CCB Police: ಸಿಸಿಬಿ ಪೊಲೀಸರ ದಾಳಿ ವೇಳೆ ನಶೆಯಲ್ಲಿ ತೇಲುತ್ತಿದ್ದ ಅಪ್ರಾಪ್ತರು

Team Udayavani, Sep 10, 2023, 1:43 PM IST

tdy-10

ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಲಿಕಾನ್‌ ಸಿಟಿಯ ಬಹುತೇಕ ಪಬ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಹುಕ್ಕಾಬಾರ್‌ ಗಳ ಮೇಲೆ ಸಿಸಿಬಿ ಪೊಲೀಸರು ಶುಕ್ರವಾರ ರಾತ್ರಿ ಧಿಡೀರ್‌ ದಾಳಿ ನಡೆಸಿದ್ದು, ಅಪ್ರಾಪ್ತ ಯುವಕ, ಯುವತಿಯರು ನಶೆಯಲ್ಲಿ ತೇಲಾಡುತ್ತಿರುವುದನ್ನು ಕಂಡು ದಂಗಾಗಿದ್ದಾರೆ.

ರಾಜ್ಯ ರಾಜಧಾನಿಯ ಬಹುತೇಕ ಪಬ್‌, ಹುಕ್ಕಾಬಾರ್‌ಗಳಲ್ಲಿ ಕಾಲೇಜು ವಿದ್ಯಾರ್ಥಿಗಳ ಗುಂಪು ಹೋಗಿ ತಡರಾತ್ರಿವರೆಗೆ ಮದ್ಯ, ಡ್ರಗ್ಸ್‌, ಧೂಮಪಾನ ಮಾಡುತ್ತಿರುವ ಬಗ್ಗೆ ಕೆಲ ಕಾಲೇಜಿನ ಮುಖ್ಯಸ್ಥರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ಗೆ ಇತ್ತೀಚೆಗೆ ದೂರು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು, ಶುಕ್ರವಾರ ಸಂಜೆ 7 ಗಂಟೆ ಬಳಿಕ ನಗರದಲ್ಲಿರುವ 500ಕ್ಕೂ ಹೆಚ್ಚು ಪಬ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಹುಕ್ಕಾಬಾರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆ ವೇಳೆ ಹಲವು ಪಬ್‌ಗಳಲ್ಲಿ ಅಪ್ರಾಪ್ತರು ಮದ್ಯದ ಅಮಲಿನಲ್ಲಿ ತೇಲಾಡುತ್ತಿರುವುದು ಕಂಡು ಬಂದಿದೆ.

ಪೊಲೀಸರು ಅಪ್ರಾಪ್ತರನ್ನು ಅಲ್ಲಿಂದ ಕಳುಹಿಸಿ ನಿಯಮ ಉಲ್ಲಂಘಿಸಿ ಪಬ್‌, ಹುಕ್ಕಾಬಾರ್‌ಗಳಲ್ಲಿ ಮದ್ಯಪಾನಕ್ಕೆ ಅವಕಾಶ ಕಲ್ಪಿಸಿದವರನ್ನು ವಿಚಾರಣೆ ನಡೆಸಿದ್ದಾರೆ.

ಸಚಿವರು, ಶಾಸಕರ ಹೆಸರೇಳಿ ಗಲಾಟೆ: ಕೆಲವು ಪಬ್‌ಗಳಲ್ಲಿ ಅಪ್ರಾಪ್ತ ಯುವತಿಯರು ನಾವು ಎಂಎಲ್‌ಎ, ಹಾಲಿ ಹಾಗೂ ಮಾಜಿ ಸಚಿವರ ಕಡೆಯವರು ಎಂದರೆ, ಮತ್ತೂಬ್ಬ ಯುವತಿ ಕಿರುತೆರೆ ಕಲಾವಿದೆ ಎಂದು ಹೇಳಿ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಅಪ್ರಾಪ್ತರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೇ ಪಬ್‌ ಮಾಲಿಕರ ಮೇಲೆ ಕೇಸ್‌ ಹಾಕಿ ಖಾಕಿ ಬಿಸಿ ಮುಟ್ಟಿಸಿದೆ. ಪಬ್‌ನಲ್ಲಿ ಮದ್ಯ ಸೇವಿಸಲು ಅಪ್ರಾಪ್ತರಿಗೆ ಅವಕಾಶವಿಲ್ಲ. ಹೀಗಾಗಿ ಡಿಜಿಟಲ್‌ ನಕಲಿ ಆಧಾರ್‌ ಬಳಸಿಕೊಂಡು ಪಬ್‌ಗ ಹೋಗಿರುವುದು ದಾಳಿ ಸಂದರ್ಭದಲ್ಲಿ ಗೊತ್ತಾಗಿದೆ ಎಂದು ತಿಳಿದು ಬಂದಿದೆ.

ದೂರುಗಳು ಆಧರಿಸಿ ದಾಳಿ: ಆಯುಕ್ತ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ ಮಾತನಾಡಿ, ನಗರದಲ್ಲಿರುವ ಪಬ್‌, ರೆಸ್ಟೋರೆಂಟ್‌, ಕೆಫೆಗಳಲ್ಲಿ ಅನಧಿಕೃತವಾಗಿ ಧೂಮಪಾನಕ್ಕೆ ಅವಕಾಶ ಮಾಡಿಕೊಟ್ಟಿರುವ ಬಗ್ಗೆ ಹಾಗೂ ಅಪ್ರಾಪ್ತರಿಗೂ ಇಲ್ಲಿ ಮದ್ಯಪಾನ ಪೂರೈಕೆ ಮಾಡಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಮಾಹಿತಿ ಆಧರಿಸಿ ನಗರದಲ್ಲಿರುವ ಬಹುತೇಕ ಪಬ್‌, ರೆಸ್ಟೋರೆಂಟ್‌, ಕೆಫೆಗಳ ಮೇಲೆ ಶುಕ್ರವಾರ ರಾತ್ರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.

ಕೋಟ್ಪಾ ಕಾಯ್ದೆಯಡಿಯಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಕೊಠಡಿ ಕಲ್ಪಿಸಿ, ವೆಂಟಿಲೇಟರ್‌ ಅಳವಡಿಸಬೇಕಾಗುತ್ತದೆ. ಅಪ್ರಾಪ್ತರಿಗೆ ಅಲ್ಲಿ ಅವಕಾಶ ಕಲ್ಪಿಸಬಾರದು. ಅಲ್ಲಿಗೆ ಮದ್ಯಪಾನ ಅಥವಾ ಊಟ ತಿಂಡಿ ಸರಬರಾಜು ಮಾಡಬಾರದು ಎಂಬ ಕೆಲವೊಂದು ನಿಯಮಗಳಿವೆ. ಬಹಳಷ್ಟು ಕಡೆಗಳಲ್ಲಿ ಈ ನಿಯಮ ಉಲ್ಲಂ ಸಿರುವುದು ಪತ್ತೆಯಾಗಿದ್ದು, ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ. ಅಪ್ರಾಪ್ತ ಮಕ್ಕಳಿಗೆ ಧೂಮಪಾನ, ಮದ್ಯಪಾನಕ್ಕೆ ಅವಕಾಶ ಮಾಡಿಕೊಟ್ಟಿರುವ ಕಡೆಗಳಲ್ಲಿ ಪಬ್‌, ರೆಸ್ಟೋರೆಂಟ್‌, ಕೆಫೆ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಅಬಕಾರಿ ಕಾಯಿದೆ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಆಯಾ ಪೊಲೀಸ್‌ ಠಾಣೆಗಳಲ್ಲಿ ಎಫ್ಐಆರ್‌ ದಾಖಲಿಸಿದ್ದೇವೆ.

ಎಲ್ಲೆಲ್ಲಿ ದಾಳಿ?: ಚರ್ಚ್‌ಸ್ಟ್ರೀಟ್‌, ಬ್ರಿಗೇಡ್‌ ರಸ್ತೆ, ಎಂ.ಜಿ.ರಸ್ತೆ, ಕೋರಮಂಗಲ, ಇಂದಿರಾನಗರ, ವೈಟ್‌ಫೀಲ್ಡ್‌, ಎಚ್‌ಎಸ್‌ಆರ್‌ ಲೇಔಟ್‌, ಬಾಣಸವಾಡಿ, ಹೆಣ್ಣೂರು ಆಸುಪಾಸಿನಲ್ಲೇ ಬಹುತೇಕ ಪಬ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಹುಕ್ಕಾಬಾರ್‌ಗಳು ತಲೆ ಎತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲೇ ಹೆಚ್ಚಿನ ದಾಳಿ ನಡೆದಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.