ಮುಖ್ಯಮಂತ್ರಿ ಮನೆಗೆ ಬಾಂಬ್‌ ಹುಸಿಕರೆ: ಆರೋಪಿ ಸೆರೆ

Team Udayavani, Dec 19, 2018, 12:25 PM IST

arrest3.jpg

ಬೆಂಗಳೂರು: ಮುಖ್ಯಮಂತ್ರಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸರಿಯಾಗಿ ಸ್ಪಂದಿಸದಕ್ಕೆ ಅಸಮಾಧಾನಗೊಂಡ ಕಟ್ಟಡ ನಿರ್ಮಾಣ ಕಾರ್ಮಿಕನೊಬ್ಬ ಜೆ.ಪಿ.ನಗರದಲ್ಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಮನೆಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಹುಸಿ ಕರೆ ಮಾಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕೊಪ್ಪಳ ಮೂಲದ ಮನ್ಸೂರ್‌ ಬಂಧಿತ. ನಿರ್ಮಾಣ ಹಂತದ ಕಟ್ಟಡ ಕಾರ್ಮಿಕನಾಗಿರುವ ಮನ್ಸೂರ್‌, ಒಂದೂವರೆ ವರ್ಷಗಳಿಂದ ಕೂಡ್ಲು ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. ಈ ಮಧ್ಯೆ ಭಾನುವಾರ ಸಂಜೆ ಕಂಠಪೂರ್ತಿ ಮದ್ಯ ಸೇವಿಸಿದ ಮನ್ಸೂರ್‌, ರಾತ್ರಿ 10 ಗಂಟೆ ಸುಮಾರಿಗೆ “ನಮ್ಮ -100’ಗೆ ಕರೆ ಮಾಡಿ ಜೆ.ಪಿ.ನಗರದಲ್ಲಿರುವ ಸಿಎಂ ಕುಮಾರಸ್ವಾಮಿ ಮನೆಗೆ ಬಾಂಬ್‌ ಇಟ್ಟಿದ್ದೇನೆ.

ಇನ್ನು ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಕರೆ ಸ್ಥಗಿತಗೊಳಿಸಿದ್ದಾನೆ. ಇದರಿಂದ ಆತಂಕಗೊಂಡ ಪೊಲೀಸ್‌ ಸಹಾಯವಾಣಿ ಸಿಬ್ಬಂದಿ ಕೂಡಲೇ ಜೆ.ಪಿ.ನಗರ ಪೊಲೀಸರಿಗೆ  ಮಾಹಿತಿ ರವಾನಿಸಿದ್ದಾರೆ. ಬಳಿಕ ಮುಖ್ಯಮಂತ್ರಿಗಳ ವಿಶೇಷ ಭದ್ರತೆ ಪಡೆ, ಜೆ.ಪಿ.ನಗರ ಪೊಲೀಸರು, ಶ್ವಾನದಳ, ಬಾಂಬ್‌ ನಿಷ್ಕ್ರಿಯ ದಳ ಇಡೀ ಮನೆಯ ಸುತ್ತ-ಮುತ್ತ ಪರಿಶೀಲಿಸಿದೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತಯಾಗಿಲ್ಲ. ಹೀಗಾಗಿ ಹುಸಿ ಕರೆ ಎಂದು ನಿಟ್ಟುಸಿರು ಬಿಟ್ಟಿದ್ದರು. ಈ ಸಂಬಂಧ ಜೆ.ಪಿ.ನಗರ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಸಿಎಂರಿಂದ ಸ್ಪಂದನೆ ಇಲ್ಲ: ನಾಲ್ಕೈದು ಬಾರಿ ಮುಖ್ಯಮಂತ್ರಿ ಜನತಾದರ್ಶನ ಕಾರ್ಯಕ್ರಮದಲ್ಲಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಉಚಿತ ಮನೆ ಕೊಡಿಸುವಂತೆ ಮನವಿ ಮಾಡಿದ್ದೆ. ಆದರೆ, ಸಕರಾತ್ಮಕವಾಗಿ ಸಿಎಂ ಸ್ಪಂದಿಸಲಿಲ್ಲ.

ಅವರು ಸರಿಯಾಗಿ ಪ್ರತಿಕ್ರಿಯಿಸಿದ್ದರೆ, ನನಗೆ ಉಚಿತ ಮನೆಯಾದರೂ ಲಭಿಸುತ್ತಿತ್ತು. ಇದರಿಂದ ಬೇಸರಗೊಂಡು ಎಲ್ಲರ ಗಮನ ಸೆಳೆಯಲು ಕುಡಿದ ಅಮಲಿನಲ್ಲಿ ನನ್ನ ಹೆಸರನ್ನು ಗೋಪಾಲ ಎಂದು ಬದಲಿಸಿಕೊಂಡು “ನಮ್ಮ-100’ಕ್ಕೆ ಕರೆ ಮಾಡಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.