್ಗೆ ಒಬ್ಬರೂ ವರದಿ ಕೊಟ್ಟಿಲ್ಲ. ಅಧಿಕಾರಿಗಳೇ ನಿಮಗೆ ಹೇಳುವವರು, ಕೇಳುವವರು ಯಾರೂ ಇಲ್ಲವೆಂದು ತಿಳಿದು ಕೊಂಡಿದ್ದೀರಾ? ನಿಮಗೆ ಕೆಲಸ ಮಾಡುವ ಆಸಕ್ತಿ ಇಲ್ಲವಾದರೆ ಜಾಗ ಖಾಲಿ ಮಾಡಿ. ನಿಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ದೀರಿ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಮುಖ ಆಗುಹೋಗುಗಳ ಬಗ್ಗೆ ವರದಿ ಕೊಡಬೇಕೆಂಬ ಕನಿಷ್ಟ ಸೌಜನ್ಯ ನಿಮಗೆ ಇಲ್ಲವೇ ಎಂದು ಡಿಸಿಎಂ ಗರಂ ಆದರು.

ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರ ಕೆಲಸಗಳನ್ನು ಸಮಾನವಾಗಿ ಮಾಡಿ. ಜನರು ಸರ್ಕಾರಿ ಕಚೇರಿಗಳಿಗೆ ತಮ್ಮ ಕಷ್ಟಗಳನ್ನು ಬಗೆಹರಿಸಿಕೊಳ್ಳಲು ಬರುತ್ತಾರೆ. ಅವರ ಕೆಲಸಗಳನ್ನು ವಿಳಂಬವಿಲ್ಲದೆ ಸೂಕ್ತ ಕಾಲದಲ್ಲಿ ಮಾಡಿಕೊಡಬೇಕು. ಕಂದಾಯ ವಿಭಾಗದಲ್ಲಿನ ಮನೆ, ಜಮೀನು ಖಾತೆ ಮಾಡಿಕೊಡಲು ಕಿರುಕುಳ ಸೇರಿದಂತೆ ಕಂದಾಯ ನಿವೇಶನಗಳ ಹೆಚ್ಚಳಕ್ಕೆ ಅಧಿಕಾರಗಳ ಕುಮ್ಮಕ್ಕು ಕಾರಣ. ಹೊಸ ಸರ್ಕಾರ ಹೊಸ ಆಶಯಗಳೊಟ್ಟಿಗೆ ಕೆಲಸ ಮಾಡುತ್ತಿದೆ. ನೀವುಗಳು ಅದರಂತೆ ಕೆಲಸ ಮಾಡಬೇಕು. ಬಿಡಿಎ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸಲು ಕಷ್ಟಪಡುತ್ತಿದ್ದರೆ, ಜಿಲ್ಲಾ ಪಂಚಾಯಿತಿ ಹಾಗೂ ಇತರೇ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಅವ್ಯವಸ್ಥಿತ ನಗರವನ್ನಾಗಿ ಬೆಳೆಯಲು ಕಾರಣಕರ್ತರಾಗುತ್ತಿದ್ದೀರಿ. ಹೊಸದಾಗಿ 110 ಹಳ್ಳಿಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ. ಅವುಗಳು ಇನ್ನೂ ಅಭಿವೃದ್ಧಿಯಾಗದೆ ಅತಂತ್ರ ಸ್ಥಿತಿಯಲ್ಲಿವೆ. ಬೆಂಗಳೂರು ನಗರದಲ್ಲಿ ಸ್ಥಳೀಯರು ಶೇ 30 ರಷ್ಟಿದ್ದರೆ ವಲಸಿಗರು ಶೇ 70 ರಷ್ಟಿದ್ದಾರೆ. ಇವರ ಮೇಲೆ ಪ್ರತಿ ಸಂದರ್ಭದಲ್ಲಿ ಶೋಷಣೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಜನರ ಮೇಲೆ ಎಲ್ಲಾ ರೀತಿಯ ಕಿರುಕುಳ ನಿಲ್ಲಬೇಕು ಎಂದರು.

ಕಸ ವಿಲೇವಾರಿ ಸಮಸ್ಯೆ, ರಸ್ತೆಬದಿಯಲ್ಲೇ ಕಸ ಸುರಿಯುತ್ತಿರುವುದು, ಎಲ್ಲೆಂದರಲ್ಲಿ ವೈದ್ಯಕೀಯ ತ್ಯಾಜ್ಯ ಸುರಿಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜತೆಗೆ ಈ ಬಗ್ಗೆ ಜಿಲ್ಲಾಧಿಕಾರಿಗಳು, ಸಿಇಒ, ಪೊಲೀಸ್ ಅಧಿಕಾರಿಗಳು, ಆರ್ ಟಿಒ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ತಾಲ್ಲೂಕು ಪಂಚಾಯಿತಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಂದಾಯ ಸೇರಿದಂತೆ ಕ್ಷೇತ್ರ ಅಭಿವೃದ್ಧಿ ವಿಚಾರವಾಗಿ ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ ಎನ್ನುವುದನ್ನು ವಿವರಿಸಬೇಕಾಗಿ ತಾಕೀತು ಮಾಡಿದರು.

ಗೈರು ಅಧಿಕಾರಿಗಳ ಅಮಾನತಿಗೆ ಸೂಚನೆ: ಬೆಂಗಳೂರು ನಗರ ಜಿಲ್ಲೆ ಪಂಚಾಯಿತಿಯ ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳ ಅಮಾನತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಆದೇಶ ನೀಡಿದರು.

ಸಭೆಯ ಆರಂಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ (EE) ಎಲ್ಲಿ ಎಂದು ಕೇಳಿದರು. ಅವರು ಹೊಸಕೋಟೆ ಜನತಾ ದರ್ಶನ ಸಭೆಗೆ ಹೋಗಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದರು. ಹಾಗಾದರೆ ಈ ಮೀಟಿಂಗ್ ಯಾಕಾಗಿ ಮಾಡುತ್ತಿದ್ದೇವೆ ಎಂದು ಡಿಸಿಎಂ ಕೇಳಿದರು. ತಕ್ಷಣವೇ ಆ ಅಧಿಕಾರಿಯನ್ನು ಅಮಾನತು ಮಾಡುವಂತೆ ಸಿಇಒ ಕಾಂತರಾಜ್ ಅವರಿಗೆ ಸೂಚನೆ ನೀಡಿದರು.

ಕೋರ್ಟ್ ವಿಚಾರ ಬಿಟ್ಟು ಬೇರೆ ಕಾರಣಗಳನ್ನು ನೀಡಿ ಈ ಸಭೆಗೆ ಗೈರಾಗಿರುವ ಅಧಿಕಾರಿಗಳ ಹೆಸರನ್ನು ಪಟ್ಟಿ ಮಾಡಿ, ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಇಒ ಅವರಿಗೆ ಆದೇಶ ನೀಡಿದರು.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.