ಅಂಚೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

Team Udayavani, May 13, 2019, 3:00 AM IST

ಬೆಂಗಳೂರು: ಸರ್ಕಾರಿ ಖಜಾನೆಗೆ ಜಮೆ ಮಾಡಬೇಕಾದ 9 ಲಕ್ಷಕ್ಕೂ ಹೆಚ್ಚು ಹಣವನ್ನು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ 9 ಖಾಸಗಿ ಖಾತೆಗಳಿಗೆ ಜಮೆ ಮಾಡಿದ ಆರೋಪದ ಮೇಲೆ ಪ್ರಧಾನ ಅಂಚೆ ಕಚೇರಿಯ ಪೋಸ್ಟಲ್‌ ಅಸಿಸ್ಟೆಂಟ್‌ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಪ್ರಧಾನ ಅಂಚೆ ಕಚೇರಿಯ ಅಸಿಸ್ಟೆಂಟ್‌ ಸೂಪರಿಡೆಂಟ್‌ ಬಿ.ಜಿ.ತಿಮ್ಮೊàಜಿರಾವ್‌ ಅವರು ನೀಡಿದ ದೂರಿನ ಆಧಾರದ ಮೇಲೆ ಅದೇ ಕಚೇರಿಯ ಖಜಾನೆ-2ರಲ್ಲಿ ಪೋಸ್ಟಲ್‌ ಅಸಿಸ್ಟೆಂಟ್‌ ಆಗಿ ಕರ್ತವ್ಯನಿರ್ವಹಿಸುತ್ತಿರುವ ಎ.ವಿ.ಶ್ರೀನಿವಾಸರೆಡ್ಡಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶ್ರೀನಿವಾಸರೆಡ್ಡಿಗೆ ರಾಜ್ಯ ಸರ್ಕಾರದ ಹಣವನ್ನು ಇಎಂಒ (ಎಲೆಕ್ಟ್ರಾನಿಕ್‌ ಮನಿ ಆರ್ಡರ್‌) ಮೂಲಕ ವಿವಿಧ ಯೋಜನೆಗಳ ಫ‌ಲಾನುಭವಿಗಳಿಗೆ ಕಳುಹಿಸುವುದು ಮತ್ತು ಫ‌ಲಾನುಭವಿಗಳಿಗೆ ಪಾವತಿಯಾಗದೆ ವಾಪಸ್‌ ಬಂದ ಹಣವನ್ನು ಪುನಃ ರಾಜ್ಯ ಸರ್ಕಾರದ ಖಜಾನೆಗೆ ಜಮಾ ಮಾಡುವ ಹೊಣೆ ನೀಡಲಾಗಿದೆ.

ಆದರೆ, ಆರೋಪಿ ರೆಡ್ಡಿ ಮೇ 6ರಂದು 9,16,750 ರೂ. ಮೊತ್ತದ ಚೆಕ್‌ ಅನ್ನು ಸರ್ಕಾರದ ಖಾತೆಗೆ ಜಮೆ ಮಾಡುವ ಬದಲು, ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು 9 ಖಾಸಗಿ ಖಾತೆಗಳಿಗೆ ಹಾಕಿಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೆ, ಅದೇ ರೀತಿಯ ಇತರೆ ವ್ಯವಹಾರಗಳಲ್ಲಿ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಶ್ರೀನಿವಾಸರೆಡ್ಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಬಿ.ಜಿ.ತಿಮ್ಮೊàಜಿರಾವ್‌ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ