ನಾರಾಯಣ ಗುರು ನಿಗಮ ಸ್ಥಾಪನೆಗೆ ಸಿಎಂ ತಾತ್ವಿಕ ಒಪ್ಪಿಗೆ
Team Udayavani, Jan 5, 2023, 7:39 PM IST
ಬೆಂಗಳೂರು: ನಾರಾಯಣ ಗುರು ನಿಗಮ ಸ್ಥಾಪನೆಗೆ ಕ್ರಮ ತೆಗದುಕೊಳ್ಳುವಂತೆ ಒತ್ತಾಯಿಸಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದು, ನಿಗಮ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ ದೊರೆತಿದೆ.
ಹಿಂದುಳಿದ ಸಮುದಾಯಗಳ ಪೈಕಿ ಒಂದಾದ ಬಿಲ್ಲವ ಸಮಾಜ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಸಂಖ್ಯಾ ಬಾಹುಳ್ಯವನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯ ಎಂದು ಮನವಿ ಮಾಡಲಾಗಿದೆ. ಬಿಲ್ಲವ, ಈಡಿಗ, ನಾಮಧಾರಿ ಎಂಬಿತ್ಯಾದಿ ಉಪನಾಮಗಳನ್ನು ಹೊಂದಿರುವ ಸಮಾಜದ ಎಲ್ಲ ವರ್ಗವನ್ನು ಒಂದೇ ವೇದಿಕೆಯ ಅಡಿಗೆ ತಂದು ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಹಕರಿಸಬೇಕೆಂದು ಸಮಾಜದ ನಿಯೋಗ ಮನವಿ ಮಾಡಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಿಗಮ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಸಿಎಂ ಬೊಮ್ಮಾಯಿ ನಿಗಮ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದು, ಬಜೆಟ್ ನಲ್ಲಿ ಅಧಿಕೃತ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಘುಪತಿ ಭಟ್, ಹರತಾಳು ಹಾಲಪ್ಪ ಹಾಗೂ ಬಿಲ್ಲವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು ಹಾಜರಿದ್ದರು.
ಇದನ್ನೂ ಓದಿ: ವಿಮಾನದಲ್ಲೇ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ; ಡಿಜಿಸಿಎ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ