ಜಾತಿ ಗಣತಿ ವರದಿ ಅಂತಿಮವಾಗಿಲ್ಲ
Team Udayavani, Dec 7, 2017, 6:45 AM IST
ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು
ಶೀಘ್ರವೇ ಬಿಡುಗಡೆ ಮಾಡುವುದಾಗಿ ಹೇಳುತ್ತಲೇ ಬಂದಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಈಗ ವರಸೆ ಬದಲಿಸಿದ್ದು, “ವರದಿ ಇನ್ನೂ ಸಿದ್ಧತಾ ಹಂತದಲ್ಲಿದೆ’ ಎಂದು ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಗೆ ಸಂಬಂಧಿಸಿದಂತೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ. ವರದಿ ಸಿದ್ಧಪಡಿಸುವ ಕೊನೇ ಹಂತದ ಕೆಲಸ ನಡೆಯುತ್ತಿದೆ. ವರದಿ ಯಾವಾಗ ಬಿಡುಗಡೆ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಎಂದರು.
ಒಳ ಮೀಸಲಾತಿ ಕುರಿತ ಸುದ್ದಿಗಾರರ ಪ್ರಶ್ನೆಗೆ, ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ದಲಿತ ಮುಖಂಡರ ಸಭೆ ಕರೆದು ಚರ್ಚೆ ನಡೆಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗಾಲದಲ್ಲಿ ಕಾಡಿಗೆ ಲಾರಿಗಳ ಪ್ರವೇಶಕ್ಕೆ ನಿರ್ಬಂಧ ; ಸಭೆಯಲ್ಲಿ ಹಾಲಪ್ಪ ಸೂಚನೆ
ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ
ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆ
ಸಾಗರ: ಶಾಲೆಗೆ ಹೋಗುತ್ತೇನೆಂದು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ
ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ