ನಗರದ ಮತದಾರರ ಪಟ್ಟಿ ಪ್ರಕಟ


Team Udayavani, Mar 1, 2018, 11:53 AM IST

voterlist.jpg

ಬೆಂಗಳೂರು: ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬುಧವಾರ ಪ್ರಕಟಗೊಂಡಿದ್ದು, ಒಟ್ಟಾರೆ 87,98,335 ಮತದಾರರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಕ್ಕು ಚಲಾಯಿಸಲಿದ್ದಾರೆ.

ಈ ಸಲ 3,16,467 ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದು, ಇದರಿಂದ ಅಂತಿಮ ಪಟ್ಟಿಯಲ್ಲಿ ನಗರ ಜಿಲ್ಲಾ ವ್ಯಾಪ್ತಿಯಲ್ಲಿ 46,04,190 ಪುರುಷ ಮತ್ತು 41,92,706 ಮಹಿಳೆಯರು, 1,439 ತೃತೀಯ ಲಿಂಗಿಗಳು ಸೇರಿ 87,98,335 ಮತದಾರರು ಇದ್ದಾರೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೇರ್ಪಡೆಗೆ ಈಗಲೂ ಅವಕಾಶ: ಕರಡು ಮತದಾರರ ಪಟ್ಟಿಗೆ ಸೇರ್ಪಡೆ, ತೆಗೆದುಹಾಕುವುದು, ಪರಿಷ್ಕರಣೆ ಸೇರಿದಂತೆ ಒಟ್ಟಾರೆ 5,37,717 ಅರ್ಜಿಗಳು ಸಲ್ಲಿಕೆಯಾಗಿದ್ದವು. ಆ ಪೈಕಿ 4,66,809 ಅರ್ಜಿಗಳು ಸ್ವೀಕೃತಗೊಂಡಿವೆ. ಈ ಪೈಕಿ ಸೇರ್ಪಡೆಗೆ ಸಂಬಂಧಿಸಿದಂತೆ 1.58 ಲಕ್ಷ ಪುರುಷ ಮತ್ತು 1.57 ಲಕ್ಷ ಮಹಿಳೆಯರು ಸೇರಿ 3.16 ಲಕ್ಷ ಅರ್ಜಿಗಳು ಬಂದಿದ್ದವು ಎಂದರು.

ಮಾರ್ಚ್‌ 5ಕ್ಕೆ ಇವಿಎಂ ತಪಾಸಣೆ: ಕಳೆದ ಬಾರಿಗೆ ಹೋಲಿಸಿದರೆ 500 ಮತಗಟ್ಟೆಗಳು ಹೆಚ್ಚಿವೆ. ಇವಿಎಂ ಜತೆಗೆ ಇದೇ ಮೊದಲ ಬಾರಿಗೆ ವಿವಿಪ್ಯಾಟ್‌ಗಳನ್ನು ಪರಿಚಯಿಸಲಾಗುತ್ತಿದೆ. ಒಂದು ಮತಗಟ್ಟೆಯಲ್ಲಿ ಗರಿಷ್ಠ 1,400 ಮತದಾರರು ಇರುತ್ತಾರೆ. ಈಗಾಗಲೇ 2 ಸಾವಿರ ವಿವಿಪ್ಯಾಟ್‌ಗಳು ಬಂದಿವೆ. ಮಾರ್ಚ್‌ 5ರಿಂದ ಮೊದಲ ಹಂತದ ಇವಿಎಂ ತಪಾಸಣೆ ಕಾರ್ಯ ನಡೆಯಲಿದೆ ಎಂದು ಹೇಳಿದರು.

ಚುನಾವಣೆ ಘೋಷಣೆಯಾದ 24 ಗಂಟೆಯೊಳಗೆ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವೊಂದು ಬ್ಯಾನರ್‌, ಬಂಟಿಂಗ್‌, ಫ್ಲೆಕ್ಸ್‌
ಇರುವಂತಿಲ್ಲ. ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ವಿಶೇಷ ಚುನಾವಣಾ ಆಯುಕ್ತ ಮನೋಜ್‌ಕುಮಾರ್‌ ಮೀನಾ, ವಿಶೇಷ ಆಯುಕ್ತರಾದ ಮನೋಜ್‌ ರಾಜನ್‌, ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.