ಟ್ರಿಣ್‌ ಟ್ರಿಣ್‌ ಯೋಜನೆಗೆ ಸಿಎಂ ಎಚ್ಡಿಕೆ ಚಾಲನೆ

Team Udayavani, Mar 5, 2019, 6:36 AM IST

trin-trin.jpg

ಬೆಂಗಳೂರು: ಪರಿಸರ ಸ್ನೇಹಿ ಸಾರಿಗೆ ಉತ್ತೇಜಿಸುವ ಸಲುವಾಗಿ ಬಾಡಿಗೆಗೆ ಸೈಕಲ್‌ಗ‌ಳನ್ನು ಒದಗಿಸುವ ಸಾರ್ವಜನಿಕ ಬೈಸಿಕಲ್‌ ಹಂಚಿಕೆ ವ್ಯವಸ್ಥೆಗೆ (ಪಿಬಿಎಸ್‌) ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಧಾನಸೌಧದ ಮುಂಭಾಗ ಸೋಮವಾರ ಹಸಿರು ನಿಶಾನೆ ತೋರಿದರು.

ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಹಾಗೂ ಬಿಬಿಎಂಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿಬಿಎಸ್‌ ಯೋಜನೆಗೆ ಚಾಲನೆ ನೀಡಿದ ಕುಮಾರಸ್ವಾಮಿ, ನಗರದಲ್ಲಿ ವಾಹನ ದಟ್ಟಣೆ ಹಾಗೂ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಬಾಡಿಗೆ ಆಧಾರದಲ್ಲಿ ಸೈಕಲ್‌ ಒದಗಿಸುವ ಟ್ರಿಣ್‌ ಟ್ರಿಣ್‌ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

“ಮೈಸೂರಿನಲ್ಲಿ ಟ್ರಿಣ್‌ ಟ್ರಿಣ್‌ ಸೈಕಲ್‌ ಸೇವೆ ಯಶಸ್ವಿಯಾಗಿದೆ. ಅದೇ ರೀತಿ ಬೆಂಗಳೂರಿನ ಆಯ್ದ ಕಡೆಗಳಲ್ಲಿ ಆ್ಯಪ್‌ ಮುಖಾಂತರ ಬಾಡಿಗೆಗೆ ಸೈಕಲ್‌ಗ‌ಳು ಲಭ್ಯವಾಗುವ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಂತದಲ್ಲಿ 6000 ಸೈಕಲ್‌ಗ‌ಳು ಬಾಡಿಗೆಗೆ ಸಿಗಲಿವೆ ಎಂದು ತಿಳಿಸಿದರು. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌, ಪಿಬಿಎಸ್‌ ಯೋಜನೆಯ ಮೊದಲ ಹಂತದಲ್ಲಿ ನಗರದ ಕೇಂದ್ರ ಭಾಗದಲ್ಲಿ 400 ಪಾರ್ಕಿಂಗ್‌ ಹಬ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ ಎಂದರು. 

24 ಗಂಟೆ ಲಭ್ಯ: ದಿನದ 24 ಗಂಟೆಯೂ ಬೈಸಿಕಲ್‌ ಸೇವೆ ಲಭ್ಯವಿರಲಿದೆ. ಸೈಕಲ್‌ ಬಳಸಲು ಬಯಸುವವರು ಸಂಬಂಧಪಟ್ಟ ಕಂಪೆನಿಯ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕು. ನಂತರ 100 ರೂ. ಠೇವಣಿ ಇಡಬೇಕು. ಆ್ಯಪ್‌ನಿಂದ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುತ್ತಿದ್ದಂತೆ ಸೈಕಲ್‌ನ ಬೀಗ ತೆರೆದುಕೊಳ್ಳುತ್ತದೆ.

ನಿಗದಿತ ಸ್ಥಳ ತಲುಪಿದ ಬಳಿಕ ಸಮೀಪದ ಪಾರ್ಕಿಂಗ್‌ ಹಬ್‌ನಲ್ಲಿ ಸೈಕಲ್‌ ನಿಲುಗಡೆ ಮಾಡಬಹುದು. ಬಳಕೆ ಅವಧಿಗೆ ತಕ್ಕಂತೆ ಶುಲ್ಕ ಕಡಿತವಾಗುತ್ತದೆ. ಸೈಕಲ್‌ಗ‌ಳು ಜಿಪಿಎಸ್‌ ವ್ಯವಸ್ಥೆ, ಡಾಕ್‌ಲೆಸ್‌ ತಂತ್ರಜ್ಞಾನ (ಮೊಬೈಲ್‌ ಆ್ಯಪ್‌ ನೆರವಿನಿಂದ ಕೀಲಿ ತೆರೆಯುವ) ಹೊಂದಿದೆ. ಪಾರ್ಕಿಂಗ್‌ ಹಬ್‌ ವಿವರ, ಸೈಕಲ್‌ ಲಭ್ಯತೆ, ಬಾಡಿಗೆ ದರ ಎಲ್ಲ ಮಾಹಿತಿ ಆ್ಯಪ್‌ನಲ್ಲಿ ಸಿಗಲಿದೆ. ಮೊದಲ 30 ನಿಮಿಷಕ್ಕೆ 10 ರೂ. ನಂತರದ ಪ್ರತಿ 30 ನಿಮಿಷಕ್ಕೆ 5 ರೂ. ಬಾಡಿಗೆ ವಿಧಿಸಲಾಗಿದೆ.

ಸೈಕಲ್‌ ಮಾದರಿಯಲ್ಲಿರುವ ಬ್ಯಾಟರಿ ಚಾಲಿತ ಇ- ಬೈಕ್‌ಗಳು ಬಾಡಿಗೆಗೆ ಸಿಗಲಿವೆ. ವಿಧಾನಸೌಧ, ಎಂ.ಜಿ.ರಸ್ತೆ, ಕಬ್ಬನ್‌ಪಾರ್ಕ್‌, ಇಂದಿರಾನಗರ, ದೊಮ್ಮಲೂರಿನಲ್ಲಿ “ಯುಲು’ ಕಂಪೆನಿಯ ಇ-ಬೈಕ್‌ ಬಾಡಿಗೆಗೆ ದೊರೆಯುತ್ತವೆ.

ಬಿಬಿಎಂಪಿ ಟೆಂಡರ್‌: ಪಿಬಿಎಸ್‌ ವ್ಯವಸ್ಥೆಯಡಿ ನಗರದ ಕೇಂದ್ರ ಭಾಗದಲ್ಲಿ 400 ಪಾರ್ಕಿಂಗ್‌ ಹಬ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಇದರಲ್ಲಿ 270 ಹಬ್‌ ನಿರ್ಮಾಣಕ್ಕೆ ಬಿಬಿಎಂಪಿ ಟೆಂಡರ್‌ ಆಹ್ವಾನಿಸಿದೆ. ಮೆಟ್ರೋ ನಿಲ್ದಾಣಗಳು ಸೇರಿದಂತೆ ವಿಧಾನಸೌಧ, ಎಂ.ಜಿ.ರಸ್ತೆ, ಇಂದಿರಾನಗರ, ಎಚ್‌ಬಿಆರ್‌ ಲೇಔಟ್‌, ಕೋರಮಂಗಲ, ಎಚ್‌ಎಸ್‌ಆರ್‌ ಲೇಔಟ್‌ ವ್ಯಾಪ್ತಿಯ 28.5 ಕಿ.ಮೀ. ವ್ಯಾಪ್ತಿಯಲ್ಲಿ ಬೈಸಿಕಲ್‌ ನಿಲುಗಡೆ ತಾಣ ನಿರ್ಮಾಣವಾಗಲಿದೆ.

ಪ್ರತಿ 300 ಮೀಟರ್‌ ಅಂತರದಲ್ಲಿ ಸೈಕಲ್‌ ನಿಲುಗಡೆ ತಾಣಗಳಿರಲಿವೆ. “ಯುಲು’ ಕಂಪೆನಿಯು ಕೋರಮಂಗಲ, ಎಚ್‌ಎಸ್‌ಆರ್‌ ಲೇಔಟ್‌, ಇಂದಿರಾನಗರ, ಮೆಟ್ರೋ ನಿಲ್ದಾಣಗಳಲ್ಲಿ ಒಟ್ಟು 2,300 ಸೈಕಲ್‌ಗ‌ಳನ್ನು ಬಾಡಿಗೆಗೆ ಒದಗಿಸುತ್ತಿದೆ.  ಪ್ರತಿ ಸೈಕಲ್‌ಗೆ ವಾರ್ಷಿಕ 50 ರೂ. ಶುಲ್ಕ ನಿಗದಿಪಡಿಸಿ ಪರವಾನಗಿ ನೀಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.