Udayavni Special

2022ರ ವೇಳೆಗೆ ಎಲ್ಲರಿಗೂ ಸೂರು


Team Udayavani, Aug 30, 2017, 11:29 AM IST

2022-sooru.jpg

ಕೆ.ಆರ್‌.ಪುರ: 2022ರ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸೂರು ಕಲ್ಪಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹೇಳಿದರು.

ನಗರದ ಐಟಿಐ ಕ್ರೀಡಾಂಗಣದಲ್ಲಿ ಕ್ವಿಟ್‌ ಇಂಡಿಯಾ ಚಳವಳಿಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಮಾತನಾಡಿ, 2022ರ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕನೂ ತನ್ನ ಸ್ವಂತ ಸೂರು ಹೊಂದುವ ಮಹತ್ವದ ನಿರ್ಧಾರವನ್ನು ಪ್ರಧಾನಿ ಮೋದಿ ಹೊಂದಿದ್ದಾರೆ ಎಂದರು.

ಕಾರ್ಮಿಕ ಭವಿಷ್ಯ ನಿಧಿಯೂ ಅವರ ಧ್ಯೇಯವನ್ನು ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಮಿಕನೂ ತನ್ನ ನಿವೃತ್ತಿ ವೇಳೆಗೆ ಸ್ವಂತ ಸೂರು ಹೊಂದಲು ಹಲವು ಸೌಲಭ್ಯಗಳನ್ನು ಉನ್ನತೀಕರಿಸಲಾಗಿದೆ. ಕಾರ್ಮಿಕ ಭವಿಷ್ಯ ನಿಧಿಯೂ ಸಹ ಇದಕ್ಕೆ ಪೂರಕವಾಗಿದೆ, ಕಚೇರಿಗಳನ್ನು ಕಾಗದ ರಹಿತವಾಗಿಸಿ ಆಡಳಿತದಲ್ಲಿ ಪೂರ್ಣ ಪಾರದರ್ಶಕತೆಯನ್ನು ಅಳವಡಿಸಿಕೊಳ್ಳುವ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಗಾಂಧೀಜಿ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಡಿದ್ದರು, ನಾವಿಂದು ಸಂಕಲ್ಪ$ ಸಿದ್ಧಿಯಡಿ ಭ್ರಷ್ಟಾಚಾರ, ಭಯೋತ್ಪಾದನೆ, ಜಾತಿವಾದ, ಕೋಮುವಾದ ತೊಲಗಿಸಿ ಎಂಬ ಘೋಷಣೆಯೊಡನೆ ಮುನ್ನುಗ್ಗಬೇಕಿದೆ ಎಂದು ಹೇಳಿದರು. ದೇಶಾದ್ಯಂತ 5 ಕೋಟಿ ಸದಸ್ಯರನ್ನು ಹೊಂದುವ ಮೂಲಕ ಭವಿಷ್ಯ ನಿಧಿ ವಿಶ್ವದ ಅತೀ ದೊಡ್ಡ ಸಾಮಾಜಿಕ ಭದ್ರತೆಯ ಸಂಘಟನೆ ಎಂಬ ಹೆಗ್ಗಳಿಕೆ ಗಳಿಸಿದೆ, ನಮ್ಮ ಆವೃತ್ತ ನಿಧಿ 1050 ಲಕ್ಷ ಕೋಟಿ ರೂ. ಗಳಾಗಿವೆ ಎಂದರು.

ಕೇಂದ್ರ ಸರ್ಕಾರ ಕಾರ್ಮಿಕರ ಪರವಾಗಿದ್ದು ಭವಿಷ್ಯ ನಿಧಿಯ ಬೋನಸ್‌ನ್ನು ಹೆಚ್ಚಿಸಿದ್ದೇವೆ, ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಿದೆ, ಸಾಮಾಜಿಕ ಭದ್ರತೆಯ ಅತಿ ಪ್ರಮುಖ ವ್ಯವಸ್ಥೆಯಿಂದ ಭವಿಷ್ಯ ನಿಧಿಯಾಗಿದೆ ಎಂದು ಹೇಳಿದರು.

ನಮ್ಮ ಇಲಾಖೆಯ ಪ್ರಮುಖ ಅಜೆಂಡಾ ಉದ್ಯೋಗ ಸೃಷ್ಟೀಕರಣ, ಕೈಗಾರಿಕಾ ಸಂಸ್ಥೆಗಳು ಮತ್ತು ಕಾರ್ಮಿಕರ ನಡುವೆ ಉತ್ತಮ ಸಂಬಂಧವನ್ನಿರಿಸುವುದು, ಕಾರ್ಮಿಕರ ಹಿತದೃಷ್ಟಿಯಿಂದ ಸುಧಾರಣೆಗಳನ್ನು ನಿರಂತರವಾಗಿ ಮಾಡಲಾಗುತ್ತಿದೆ. ಕಾರ್ಮಿಕರ ಸಂಬಳ ಮತ್ತು ಕೈಗಾರಿಕಗೆಳೊಂದಿಗೆ ಇರಬೇಕಾದ ನಂಟನ್ನು ಮುಂದಿನ ಲೋಕ ಮತ್ತು ರಾಜ್ಯಸಭೆಯ ಚರ್ಚೆಗಳಲ್ಲಿ ನಡೆಯಲಿದ್ದು ಹಲವು ಸುಧಾರಣೆಗಳು ನಡೆಯಲಿವೆ ಎಂದರು.

ದೇಶದಲ್ಲಿರುವ 42 ಕೋಟಿ ಅಸಂಘಟಿತ ಕಾರ್ಮಿಕರನ್ನು ದೃಷ್ಟಿಯಲ್ಲಿರಿಸಿರುವ ಕೇಂದ್ರ ಬಹುಸಂಖ್ಯೆಯಲ್ಲಿರುವ ಅವರ ಕ್ಷೇಮಾಭಿವೃದ್ಧಿಗೆ ಹಲವು ಯೋಜನೆಗಳ ಫ‌ಲ ನೀಡಲಿದ್ದು ಯುವಿಲ್‌ ಎಂಬ ಗುರಿತಿನ ಚೀಟಿ ನೀಡುವ ಸಾಮಾಜಿಕ ಭದ್ರತೆಗೆ ಅಗತ್ಯವಿರುವ ಆರೋಗ್ಯ, ವಿಮೆ ಸೇರಿ ಹಲವು ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಪಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಜಾತಿ, ಧರ್ಮ, ಅಧಿಕಾರಗಳ ನಡುವೆ ವಿಭಜನೆಯಾಗಿರುವ ಪ್ರಜೆಗಳು ನಾವು ಭಾರತೀತಯರೆಂದು ಹೇಳಿಕೊಳ್ಳುವ ಏಕತೆ ಮೂಡಬೇಕಿದೆ ಎಂದರು. ಕೇಂದ್ರ ಭವಿಷ್ಯನಿಧಿ ಆಯುಕ್ತ ಡಾ.ವಿ.ಪಿ ಜಾಯ್‌  ಮಾತನಾಡಿ, ದೇಶದಲ್ಲಿ ಇದುವರೆಗೂ 1 ಕೋಟಿ ಸದಸ್ಯರನ್ನು ಭವಿಷ್ಯ ನಿಧಿಗೆ ನೋಂದಣಿ ಮಾಡಿದ್ದು, ಕರ್ನಾಟಕದಲ್ಲಿ 13 ಲಕ್ಷ ಸದಸ್ಯರನ್ನು ನೋಂದಾಯಿಸಲಾಗಿದೆ.

ರಾಜ್ಯದಲ್ಲಿ 17 ಪ್ರಾದೇಶಿಕ ಕಚೇರಿಗಳನ್ನು ಹೊಂದಿದೆ, ಬಳ್ಳಾರಿ ಹಾಗೂ ರಾಯಚೂರಿನಲ್ಲಿ ಆಡಳಿತ ಕಚೇರಿಗಳನ್ನು ಶೀಘ್ರದಲ್ಲೇ ಪ್ರಾರಂಭ ಮಾಡಲಿದ್ದೇವೆ. ಕೆಆರ್‌ಪುರದಲ್ಲಿ ಪ್ರಾದೇಶಿಕ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ್ದು, ಚಿಕ್ಕಮಗಳೂರಿನ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಐಟಿಐ ಕ್ರೀಡಾಂಗಣದಿಂದ ಅಂಚೆ ಕಚೇರಿಯವರಗೆ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ವಿದ್ಯಾಮಂದಿರ, ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಥಮ ದರ್ಜೆ ಕಾಲೇಜು. ಎಸ್‌ಇಎ ಶಾಲೆ ಸೇರಿದಂತೆ ಕೆಆರ್‌ಪುರ ಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು.

ಶಾಸಕ ಬಿ.ಎ ಬಸವರಾಜ್‌, ಸಂಸದ ಪಿ.ಸಿ ಮೋಹನ್‌, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಕಾರ್ಯದರ್ಶಿ ಸತ್ಯವತಿ, ಕೇಂದ್ರ ಭವಿಷ್ಯ ನಿಧಿ ಅಪರ ಆಯುಕ್ತ  ವಿಜಯ್ ಕುಮಾರ್‌, ಪಾಲಿಕೆ ಸದಸ್ಯ ಪೂರ್ಣಿಮಾ ಶ್ರೀನಿವಾಸ್‌, ಬಂಡೆ ರಾಜು ಇತರರು ಇದ್ದರು.

ಟಾಪ್ ನ್ಯೂಸ್

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Death of Geeta no more

ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

Magistrate Court

ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗಳಿಗೆ ಹೈ ಮಾರ್ಗಸೂಚಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಉ.ಪ್ರ. ಕಾಂಗ್ರೆಸ್‌ ಟಿಕೆಟ್‌ನಲ್ಲಿ ಶೇ.40 ಮಹಿಳೆಯರಿಗೆ ಮೀಸಲು

ಉ.ಪ್ರ. ಕಾಂಗ್ರೆಸ್‌ ಟಿಕೆಟ್‌ನಲ್ಲಿ ಶೇ.40 ಮಹಿಳೆಯರಿಗೆ ಮೀಸಲು

ಬಾಂಗ್ಲಾ: ಹಿಂದೂಗಳ ಮೇಲೆ ದಾಳಿ; ಇತಿಹಾಸದ ಕಹಿನೆನಪು

ಬಾಂಗ್ಲಾ: ಹಿಂದೂಗಳ ಮೇಲೆ ದಾಳಿ; ಇತಿಹಾಸದ ಕಹಿನೆನಪು

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ರೈಲ್ವೆ ಇಲಾಖೆಯ ಐಆರ್‌ಎಸ್‌ಡಿಸಿ ಸ್ಥಗಿತ

ರೈಲ್ವೆ ಇಲಾಖೆಯ ಐಆರ್‌ಎಸ್‌ಡಿಸಿ ಸ್ಥಗಿತ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.