ಕಾರ್ಮಿಕರ ಬ್ಯಾಂಕ್‌ ಖಾತೆ ವಿವರ ಪರಿಶೀಲನೆ

Team Udayavani, Jul 20, 2018, 10:01 AM IST

blore-3.jpg

ಬೆಂಗಳೂರು: ಪೌರ ಕಾರ್ಮಿಕರ ಬ್ಯಾಂಕ್‌ ಖಾತೆ ವಿವರಗಳನ್ನು ಪರಿಶೀಲಿಸಿ ಅವರ ಖಾತೆಗೆ ನೇರವಾಗಿ ವೇತನ ಪಾವತಿಯಾ ಗುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಎಂದು ಮೇಯರ್‌ ಆರ್‌. ಸಂಪತ್‌ರಾಜ್‌ ತಿಳಿಸಿದರು.

ಬಿಬಿಎಂಪಿ ಪೂರ್ವ ವಲಯ ಕಚೇರಿಗೆ ಗುರುವಾರ ಭೇಟಿ ನೀಡಿ ವೇತನ ವಿಳಂಬ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ
ಮಾತನಾಡಿದ ಅವರು, ಪೌರ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಳಿಕವೂ ಕೆಲವು ಅಧಿಕಾರಿಗಳು ಪೌರಕಾರ್ಮಿಕರ ವಿಚಾರವಾಗಿ ನಿರ್ಲಕ್ಷ್ಯ ವಹಿಸುತ್ತಿರುವುದು ತಿಳಿದು ಬಂದಿದೆ. ಈ ಕುರಿತು ದೂರು ಬಂದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.  ಪೂರ್ವ ವಲಯ ವ್ಯಾಪ್ತಿಯ 44 ವಾರ್ಡ್‌ಗಳ ಮಾಹಿತಿ ಪಡೆದ ಮೇಯರ್‌,

ಹೆಚ್ಚುವರಿಯಾಗಿ ಪೌರಕಾರ್ಮಿಕರ ನೇಮಕ ಮಾಡಿಕೊಂಡಿರುವ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನೇಮಕ ಮಾಡಿಕೊಂಡಿರುವ ಯಾರನ್ನೂ ಸೇವೆಯಿಂದ ತೆಗೆಯಬಾರದು. ಎಲ್ಲಿ ಹೆಚ್ಚಿದ್ದಾರೆ, ಎಲ್ಲಿ ಕಡಿಮೆಯಿದ್ದಾರೆ ಎಂಬ ಮಾಹಿತಿ ಪಡೆದು ಅಗತ್ಯ ಇರುವ ಕಡೆ ನಿಯೋಜಿಸಬೇಕು ಎಂದು ಸೂಚಿಸಿದರು.

ಇತ್ತೀಚೆಗೆ ವಾರ್ಡ್‌ಗಳಲ್ಲಿ ಬೇನಾಮಿ ಪೌರಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ದೂರುಗಳು ಬರುತ್ತಿವೆ. ಅನೇಕರು
ಕೇವಲ ಬಯೋಮೆಟ್ರಿಕ್‌ ಪಂಚ್‌ ಮಾಡಿ ವೇತನ ಪಡೆಯುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿಯನ್ನು ನನಗೆ ನೀಡಬೇಕು ಎಂದು ತಿಳಿಸಿದರು. ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ಉಪಮೇಯರ್‌ ಪದ್ಮಾವತಿ ನರಸಿಂಹ ಮೂರ್ತಿ ಇದ್ದರು.

ಚಾಯ್‌ ಪೇ ಚರ್ಚಾ: ಅಧಿಕಾರಿಗಳು ಪ್ರತಿ ಶುಕ್ರವಾರ ವಲಯದ ಎಲ್ಲಾ ತ್ಯಾಜ್ಯ ವಿಲೇವಾರಿ ಕೇಂದ್ರ ಹಾಗೂ ಸ್ಥಳಗಳಿಗೆ ಭೇಟಿ ನೀಡಬೇಕು. ಪೌರಕಾರ್ಮಿಕರಿಗೆ ಕಾಫಿ-ಟೀ ನೀಡಿ ಅವರ ಕುಂದು ಕೊರತೆಗಳನ್ನು ಆಲಿಸಬೇಕು. ಆರೋಗ್ಯ ಸಮಸ್ಯೆಯಿದ್ದಲ್ಲಿ ಬಿಬಿಎಂಪಿಯಿಂದ ಚಿಕಿತ್ಸೆ ಕೊಡಿಸಬೇಕು. ವಾರಕ್ಕೊಮ್ಮೆ ಈ ರೀತಿಯ ಭೇಟಿ ಕಡ್ಡಾಯ ಎಂದು ಸೂಚಿಸಿದರು. 

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.