ಜೂನ್ 1ಕ್ಕೆ ಸಿಇಟಿ ಫಲಿತಾಂಶ?
Team Udayavani, May 31, 2018, 6:45 AM IST
ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು (ಸಿಬಿಎಸ್ಇ) 12ನೇ ತರಗತಿ
ಫಲಿತಾಂಶವನ್ನು ಈಗಾಗಲೇ ಪ್ರಕಟಿಸಿರುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ 1ರಂದು
ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಘೋಷಿಸುವ ಸಾಧ್ಯತೆ ಇದೆ. ಸಿಬಿಎಸ್ಇ 12ನೇ ತರಗತಿ
ಫಲಿತಾಂಶ ವಿಳಂಬವಾಗಿರುವುದರಿಂದ ಸಿಇಟಿ ಫಲಿತಾಂಶ ಕೂಡ ವಿಳಂಬವಾಗುತ್ತಿದೆ.
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟಾದ ಸೀಟಿಗೆ ಸಿಇಟಿ ನಡೆಸಲಾಗಿದೆ. ಮೌಲ್ಯಮಾಪನ ಕಾರ್ಯವೂ ಪೂರ್ಣಗೊಂಡಿದೆ. ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆಯಾಗಿ ಹೊಸ ಸಚಿವರೇ ಫಲಿತಾಂಶ ಬಿಡುಗಡೆ ಮಾಡಬೇಕು ಎಂಬ ಸೂಚನೆ ಸರ್ಕಾರದಿಂದ ಬಂದರೆ, ಇನ್ನಷ್ಟು ವಿಳಂಬವಾಗಲಿದೆ.
ಫಲಿತಾಂಶ ಪ್ರಕಟಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಪ್ರಾಧಿಕಾರದ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಸರ್ಕಾರದ ಅನುಮತಿ ಪಡೆದು ಜೂ.1ಕ್ಕೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ಸಿಇಟಿ ಮತ್ತು ನೀಟ್ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಒಟ್ಟೊಟ್ಟಿಗೆ ದಾಖಲೆ ಪರಿಶೀಲನೆ ನಡೆಸಲಾಗುತ್ತದೆ ಎಂದು
ಪ್ರಾಧಿಕಾರ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಪಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…