ನಕಲಿ ಕೀ ಬಳಸಿ ಬೈಕ್ ಕದಿಯುತ್ತಿದ್ದವನ ಬಂಧನ
Team Udayavani, Sep 4, 2018, 12:19 PM IST
ಬೆಂಗಳೂರು: ನಕಲಿ ಕೀಲಿ ಬಳಸಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಉಮಾಶಂಕರ್ (41) ಎಂಬಾತನನ್ನು ಆರ್.ಟಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಆರ್.ಟಿ ನಗರ ವ್ಯಾಪ್ತಿಯಲ್ಲಿ ಕಡಿಮೆ ಬೆಲೆಗೆ ಸ್ಕೂಟರ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮಾಹಿತಿ ಆಧರಿಸಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಫುಲ್ ಟೈಂ ಬೈಕ್‌ಗಳ ಕಳ್ಳನಾಗಿದ್ದು, ಹಲವು ವಾಹನ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಆತನಿಂದ 10.91 ಲಕ್ಷ ರೂ. ಮೌಲ್ಯದ 32 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.
ಗಂಗಾನಗರ ನಿವಾಸಿಯಾಗಿರುವ ಉಮಾಶಂಕರ್ ಬಿಕಾಂ ಪದವೀಧರನಾಗಿದ್ದ ಇಂಗ್ಲೀಷ್ ಸೇರಿದಂತೆ ಹಲವು ಭಾಷೆಗಳನ್ನು ಸರಾಗವಾಗಿ ಮಾತನಾಡುತ್ತಾನೆ. “ಅಮಲು’ ಭರಿಸುವ ಕೆಮ್ಮು ನಿವಾರಕವಾಗಿರುವ ಕೋರೆಕ್ಸ್ ಔಷಧ ಸೇವಿಸಿ ನಶೆ ಏರಿಸಿಕೊಂಡು ಓಡಾಡಿಕೊಂಡು . ರಸ್ತೆ ಬದಿ, ನಿರ್ಜನ ರಸ್ತೆಗಳು, ಪಾರ್ಕಿಂಗ್ ಸೇರಿದಂತೆ ವಿವಿಧೆಡೆ ನಿಲ್ಲಿಸಿರುವ ದ್ವಿಚಕ್ರ ವಾಹನಗಳನ್ನು ನಕಲಿ ಕೀಲಿ ಬಳಸಿ ಕಳವು ಮಾಡುತ್ತಿದ್ದ. ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಮೋಜಿನ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ
ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1
ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani
ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?
ಹೊಸ ಸೇರ್ಪಡೆ
ಅಡುಗೆ ಅನಿಲ ದರ ಒಂದೇ ತಿಂಗಳಲ್ಲಿ ಮೂರನೆ ಬಾರಿ ಏರಿಕೆ..!
ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಪತ್ನಿಯ ಮನೆಗೆಲಸಕ್ಕೆ ಪರಿಹಾರ ನೀಡಿ: ಕೋರ್ಟ್ ತೀರ್ಪು
ತನ್ನ ಹೊಸ ಆವೃತ್ತಿಯ ಸ್ವಿಫ್ಟ್ ಅನಾವರಣಗೊಳಿಸಿದ ಮಾರುತಿ ಸುಜುಕಿ :ಶೇರು ಟ್ರೇಡ್ ನಲ್ಲಿ ಏರಿಕೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಅಪಘಾತ: ಮೂವರಿಗೆ ಗಂಭೀರ ಗಾಯ