ಗಾರ್ಮೆಂಟ್ಸ್‌ ಕಾರ್ಮಿಕರ ಮನವೊಲಿಸಿದ ಸಿಎಂ

Team Udayavani, Jun 13, 2018, 11:54 AM IST

garments.jpg

ಬೆಂಗಳೂರು: ಕನಿಷ್ಠ ವೇತನ ನಿಗದಿಗೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದ ಗಾರ್ಮೆಂಟ್‌ ಕಾರ್ಖಾನೆಗಳ ಕಾರ್ಮಿಕರ ಮನವೊಲಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜೂ. 18ರಂದು ಸಮಸ್ಯೆ ಪರಿಹಾರಕ್ಕೆ ಕಾರ್ಖಾನೆಗಳ ಮಾಲಿಕರು ಮತ್ತು ಕಾರ್ಮಿಕರ ಸಭೆ ಕರೆದಿದ್ದಾರೆ. 

ಕಾರ್ಖಾನೆಗಳೂ ಉಳಿಯಬೇಕು ಹಾಗೂ ಕಾರ್ಮಿಕರೂ ಬೀದಿ ಪಾಲಾಗಬಾರದು. ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಲ್ಲಿ ಸರ್ಕಾರ ಮುಕ್ತ ವಾಗಿದೆ. ಯಾರೂ ಬೀದಿಗಿಳಿದು ಪ್ರತಿಭಟನೆ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಈ ಮೊದಲೇ ಕಾರ್ಮಿಕರು ಮತ್ತು ಮಾಲಿಕರೊಂದಿಗೆ ಚರ್ಚೆ ನಡೆಸಬೇಕಿತ್ತು. ಅದೇನೇ ಇರಲಿ, ಈಗ ಎಲ್ಲ ರೀತಿಯ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಮಾಲಿಕರ ಮೇಲೂ ತುಂಬಾ ಒತ್ತಡ ಹಾಕುವಂತಿಲ್ಲ. ಆಗ, ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆ ಇದೆ. ಅದೇ ರೀತಿ, ಕಾರ್ಮಿಕರ ಬೇಡಿಕೆಗಳಿಗೂ ಸ್ಪಂದಿಸಬೇಕು. ಇದಕ್ಕಾಗಿ ಈ ಹಿಂದೆ ಅಧಿಸೂಚನೆ ಹೊರಡಿಸಿದಂತೆ ತಿಂಗಳಿಗೆ 1,587 ರೂ. ಕನಿಷ್ಠ ವೇತನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೂ. 14ರಂದು ನಡೆಸಲು ನಿರ್ಧರಿಸಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕಾರ್ಮಿಕರು ಕೈಬಿಟ್ಟಿದ್ದಾರೆ. 

ಸರ್ಕಾರದಿಂದಲೇ ದ್ರೋಹ; ಆಕ್ರೋಶ: ಇದಕ್ಕೂ ಮುನ್ನ ಗಾರ್ಮೆಂಟ್‌ ಮತ್ತು ಟೆಕ್ಸ್‌ಟೈಲ್‌ ವರ್ಕರ್ ಯೂನಿಯನ್‌ ಅಧ್ಯಕ್ಷೆ ಪ್ರತಿಭಾ ಮಾತನಾಡಿ, ಗಾರ್ಮೆಂಟ್‌ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂಬಂಧ 2018ರ ಫೆಬ್ರವರಿಯಲ್ಲಿ ಕರಡು ಆದೇಶವನ್ನು ಹೊರಡಿಸಲಾಗಿತ್ತು. ಅದರಲ್ಲಿ ತಿಂಗಳಿಗೆ 11,587 ರೂ. ವೇತನ ನಿಗದಿಪಡಿಸಲಾಗಿತ್ತು.

ಆದರೆ, ಏಕಾಏಕಿ ನಂತರದಲ್ಲಿ ಆ ಕರಡು ಆದೇಶವನ್ನು ಹಿಂಪಡೆಯಲಾಗಿದೆ. ಈ ಮೂಲಕ ಸರ್ಕಾರದಿಂದಲೇ ಕಾರ್ಮಿಕರಿಗೆ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ಕೆಲವು ಕಂಪನಿಗಳಲ್ಲಿ ಟೆಕ್ಸ್‌ಟೈಲ್‌, ಸ್ಪಿನ್ನಿಂಗ್‌ ಮಿಲ್‌, ಡೈಯಿಂಗ್‌ ಮತ್ತು ಪ್ರಿಂಟಿಂಗ್‌ ಒಂದೇ ಕಡೆ ಇದೆ.

ಒಬ್ಬರಿಗೆ ವೇತನ ಹೆಚ್ಚಿಸಿದರೆ, ಉಳಿದವರಿಗೂ ಅನ್ವಯಿಸುತ್ತದೆ. ಇದರಿಂದ ಹೊರೆ ಆಗಲಿದ್ದು, ಈ ನಿರ್ಧಾರದಿಂದ ಹಿಂದೆಸರಿಯುವಂತೆ ಮಾಲಿಕರು ಒತ್ತಾಯಿಸಿದರು. ಹಿಂದಿನ ಸರ್ಕಾರದ ಸೂಚನೆಯಂತೆ ಅಧಿಸೂಚನೆ ಹಿಂಪಡೆಯಲಾಗಿದೆ ಎಂದು ಮುಖ್ಯಮಂತ್ರಿಗೆ ಸಮಜಾಯಿಷಿ ನೀಡಿದರು. 

ಆಗ ಕಾರ್ಮಿಕ ಮುಖಂಡರು, ಎಲ್ಲರಿಗೂ ಒಂದೇ ಮಾದರಿಯ ವೇತನ ಈಗಾಗಲೇ ಇದೆ. ಹಾಗಾಗಿ, ಈ ವಾದದಲ್ಲಿ ಹುರುಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, 18ರಂದು ನಡೆಯುವ ಸಭೆಯಲ್ಲಿ ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.

ಪ್ರಕರಣ ವಾಪಸ್‌; ಪರಿಶೀಲನೆ: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಮಿಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು. ಕಾರ್ಖಾನೆಗಳಲ್ಲಿನ ಮಹಿಳಾ ಕಾರ್ಮಿಕರ ಮೇಲೆ ದೌರ್ಜನ್ಯಕ್ಕೆ ತಡೆ, ಉಚಿತ ಬಸ್‌ ಪಾಸ್‌ ಸೌಲಭ್ಯ ಸೇರಿದಂತೆ ಇದೇ ವೇಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕ ಮುಖಂಡರು ಮನವಿ ಮಾಡಿದರು. ಕಾರ್ಮಿಕರ ವಿರುದ್ಧದ ಪ್ರಕರಣ ಹಿಂಪಡೆಯುವ ಬಗ್ಗೆ ಗೃಹ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.